ಬೆಂಗಳೂರು, ಆಗಸ್ಟ್,28,2026 (www.justkannada.in): ಸೆಪ್ಟೆಂಬರ್ 5ರಂದು ಆಯೋಜಿಸಲಾಗಿರುವ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಸಿದ್ಧತೆ ಕುರಿತು ಇಂದು ಬೆಂಗಳೂರಿನ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ನಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಸಭೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹಾಗೂ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರು ಕಾರ್ಯಕ್ರಮದ ಸಿದ್ಧತೆಗಳ ಕುರಿತು ಸಮಾಲೋಚನೆ ನಡೆಸಿದರು.
ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಆಯೋಜಿಸುವುದು, ಕಾರ್ಯಕ್ರಮದ ರೂಪುರೇಷೆ, ವಿವಿಧ ಕಾರ್ಯಕ್ರಮಗಳ ಆಯೋಜನೆ, ಶಿಕ್ಷಕರಿಗೆ ಗೌರವ ಸಲ್ಲಿಸುವ ವಿಧಾನ ಸೇರಿದಂತೆ ಹಲವು ಪ್ರಮುಖ ವಿಚಾರಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಶಿಕ್ಷಕರ ದಿನಾಚರಣೆಯ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳು ಹಾಗೂ ಕಾರ್ಯಕ್ರಮದ ಯಶಸ್ವಿ ಆಯೋಜನೆಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಯಿತು.
ಸಭೆಯಲ್ಲಿ ಕಂಪ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ ಎನ್ ಗಣೇಶ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
Key words: Preparatory, meeting, Teachers’ Day, Minister Madhu Bangarappa
The post ಶಿಕ್ಷಕರ ದಿನಾಚರಣೆ ಸಿದ್ಧತೆ ಕುರಿತು ಪೂರ್ವಭಾವಿ ಸಭೆ: ಅಧಿಕಾರಿಗಳಿಗೆ ಅಗತ್ಯ ಸೂಚನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




