ಬೆಂಗಳೂರು,ಸೆಪ್ಟಂಬರ್,4,2026 (www.justkannada.in): ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ರಾಜ್ಯದ ಜನತೆಗೆ ಶೀಘ್ರವೇ ಬಸ್ ಪ್ರಯಾಣ ದರ ಏರಿಕೆಯ ಶಾಕ್ ತಟ್ಟಲಿದೆ, ಶೀಘ್ರವೇ ಸರ್ಕಾರಿ ಬಸ್ಗಳ ಟಿಕೆಟ್ ದರದ ಪರಿಷ್ಕರಣೆಗೆ ರಾಜ್ಯ ಸರ್ಕಾರ ಮುಂದಾಗಿದೆ.
ಈ ಕುರಿತು ಮಾತನಾಡಿರುವ ಸಾರಿಗೆ ಸಚಿವೆ ಭೈರತಿ ಸುರೇಶ್, ಬಸ್ ಪ್ರಯಾಣಿಕರಿಗೆ ಅತ್ಯಲ್ಪ ಹೊರೆ ಆಗಲಿದೆ ಕೇಂದ್ರ ತೈಲೋತ್ಪನ್ನಗಳ ದರ ಹೆಚ್ಚಳ ಮಾಡಿದೆ. ಹೀಗಿದ್ದರೂ ನಾವು ಬಸ್ ಪ್ರಯಾಣ ದರ ಹೆಚ್ಚಳ ಮಾಡಿಲ್ಲ. ಈ ಮಧ್ಯೆ 4 ಸಾರಿಗೆ ನಿಗಮಗಳಿಗೆ ಸಾವಿರಾರು ಕೋಟಿ ನಷ್ಟವಾಗಿದೆ. ಹೀಗಾಗಿ ಸ್ವಲ್ಪ ಪ್ರಮಾಣದಲ್ಲಿ ದರ ಪರಿಷ್ಕರಣೆ ಮಾಡಲಾಗುತ್ತದೆ ಎಂದರು.
ನಿವೃತ್ತ ಹಿರಿಯ ಐಎಎಸ್ ಅಧಿಕಾರಿ ಅತುಲ್ ತಿವಾರಿ ನೇತೃತ್ವದ ಸಮಿತಿ ದರ ಪರಿಷ್ಕರಣೆ ಸಂಬಂಧಿಸಿದಂತೆ ಅಧ್ಯಯನ ನಡೆಸುತ್ತಿದ್ದು, ಸದ್ಯದಲ್ಲೇ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಿದೆ. ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಜನಸಾಮಾನ್ಯರಿಗೆ ಹೆಚ್ಚು ಹೊರೆಯಾಗದ ರೀತಿಯಲ್ಲಿ ಸ್ವಲ್ಪ ಪ್ರಮಾಣದಲ್ಲಿ ದರ ಪರಿಷ್ಕರಣೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
Key words: Minister, Bhairati Suresh, bus ticket, price, hike, soon
The post ಶೀಘ್ರದಲ್ಲೇ ಬಸ್ ಟಿಕೆಟ್ ದರ ಏರಿಕೆ ಸುಳಿವು ನೀಡಿದ ಸಚಿವ ಭೈರತಿ ಸುರೇಶ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




