12
July, 2025

A News 365Times Venture

12
Saturday
July, 2025

A News 365Times Venture

ಶೂದ್ರರು ವಿದ್ಯಾವಂತರಾಗಿ ಏನಾದ್ರೂ ಬರೆದರೆ ಅವರ ಬಗ್ಗೆ ಕತೆ ಕಟ್ಟಿ ಬಿಡ್ತಾರೆ ಹುಷಾರು- ಸಿಎಂ ಸಿದ್ದರಾಮಯ್ಯ

Date:

ತುಮಕೂರು ಏಪ್ರಿಲ್,19,2025 (www.justkannada.in):  ಹಿಂದೆ ಸಂಸ್ಕೃತ ಕಲಿಯುವವರಿಗೆ, ಶಿಕ್ಷಣ ಕಲಿಯುವ ಇತರರಿಗೆ ಕಾದ ಸೀಸದ ಶಿಕ್ಷೆ ಇತ್ತು. ಆದರೆ ನಮಗೀಗ ಶಿಕ್ಷಣ ಸಿಕ್ಕಿದೆ. ಅನುಭವಗಳನ್ನು ದಾಖಲಿಸಿ. ಪ್ರತಿಭೆ ಯಾರೊಬ್ಬರ ಸ್ವತ್ತು ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಪ್ರಜಾ ಪ್ರಗತಿ ಪತ್ರಿಕೆ,   ಕುರುಬ ಸಾಂಸ್ಕೃತಿಕ‌ ಪರಿಷತ್ ಹಾಗೂ ಶ್ರೀದೇವಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಡೆದ ಕುರುಬ ಸಮಾಜದ ಸಾಂಸ್ಕೃತಿಕ‌ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ, ಕುರುಬ ಸಮುದಾಯದ ಸಂಸ್ಕೃತಿ ದರ್ಶನ ಮಾಲೆಯ 31 ಪುಸ್ತಕಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ನಮ್ಮ ಜ್ಞಾನ ತಿಳಿವಳಿಕೆಯಲ್ಲಿ ಸ್ಪಷ್ಟತೆ ಇರಬೇಕು. ಕರ್ಮ ಸಿದ್ಧಾಂತವನ್ನು ಧಿಕ್ಕರಿಸುವ ವೈಜ್ಞಾನಿಕವಾಗಿ, ವೈಚಾರಿಕವಾಗಿ ಇರಬೇಕು. ಆಗ ಮಾತ್ರ ಗುಲಾಮಗಿರಿಯಿಂದ ಹೊರಗೆ ಬರಬಹುದು. ಸತ್ಯ ಹೇಳುವ ಚಾತಿ ಬೆಳೆಸಿಕೊಳ್ಳಬಹುದು ಎಂದರು.

ಕಾಳಿದಾಸನ ನಾಲಿಗೆ ಮೇಲೆ ಬ್ರಹ್ಮ‌ ಅಕ್ಷರ ಬರೆದದ್ದಕ್ಕೆ ಮಹಾ ಸಾಹಿತಿಯಾದ ಎನ್ನುವ ಮಾತನ್ನೆಲ್ಲಾ ನಂಬಬೇಡಿ. ವಾಲ್ಮೀಕಿ ದರೋಡೆಕೋರ ಆಗಿದ್ದ ಅನ್ನುವುದನ್ನೆಲ್ಲಾ ನಂಬಬೇಡಿ. ಶೂದ್ರರು ವಿದ್ಯಾವಂತರಾಗಿ ಏನಾದರೂ ಮಹತ್ವವಾದದ್ದನ್ನು ಬರೆದರೆ ಅವರ ಬಗ್ಗೆ ಇಂಥಾ ಕತೆಗಳನ್ನು ಕಟ್ಟಿ ಬಿಡ್ತಾರೆ ಹುಷಾರು ಎಂದು ಎಚ್ಚರಿಸಿದರು.

ಬಸವಣ್ಣ 850 ವರ್ಷಗಳ ಹಿಂದೆಯೇ ಅನುಭವ ಮಂಟಪ ರಚಿಸಿ ಸಮ ಸಮಾಜ ನಿರ್ಮಾಣಕ್ಕೆ ಮುನ್ನುಡಿ ಬರೆದಿದ್ದರು.  ಪ್ರಗತಿಪರ ವಿಚಾರಗಳನ್ನು ಇಟ್ಟುಕೊಂಡವರಿಗೆ ನಿರಂತರವಾಗಿ ಸಮಸ್ಯೆ ಬರುತ್ತಲೇ ಇರುತ್ತವೆ. ಹೀಗಾಗಿ ಪ್ರಗತಿಪರ ವಿಚಾರಗಳ ಜೊತೆ ನೀವು ಸದಾ ಗಟ್ಟಿಯಾಗಿ ನಿಲ್ಲಬೇಕು.  ಪ್ರಗತಿಪರ ವಿಚಾರಗಳ ಜೊತೆಗೆ ನಾವು ನಿಲ್ಲದೆ ಸಮ ಸಮಾಜ ಬರಬೇಕು ಎಂದರೆ ಸಾಧ್ಯವಿಲ್ಲ ಎಂದು ವಿವರಿಸಿದರು.

ಜಾತಿಗೆ ಚಲನ ಇಲ್ಲ. ವರ್ಗಕ್ಕೆ ಚಲನೆ ಇಲ್ಲ. ಜಾತಿ ವ್ಯವಸ್ಥೆ ನಿಂತ ನೀರು. ಚಲನೆ ಇಲ್ಲ. ಆರ್ಥಿಕ ಚಲನೆ  ಸಿಕ್ಕಾಗ ಮಾತ್ರ ಜಾತಿಯಲ್ಲೂ ಚಲನೆ ಸಿಗುತ್ತದೆ. ಈ ಚಲನೆ ಸಿಗಬೇಕಾದರೆ ಶಿಕ್ಷಣದ ಅಗತ್ಯ ಇದೆ ಎಂದರು.

ಜಾತಿ ಮುಕ್ತ ಮಾನವೀಯ ಸಮಾಜ ನಿರ್ಮಾಣ ನಮ್ಮ ಸಂವಿಧಾನದ ಆಶಯ ಮತ್ತು ಬದ್ಧತೆ. ಆದರೆ ಇವತ್ತಿಗೂ ಅಸ್ಪೃಶ್ಯತೆ ಹೋಗಿಲ್ಲದಿರುವುದು, ಶೈಕ್ಷಣಿಕ ಸಮಾನತೆ ಇಲ್ಲದಿರುವುದು  ಬೇಸರದ ಸಂಗತಿ. ನಾನು ಶಿಕ್ಷಣ ಪಡೆದಿರುವುದು ನನ್ನ ಸ್ವಾರ್ಥಕ್ಕೆ ಅಲ್ಲ. ಅವಕಾಶ ವಂಚಿತ ಸಮುದಾಯಗಳ ಬಿಡುಗಡೆಗಾಗಿ ವಿದ್ಯೆ ಸಂಪಾದನೆ ಮಾಡಿದ್ದೇನೆ ಎನ್ನುವ ಅಂಬೇಡ್ಕರ್ ಅವರ ಮಾತನ್ನು ಅರ್ಥ ಮಾಡಿಕೊಳ್ಳಬೇಕು. ಸಂವಿಧಾನ ಬರದೇ ಇದ್ದರೆ ನಾವು, ನೀವು ಶಿಕ್ಷಣ ಪಡೆಯಲು ಸಾಧ್ಯವಿರಲಿಲ್ಲ. ಮನುಸ್ಮೃತಿ ಕಾರಣದಿಂದ ಜಾತಿ ಅಸಮಾನತೆ, ಜಾತಿ ಶೋಷಣೆ, ಜಾತಿ ದೌರ್ಜನ್ಯ ಹೆಚ್ಚಾಯಿತು. ಪಟ್ಟಭದ್ರರು  ಹಿಂದಿನ ಜನ್ಮದ ಕರ್ಮ ಎಂದು ನಂಬಿಸಿ ಜನರನ್ನು ವಂಚಿಸುತ್ತಿದ್ದಾರೆ. ಅದಕ್ಕೇ ಬಸವಣ್ಣನವರು ಕರ್ಮ ಸಿದ್ಧಾಂತವನ್ನು ತಿರಸ್ಕರಿಸಿದರು. ನಿಮ್ಮಲ್ಲಿ ಎಷ್ಟು ಜನ ಕರ್ಮ ಸಿದ್ಧಾಂತ ತಿರಸ್ಕರಿಸಿದ್ದೀರೋ ಗೊತ್ತಿಲ್ಲ. ಬ್ರಹ್ಮ ಒಬ್ಬರಿಗೆ ಶಿಕ್ಷಣ, ಮತ್ತೊಬ್ಬರಿಗೆ ಅನಕ್ಷರತೆ ಸಿಗಲಿ ಅಂತ ಬರೆದರಾ? ಒಬ್ಬನಿಗೆ ಬಡವನಾಗು, ಮತ್ತೊಬ್ಬನಿಗೆ ಶ್ರೀಮಂತನಾಗು ಅಂತ ಬ್ರಹ್ಮ ಬರೆದರಾ ? ಒಬ್ಬ ಹೊಟ್ಟೆತುಂಬ ಉಣ್ಣಬೇಕು, ಉಳಿದವರು ಹಸಿವಿನಿಂದ ಬಿದ್ದಿರಬೇಕು ಎಂದು ಬ್ರಹ್ಮ ಬರೆದುಬಿಟ್ಟರಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

ಪಟ್ಟಭದ್ರರು ಬಸವಣ್ಣನವರ ಕ್ರಾಂತಿ ಮುಂದುವರೆಸಲು ಬಿಡಲಿಲ್ಲ. ಆದ್ದರಿಂದ ನಾವು ವೈಜ್ಞಾನಿಕವಾಗಿ, ವೈಚಾರಿಕವಾಗಿ ಚಿಂತಿಸುವುದು ಅಗತ್ಯ ಅಹಿಂದ ಸಮಾಜ ಮತ್ತು ಎಲ್ಲಾ ಜಾತಿ, ಧರ್ಮಗಳ ಬಡತನ, ಹಸಿವು ನಿವಾರಣೆ ಆಗಬೇಕು. ಅನ್ನಕ್ಕಾಗಿ ಯಾರೂ ಇನ್ನೊಬ್ಬರ ಮನೆ ಬಾಗಿಲಿಗೆ ಹೋಗಿ ನಿಲ್ಲಬಾರದು ಎನ್ನುವ ಕಾರಣದಿಂದ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದೆ ಎಂದು ಸ್ಮರಿಸಿದರು.

ಕಾಯಕ, ದಾಸೋಹ ಬಸವಣ್ಣನವರ ತತ್ವ. ಇದನ್ನು ಎಲ್ಲರೂ ಪಾಲಿಸಬೇಕು ಎಂದರು. ಎಲ್ಲಾ ಶ್ರಮಿಕ ವರ್ಗಗಳ ಸಂಸ್ಕೃತಿ, ಆಚಾರ, ವಿಚಾರ ಹೊರಗೆ ಬರಬೇಕು. ಇದಕ್ಕಾಗಿ ಎಲ್ಲರೂ ಸಾಹಿತ್ಯ ರಚನೆಯಲ್ಲಿ ತೊಡಗೇಕು ಎಂದರು.

Key words: punished, education, Record, experiences, Talent, CM, Siddaramaiah

The post ಶೂದ್ರರು ವಿದ್ಯಾವಂತರಾಗಿ ಏನಾದ್ರೂ ಬರೆದರೆ ಅವರ ಬಗ್ಗೆ ಕತೆ ಕಟ್ಟಿ ಬಿಡ್ತಾರೆ ಹುಷಾರು- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೆಲವೇ ಶಾಸಕರ ಬೆಂಬಲ: ಸಿಎಂ ಹೇಳಿಕೆ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಏನು..?

ಬೆಂಗಳೂರು,ಜುಲೈ,11,2025 (www.justkannada.in): ಕೆಲವೇ ಶಾಸಕರ ಬೆಂಬಲ ಡಿಕೆ ಶಿವಕುಮಾರ್ ಗಿದೆ ಎಂಬ...

ದೇವನಹಳ್ಳಿ ಭೂಸ್ವಾಧೀನ ಪ್ರಕ್ರಿಯೆ : ಸಿಎಂ ಸಿದ್ದರಾಮಯ್ಯ “ನಾಟಕ” ಮಾಡುತ್ತಿದ್ದಾರೆ – ಪ್ರಕಾಶ್ ರೈ.

ಮೈಸೂರು, ಜು.೧೧,೨೦೨೫ : ದೇವನಹಳ್ಳಿ ರೈತರು ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕೆಂಬ ಬೇಡಿಕೆಯ...

ಮೈಸೂರು: ಭೂಮಿ ಖರೀದಿಗೆ ಮುಂದಾದ KPTCL: ಭೂಮಾಲೀಕರಿಗೆ ಮನವಿ

ಮೈಸೂರು,ಜುಲೈ, 11, 2025 (www.justkannada.in): ಮೈಸೂರು ವ್ಯಾಪ್ತಿಯಲ್ಲಿ 220/66 ಕೆ.ವಿ ವಿದ್ಯುತ್‌...

ವೈದ್ಯೆಗೆ ವರದಕ್ಷಿಣೆ ಕಿರುಕುಳ, ಗರ್ಭಪಾತ: ಐವರ ವಿರುದ್ದ FIR

ಮೈಸೂರು,ಜುಲೈ,11,2025 (www.justkannada.in): ಮದುವೆಯಾದ ಎರಡೇ ತಿಂಗಳಿಗೆ ವೈದ್ಯೆಗೆ ಕಿರುಕುಳ ನೀಡಿ ಗರ್ಭಪಾತ...