ನವದೆಹಲ,ಜೂನ್,10,2025 (www.justkannada.in): ಹಲವು ವಿಚಾರಗಳ ಬಗ್ಗೆ ಚರ್ಚಿಸಲು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನ ಕಾಂಗ್ರೆಸ್ ಹೈಕಮಾಂಡ್ ದೆಹಲಿಗೆ ಕರೆಸಿಕೊಂಡಿದ್ದು ಇಂದು ಸಭೆ ನಡೆಸಿ ಚರ್ಚೆಗೆ ಮುಂದಾಗಿದೆ.
ಈ ಕುರಿತು ಮಾತನಾಡಿರುವ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಸಚಿವ ಸಂಪುಟ ಪುನಾರಚನೆ ಬಗ್ಗೆ ಮಾಹಿತಿ ಇಲ್ಲ. ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟಿದ್ದು. ಸಿಎಂ ಡಿಸಿಎಂ ದೆಹಲಿಗೆ ಬಂದಿದ್ದು ಯಾಕೆ ಕರೆದಿದ್ದಾರೆ ಅಂತಾ ಗೊತ್ತಿಲ್ಲ. ಹೈಕಮಾಂಡ್ ಜೊತೆ ಸಿಎಂ, ಡಿಸಿಎಂ ಚರ್ಚೆ ನಡೆಸಲಿದ್ದಾರೆ ಎಂದರು.
ಕಾಲ್ತುಳಿತ ಪ್ರಕರಣ ಸಂಬಂಧ ಹೈಕಮಾಂಡ್ ಗೆ ವರದಿ ಕೇಳುವ ಅಧಿಕಾರವಿದೆ . ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಉತ್ತರ ಕೊಡ್ತಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.
Key words: cabinet Restructure, high command, decision, Minister, Sathish Jarakiholi
The post ಸಂಪುಟ ಪುನರ್ ರಚನೆ ಬಗ್ಗೆ ಮಾಹಿತಿ ಇಲ್ಲ: ಎಲ್ಲವೂ ಹೈಕಮಾಂಡ್ ನಿರ್ಧಾರ –ಸಚಿವ ಸತೀಶ್ ಜಾರಕಿಹೊಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.