ಬೆಂಗಳೂರು, ಜೂನ್ 28,2025 (www.justkannada.in): ಆರ್.ಎಸ್.ಎಸ್ ಗೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಮೈಸೂರು ದಸರಾ ಉನ್ನತ ಮಟ್ಟದ ಸಮಿತಿ ಸಭೆಯ ನಂತರ ಮಾಧ್ಯಮಗೋಷ್ಠಿ ನಡೆಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.
ಆರ್.ಎಸ್.ಎಸ್ ನ ದತ್ತಾತ್ರೇಯ ಹೊಸಬಾಳೆ ಅವರು ‘ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದ’ ಮತ್ತು ‘ಜಾತ್ಯತೀತ’ ಪದಗಳನ್ನು ತೆಗೆಯಬೇಕು’ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಆರ್.ಎಸ್.ಎಸ್ ಅವರು ಮನುಸ್ಮೃತಿಯಲ್ಲಿ ನಂಬಿಕೆ ಇಟ್ಟುಕೊಂಡಿರುವವರು ಸಂವಿಧಾನ ಬದಲಾವಣೆಯಾಗಬೇಕು ಹಾಗೂ ಮನುಸ್ಮೃತಿ ಜಾರಿಯಾಗಬೇಕೆಂಬ ಮನಸ್ಥಿತಿ ಇರುವವರು. ಅದನ್ನು ಬಿಟ್ಟು ಅವರಿಗೆ ಇನ್ನೇನು ಹೇಳಲು ಸಾಧ್ಯ. ಸಂವಿಧಾನ ಶಾಸನ ಸಭೆಯಲ್ಲಿ ಚರ್ಚೆಯಾಗಿ ರಚನೆಯಾಗಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಇದರ ಅಧ್ಯಕ್ಷರಾಗಿ ಸಂವಿಧಾನ ರಚಿಸಿದ್ದಾರೆ. ಸಂಸತ್ತಿನಲ್ಲಿ ಇದು ಚರ್ಚೆಯಾಗಿ ಸಂವಿಧಾನ ತಿದ್ದುಪಡಿ ಮಾಡಲಾಗಿದೆ. ಸಂವಿಧಾನ ದತ್ತಾತ್ರೇಯ ಹೊಸಬಾಳೆ ಅವರು ಹೇಳಿದಂತೆ ರಚನೆಯಾಗಿಲ್ಲ ಎಂದರು.
ಹುಲಿಗಳ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮ
ಹುಲಿಗಳ ಸಾವಿನ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ತನಿಖೆ ಕೈಗೊಂಡು ಕೆಲವರನ್ನು ಬಂಧಿಸಲಾಗಿದೆ. ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
Key words: RSS, Constitution, democracy, CM, Siddaramaiah
The post ಸಂವಿಧಾನ, ಪ್ರಜಾಪ್ರಭುತ್ವದ ಮೇಲೆ ಆರ್.ಎಸ್.ಎಸ್. ಗೆ ನಂಬಿಕೆ ಇಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.