ಬೆಂಗಳೂರು,ಮಾರ್ಚ್,3,2025 (www.justkannada.in): ಸರ್ಕಾರದಿಂದ ವೇಗದ ಗತಿಯಲ್ಲಿ ಅಭಿವೃದ್ಧಿ ಕೆಲಸ ಆಗುತ್ತಿದೆ. ಜಿಎಸ್ ಟಿ ಸಂಗ್ರಹದಲ್ಲೂ ರಾಜ್ಯ ಮುಂಚೂಣಿಯಲ್ಲಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನುಡಿದರು.
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಿದ್ದು, ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಜನರಿಗೆ ಅನುಕೂಲವಾಗಿದೆ. ಸರ್ಕಾರದ ಕಟ್ಟ ಕಡೆಯ ವ್ಯಕ್ತಿಯವರೆಗೂ ಯೋಜನೆ ತಲುಪಿಸಿದೆ. ಗ್ಯಾರೆಂಟಿಯಿಂದ ದಿವಾಳಿ ಆಗುತ್ತದೆ ಎಂಬ ಟೀಕೆ ವ್ಯಕ್ತವಾಗಿತ್ತು. ಆದರೆ ಈ ಎಲ್ಲ ಆರೋಪಗಳನ್ನು ಸರ್ಕಾರ ಸುಳ್ಳು ಎಂದು ಸಾಬೀತು ಮಾಡಿದೆ. ಜಿಎಸ್‌ಟಿ ಸಂಗ್ರಹದಲ್ಲೂ ರಾಜ್ಯ ಮುಂಚೂಣಿಯಲ್ಲಿದೆ ಎಂದರು.
ರಾಜ್ಯದಲ್ಲಿ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ರೈತರಿಗೆ ಉತ್ತಮ ಫಸಲು ಬಂದಿದೆ. ಸರ್ಕಾರದ ಕಲ್ಯಾಣ ಯೋಜನೆಗಳಿಂದ ಆತ್ಮಹತ್ಯೆ ಸಂಖ್ಯೆ ಕಡಿಮೆಯಾಗಿದೆ. ರೈತರ ಆತ್ಮಹತ್ಯೆ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆಯಾಗಿದೆ. ರಾಜ ಸರ್ಕಾರ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದರು.
ರೈತರ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ವ್ಯವಸ್ಥೆ ಮಾಡಲಾಗಿದೆ. ಹಿಂದುಳಿದ ವರ್ಗಗಳಿಗೆ ಸಬ್ಸಿಡಿ ಇಂದ ಕುಟುಂಬಗಳಿಗೆ ಲಾಭವಾಗಿದೆ. ಆರ್ಥಿಕ ಸಾಮಾಜಿಕ ಮತ್ತು ಸಾಂಸ್ಕೃತಿಕವಾಗಿ ಅಭಿವೃದ್ದಿಯತ್ತ ಸರ್ಕಾರ ದಾಪುಗಾಲಿಟ್ಟಿದೆ. ಅಲ್ಲದೆ ಕತ್ತಲಿನಲ್ಲಿ ಇರುವವರಿಗೆ ಬೆಳಕು ತೋರಿಸುವ ಕೆಲಸ ಆಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬಣ್ಣಿಸಿದರು.
Key words: Government, development, Session, Governor, Thawar Chand Gehlot
The post ಸರ್ಕಾರದಿಂದ ವೇಗದ ಗತಿಯಲ್ಲಿ ಅಭಿವೃದ್ಧಿ ಕೆಲಸ: ಜಿಎಸ್ ಟಿ ಸಂಗ್ರಹದಲ್ಲೂ ರಾಜ್ಯ ಮುಂಚೂಣಿ- ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.