ಬೆಂಗಳೂರು,ಮಾರ್ಚ್,12,2025 (www.justkannada.in): ಕಾವೇರಿ-2.0 ತಂತ್ರಾಂಶದೊಂದಿಗೆ ಇ-ಆಸ್ತಿ ತಂತ್ರಾಂಶವನ್ನು ಸಂಯೋಜನೆಯನ್ನು ಕಡ್ಡಾಯವಾಗಿ ಅನುಷ್ಠಾನದಲ್ಲಿ ತರುವ ಕುರಿತು ನೋಂದಣಿ ಮತ್ತು ಮುದ್ರಣ ಇಲಾಖೆ ಆದೇಶ ಹೊರಡಿಸಿದೆ.
ಈ ಕುರಿತು ಆದೇಶ ಹೊರಡಿಸಿರುವ ನೋಂದಣಿ ಮಹಾ ಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರು, ಪ್ರಸ್ತಾವಿತ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ ಸರ್ಕಾರದ ಸುತ್ತೋಲೆಗಳ ಹಾಗೂ ಈ ಕಛೇರಿಯ ಸಮಸಂಖ್ಯೆ ಪತ್ರಗಳ ನಿರ್ದೇಶನನ್ನಯ ರಾಜ್ಯಾದ್ಯಂತ ಎಲ್ಲಾ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಗ್ರಾಮ ಪಂಚಾಯತಿ ಅಧೀನದಲ್ಲಿನ ಸ್ವತ್ತುಗಳಿಗೆ ಕಡ್ಡಾಯವಾಗಿ ಇ-ಆಸ್ತಿ, ಇ-ಸ್ವತ್ತು ಬಳಸಿ ನೋಂದಣಿ ಪ್ರಕ್ರಿಯೆ ನಡೆಸಲು ಸೂಚಿಸಲಾಗಿದೆ. ಆದಾಗ್ಯೂ ಕೆಲವೊಂದು ಉಪನೋಂದಣಾಧಿಕಾರಿಗಳು ಇ-ಖಾತ ಇದ್ದಾಗ್ಯೂ ತಪ್ಪಾಗಿ ಅರ್ಥೈಸಿಕೊಂಡು, ಗೊಂದಲ ಸೃಷ್ಟಿ ಮಾಡುತ್ತಿರುವುದು ಕೇಂದ್ರ ಕಛೇರಿಯ ಗಮನಕ್ಕೆ ಬಂದಿದೆ.
ಈ ಮೂಲಕ ರಾಜ್ಯದಲ್ಲಿನ ಉಪನೋಂದಣಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸ್ಥಿರಾಸ್ತಿಗಳಿಗೆ ಕಡ್ಡಾಯವಾಗಿ ಇ-ತಂತ್ರಾಂಶದಿಂದ ನಿಶ್ಚಿತವಾದ ಇ-ಸ್ವತ್ತು ಹಾಗೂ ಇ-ಆಸ್ತಿಯನ್ನು ಇ-ತಂತ್ರಾಂಶದಿಂದ ಮಾಹಿತಿ ಪಡೆದು ‘ಎ’ ಖಾತೆ ಅಥವಾ ‘ಬಿ’ ಖಾತೆ ಇದ್ದರೂ ಸಹ ನೋಂದಣಿ ಮಾಡಲು ಸೂಚಿಸಲಾಗಿದೆ.
ಉಲ್ಲೇಖಿತ ಸರ್ಕಾರದ ಸುತ್ತೋಲೆ ಹಾಗೂ ಪತ್ರಗಳಲ್ಲಿನ ನಿರ್ದೇಶನಗಳನ್ನು ಉಲ್ಲಂಘಿಸಿ ನೋಂದಣಿ ಮಾಡಲು ಅವಕಾಶವಿರುವುದಿಲ್ಲ. ಸರ್ಕಾರದ ಸುತ್ತೋಲೆ ಹಾಗೂ ಕೇಂದ್ರ ಕಛೇರಿಯ ನಿರ್ದೇಶನಗಳನ್ನು ಉಲ್ಲಂಘಿಸಿ ಸ್ಥಿರಾಸ್ತಿಗಳನ್ನು ನೋಂದಾಯಿಸುವ ಉಪನೋಂದಣಾಧಿಕಾರಿಗಳ ವಿರುದ್ಧ KCSR ನಿಯಮಗಳಡಿಯಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
Key words: Mandatory, implementation, e-Asthi software, Cauvery-2.0 software
The post ಸರ್ಕಾರದ ಸುತ್ತೋಲೆ, ನಿರ್ದೇಶನಗಳನ್ನು ಉಲ್ಲಂಘಿಸಿ ಸ್ಥಿರಾಸ್ತಿ ನೋಂದಣಿ ಮಾಡಿದ್ರೆ ಶಿಸ್ತು ಕ್ರಮ- ಉಪನೋಂದಣಾಧಿಕಾರಿಗಳಿಗೆ ಎಚ್ಚರಿಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.