ಬೆಂಗಳೂರು, ಆಗಸ್ಟ್,13,2025 (www.justkannada.in): ಸರ್ಕಾರಿ ಜಮೀನು ಕಬಳಿಸುವ ಭೂಗಳ್ಳರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡ ತಿಳಿಸಿದರು.
ವಿಧಾನಪರಿಷತ್ ನಲ್ಲಿ ಸದಸ್ಯ ರಾಮೋಜಿ ಗೌಡ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣಭೈರೇಗೌಡ, ಭೂಗಳ್ಳರ ವಿರುದ್ದ ಕಠಿಣ ಕಾನೂನು ಕ್ರಮ ಜರುಗಿಸಲು ತಿದ್ದುಪಡಿ ಮಾಡಿರುವ ಕಾಯ್ದೆ ಈ ತಿಂಗಳ ಅಂತ್ಯದೊಳಗೆ ಜಾರಿಗೆ ಬರಲಿದೆ. ಇದುವರೆಗೂ ಸರ್ಕಾರಿ ಜಮೀನು ಕಬಳಿಸಿದವರು ಕಾನೂನಿನಿಂದ ತಪ್ಪಿಸಿಕೊಳ್ಳುತ್ತಿದ್ದರು. ನ್ಯಾಯಾಲಯದಿಂದ ತಡೆಯಾಜ್ಞೆ ತರುವುದು ಸೇರಿದಂತೆ ಹಲವು ದಾರಿಗಳಿಂದ ನುಣುಚಿಕೊಳ್ಳುತ್ತಿದ್ದರು. ನೂತನ ಕಾಯ್ದೆಯಲ್ಲಿ ಹಲವಾರು ಕಠಿಣ ಕಾನೂನು ಕ್ರಮಗಳನ್ನು ಸೇರ್ಪಡೆ ಮಾಡಿದ್ದೇವೆ ಎಂದರು.
ಹಾಗೆಯೇ ಯಾರೇ ಆಗಲಿ ಸರ್ಕಾರಿ ಜಮೀನು ಕಬಳಿಸಿರುವುದು ಅಥವಾ ಕಬಳಿಸುವವರಿಗೆ ಪ್ರತ್ಯಕ್ಷವಾಗಿ , ಪರೋಕ್ಷವಾಗಿ ಸಹಾಯ ಮಾಡುವ ಅಧಿಕಾರಿಗಳ ವಿರುದ್ದವೂ ಕಾನೂನು ಕ್ರಮ ಕೈಗೊಳ್ಳಲು ಹೊಸ ಕಾನೂನಿನಲ್ಲಿ ಅವಕಾಶವಿದೆ ಎಂದು ಸಚಿವ ಕೃಷ್ಣಭೈರೇಗೌಡ ತಿಳಿಸಿದರು.
Key words: Strict, legal action, against, government land, acquisition
The post ಸರ್ಕಾರಿ ಜಮೀನು ಕಬಳಿಸುವ ಭೂಗಳ್ಳರ ವಿರುದ್ದ ಕಠಿಣ ಕಾನೂನು ಕ್ರಮ- ಸಚಿವ ಕೃಷ್ಣಭೈರೇಗೌಡ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




