12
July, 2025

A News 365Times Venture

12
Saturday
July, 2025

A News 365Times Venture

ಸವದತ್ತಿ ಯಲ್ಲಮ್ಮ ಗುಡ್ಡ ಅಭಿವೃದ್ಧಿಗೆ ಸಮಗ್ರ ಯೋಜನೆ: ಸಚಿವ ಎಚ್.ಕೆ ಪಾಟೀಲ್

Date:

ಬೆಂಗಳೂರು,ಏಪ್ರಿಲ್,6,2025 (www.justkannada.in):  ಉತ್ತರ ಕರ್ನಾಟಕದ ಪ್ರಮುಖ ಶ್ರದ್ಧಾಕೇಂದ್ರ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ಭಕ್ತರ ಅನುಕೂಲಕ್ಕಾಗಿ ಮೂಲಸೌಕರ್ಯ ಕಲ್ಪಿಸುವ ಸಮಗ್ರ ಯೋಜನೆ ಸಿದ್ಧಗೊಂಡಿದ್ದು, ಕಾಲಮಿತಿಯಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ  ತಿಳಿಸಿದರು.

ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ರಾಜ್ಯಮಟ್ಟದ ಸಮಿತಿಯ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಪ್ರಸ್ತುತ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ಸವದತ್ತಿಯಲ್ಲಮ್ಮನ ಗುಡ್ಡದಲ್ಲಿ ಸಮಗ್ರ ಅಭಿವೃದ್ಧಿಯ ಬದ್ಧತೆಯನ್ನು ಪ್ರಕಟಿಸಲಾಗಿತ್ತು. ಭಾರತ ಹುಣ್ಣಿಮೆಯ ಸಂದರ್ಭದಲ್ಲಿ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ಬದಲಾವಣೆ ಕಾಣುತ್ತೆವೆ ಎಂಬುದು ಭಕ್ತರಿಗೆ ವಿಧಿತವಾಯಿತು ಎಂದು ಸಚಿವರು ಬೆಳಗಾವಿ ಜಿಲ್ಲಾ ಆಡಳಿತಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕಳೆದ ಭಾರತ ಹುಣ್ಣಿಮೆ ಸಂದರ್ಭದಲ್ಲಿ 3 ಲಕ್ಷ ಭಕ್ತರಿಗೆ ಮಜ್ಜಿಗೆ ದಾಸೋಹ ಕೈಗೊಂಡಿದ್ದು, ಭಕ್ತರನ್ನು ಸರ್ಕಾರ ಕಾಳಜಿ ಮಾಡುತ್ತಿದೆ ಎಂಬ ಭಾವನೆ ಮೂಡಿತು ಎಂದು ಸಚಿವರು ಹೇಳಿದರು.

ಈ ಸಲ ಭಾರತ ಹುಣ್ಣಿಮೆಯ ಸಂದರ್ಭದಲ್ಲಿ ಎಲ್.ಇ.ಡಿ ಸ್ಕ್ರೀನ್ಗಳನ್ನು ಅಳವಡಿಸಿದ್ದರಿಂದ ಭಕ್ತಾದಿಗಳು ಆ ಸ್ಕ್ರೀನ್ಗಳಿಗೆ ಪೂಜೆ ಮಾಡಿದ್ದು ಸಹ ಕಂಡು ಬಂದಿತು ಎಂದು ಸಚಿವರು ಹೇಳಿದರು.

ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆ, ತಿರುಪತಿ ಮಾದರಿಯಲ್ಲಿ ಕ್ಯೂ ಕಾಂಪ್ಲೆಕ್ಸ್ ಉಳಿದುಕೊಳ್ಳಲು ವ್ಯವಸ್ಥೆ, ಚಕ್ಕಡಿ ಕಟ್ಟಿಕೊಂಡು ಬರುವವರಿಗೆ ಪಶು ಆಹಾರಕ್ಕಾಗಿ ಮೇವು ದಾಸೋಹ, ರಿಂಗ್ ರಸ್ತೆ, ವಯಸ್ಸಾದವರಿಗೆ ದರ್ಶನಕ್ಕೆ ವ್ಯವಸ್ಥೆ ಮುಂತಾದವು ಸೇರಿದಂತೆ ಎಲ್ಲಾ ಮೂಲಸೌಕರ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಸವದತ್ತಿ ಶಾಸಕ ವಿಶ್ವಾಸ ವೈದ್ಯ, ಪ್ರವಾಸೋದ್ಯಮ ಕಾರ್ಯದರ್ಶಿ, ಸಲ್ಮಾ ಫಾಹೀಮ್, ಧಾರ್ಮಿಕ ದತ್ತಿ ಇಲಾಖೆ ಆಯುಕ್ತ ಟಿ.ವೆಂಕಟೇಶ, ಬೆಳಗಾವಿ ಜಿಲ್ಲಾಧಿಕಾರಿ ರೋಶನ್ ಮುಂತಾದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

key words: Savadatti Yallamma Hill, Development, Minister HK Patil

The post ಸವದತ್ತಿ ಯಲ್ಲಮ್ಮ ಗುಡ್ಡ ಅಭಿವೃದ್ಧಿಗೆ ಸಮಗ್ರ ಯೋಜನೆ: ಸಚಿವ ಎಚ್.ಕೆ ಪಾಟೀಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೆಲವೇ ಶಾಸಕರ ಬೆಂಬಲ: ಸಿಎಂ ಹೇಳಿಕೆ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಏನು..?

ಬೆಂಗಳೂರು,ಜುಲೈ,11,2025 (www.justkannada.in): ಕೆಲವೇ ಶಾಸಕರ ಬೆಂಬಲ ಡಿಕೆ ಶಿವಕುಮಾರ್ ಗಿದೆ ಎಂಬ...

ದೇವನಹಳ್ಳಿ ಭೂಸ್ವಾಧೀನ ಪ್ರಕ್ರಿಯೆ : ಸಿಎಂ ಸಿದ್ದರಾಮಯ್ಯ “ನಾಟಕ” ಮಾಡುತ್ತಿದ್ದಾರೆ – ಪ್ರಕಾಶ್ ರೈ.

ಮೈಸೂರು, ಜು.೧೧,೨೦೨೫ : ದೇವನಹಳ್ಳಿ ರೈತರು ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕೆಂಬ ಬೇಡಿಕೆಯ...

ಮೈಸೂರು: ಭೂಮಿ ಖರೀದಿಗೆ ಮುಂದಾದ KPTCL: ಭೂಮಾಲೀಕರಿಗೆ ಮನವಿ

ಮೈಸೂರು,ಜುಲೈ, 11, 2025 (www.justkannada.in): ಮೈಸೂರು ವ್ಯಾಪ್ತಿಯಲ್ಲಿ 220/66 ಕೆ.ವಿ ವಿದ್ಯುತ್‌...

ವೈದ್ಯೆಗೆ ವರದಕ್ಷಿಣೆ ಕಿರುಕುಳ, ಗರ್ಭಪಾತ: ಐವರ ವಿರುದ್ದ FIR

ಮೈಸೂರು,ಜುಲೈ,11,2025 (www.justkannada.in): ಮದುವೆಯಾದ ಎರಡೇ ತಿಂಗಳಿಗೆ ವೈದ್ಯೆಗೆ ಕಿರುಕುಳ ನೀಡಿ ಗರ್ಭಪಾತ...