16
July, 2025

A News 365Times Venture

16
Wednesday
July, 2025

A News 365Times Venture

ಸಾಧಕರ ಸಂದೇಶಗಳನ್ನು ಸಮಾಜಕ್ಕೆ ತಿಳಿಸಲು ವಿವಿಧ ಜಯಂತಿಗಳ ಆಚರಣೆ –ಡಾ.ಪಿ. ಶಿವರಾಜು

Date:

ಮೈಸೂರು ಏಪ್ರಿಲ್, 16,2025 (www.justkannada.in):  ವಿವಿಧ ಜಯಂತಿಗಳನ್ನು ಅರ್ಥಪೂರ್ಣವಾಗಿ ಹಾಗೂ   ಸಾಧಕರ ಸಂದೇಶಗಳನ್ನು ಸಮಾಜಕ್ಕೆ ಸಾರಲು ಜೀವನ ಮೌಲ್ಯಗಳನ್ನು ಸಮಾಜಕ್ಕೆ ನೀಡುವ ಸಲುವಾಗಿ ಜಯಂತಿಗಳ ಆಚರಣೆ ಮಾಡಲಾಗುತ್ತಿದೆ ಎಂದು ಅಪರ  ಜಿಲ್ಲಾಧಿಕಾರಿ ಡಾ. ಪಿ ಶಿವರಾಜು ಅವರು ತಿಳಿಸಿದರು.

ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ವಿವಿಧ ಜಯಂತಿಗಳಾದ ಶಂಕರಾಚಾರ್ಯ ಜಯಂತಿ, ಭಗೀರಥ ಜಯಂತಿ ಹಾಗೂ ಶಿವ ಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿಗಳ  ಆಚರಣೆ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮೇ 02  ರಂದು  ಶಂಕರಾಚಾರ್ಯ ಜಯಂತಿಯನ್ನು ಕಲಾಮಂದಿರದಲ್ಲಿ ಇರುವ ಕಿರು ರಂಗಮಂದಿರದಲ್ಲಿ ಬೆಳಗ್ಗೆ 10 ಗಂಟೆಯಿಂದ ಗೀತಾ ಗಾಯನ ಏರ್ಪಡಿಸಲಾಗುವುದು. ಬೆಳಗ್ಗೆ 11.30 ಗಂಟೆಗೆ ವೇದಿಕೆ ಕಾರ್ಯಕ್ರಮ  ಆಚರಣೆ ಮಾಡಲಾಗುವುದು. ಮೇ 04 ರಂದು ಭಗೀರಥ ಜಯಂತಿಯನ್ನು ಕರ್ನಾಟಕ ಕಲಾ ಮಂದಿರದಲ್ಲಿ ಆಚರಣೆ ಬೆಳಗ್ಗೆ 11.30 ಗಂಟೆಗೆ  ಮಾಡಲಾಗುವುದು. ಬೆಳಗ್ಗೆ 10.30 ಗಂಟೆಯಿಂದ ವೇದಿಕೆ ಮೇಲೆ ಗೀತಾ ಗಾಯನ ಏರ್ಪಡಿಸಲಾಗುವುದು. ಅಂದು ಬೆಳಗ್ಗೆ  9.30 ಗಂಟೆಗೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿಯಿಂದ ಮೆರವಣಿಗೆ ಪ್ರಾರಂಭ ಮಾಡಲಾಗುವುದು. ಮೇ 10 ರಂದು ಶಿವ ಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಕಿರು ರಂಗಮಂದಿರದಲ್ಲಿ ಬೆಳಗ್ಗೆ 11.30 ಗಂಟೆಗೆ ಆಚರಣೆ ಮಾಡಲಾಗುವುದು ಬೆಳಗ್ಗೆ 10 ಗಂಟೆಯಿಂದ ಗೀತಾ ಗಾಯನ ಏರ್ಪಡಿಸಲಾಗುವುದು ಎಂದು ಡಾ.ಪಿ. ಶಿವರಾಜು ತಿಳಿಸಿದರು.

ಜಯಂತಿಗಳ ಆಚರಣೆ ಕೇವಲ ಒಂದು ಸಮುದಾಯಕ್ಕೆ ಸೀಮಿತವಲ್ಲ. ಎಲ್ಲಾ ಸಮುದಾಯದವರು ಸೇರಿ ಜಯಂತಿಗಳ ಆಚರಣೆ ಮಾಡಬೇಕು. ಜಯಂತಿಗಳ ಆಚರಣೆಯ ಉದ್ದೇಶ ಮಹನೀಯರ ಆದರ್ಶಗಳನ್ನು ಪಾಲನೆ ಮಾಡುವುದು ಆಗಿದೆ ಎಂದು ತಿಳಿಸಿದರು.

ಮೆರವಣಿಗೆ ಪ್ರಾರಂಭವಾಗುವ ಸ್ಥಳವಾದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಶಾಮಿಯಾನ ಸ್ವಚ್ಚತೆ ಹಾಗೂ ಚೇರ್ ಗಳ ವ್ಯವಸ್ಥೆ ಹಾಗೂ ಜಯಂತಿಗಳು ನಡೆಯುವ ಸ್ಥಳದ ಸ್ವಚ್ಚತೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ, ತಳಿರು ತೋರಣ, ಹಾಗೂ ಊಟದ ಜಾಗಕ್ಕೆ ಶಾಮಿಯಾನ ವ್ಯವಸ್ಥೆಯನ್ನು ಮೈಸೂರು  ಮಹಾನಗರ ಪಾಲಿಕೆಯ ವತಿಯಿಂದ ಮಾಡಬೇಕು. ಸಮುದಾಯದ ಮುಖಂಡರು ತಮ್ಮ ತಮ್ಮ ಸಮುದಾಯದ ಬಡವರಿಗೆ ಸಹಾಯ ಮಾಡಬೇಕು. ಸಮುದಾಯದ ಮಕ್ಕಳಿಗೆ ಶೈಕ್ಷಣಿಕ ಸಹಾಯ ಮಾಡಬೇಕು. ಜಯಂತಿಗಳನ್ನು ಆಚರಣೆ ಮಾಡುವುದು ಅವರ ಆಚಾರ ವಿಚಾರಧಾರೆಗಳನ್ನು ಯುವ ಜನತೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಆಗ ಜಯಂತಿಗಳನ್ನು ಆಚರಣೆ ಮಾಡಿದಕ್ಕೆ ಒಂದು ಅರ್ಥ ಬರುತ್ತದೆ ಎಂದು ಡಾ.ಪಿ. ಶಿವರಾಜು ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಿ. ಎಂ ಸುದರ್ಶನ್ ಅವರು ಮಾತನಾಡಿ ಜಯಂತಿಗಳ ಆಚರಣೆಗೆ ಶಿಷ್ಟಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಿಸಿ ಜನಪ್ರತಿನಿಧಿಗಳಿಗೆ ಮುಖಂಡರಿಗೆ ಆಹ್ವಾನ ನೀಡಲಾಗುವುದು. ಮೆರವಣಿಗೆಗೆ ಕಲಾ ತಂಡಗಳನ್ನು ನೀಡಲಾಗುವುದು. ಕಲಾಮಂದಿರದಲ್ಲಿ ಗೀತಾ ಗಾಯನ ಏರ್ಪಡಿಸಲಾಗುವುದು ಎಂದು ತಿಳಿಸಿದರು.

ತಮ್ಮ ತಮ್ಮ ಜಯಂತಿಗಳ ಆಚರಣೆಯ ದಿವ್ಯ ಸಾನಿಧ್ಯಕ್ಕೆ ತಮ್ಮ ಸಮುದಾಯದ ಸ್ವಾಮೀಜಿಗಳ ಹೆಸರನ್ನು ಆಯ್ಕೆ ಮಾಡಿ ಒಂದೆರಡು ದಿನಗಳಲ್ಲಿ ನೀಡಲಾಗುವುದು. ಜಯಂತಿಯಲ್ಲಿ ವಿಶೇಷ ಉಪನ್ಯಾಸ  ನೀಡಲು ಸಂಪನ್ಮೂಲ ವ್ಯಕ್ತಿಗಳನ್ನು ಆಯ್ಕೆ ಮಾಡಿ ಹೆಸರನ್ನು ನೀಡಲಾಗುವುದು ಎಂದು ಸಮುದಾಯದ ಮುಖಂಡರು  ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಿವಿಧ ಜಯಂತಿಗಳ ಆಚರಣೆಯ ಸಂಬಂಧ ಸಮುದಾಯಗಳ ಮುಖಂಡರು ಉಪಸ್ಥಿತರಿದ್ದರು.

Key words: Celebration, jayanti, convey, messages, society – Mysore, Dr. P. Shivaraju

The post ಸಾಧಕರ ಸಂದೇಶಗಳನ್ನು ಸಮಾಜಕ್ಕೆ ತಿಳಿಸಲು ವಿವಿಧ ಜಯಂತಿಗಳ ಆಚರಣೆ –ಡಾ.ಪಿ. ಶಿವರಾಜು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೆ.ಆರ್ ಆಸ್ಪತ್ರೆಗೆ ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರು ಭೇಟಿ, ಪರಿಶೀಲನೆ

ಮೈಸೂರು ಜುಲೈ,16,2025 (www.justkannada.in): ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ...

ಸರ್ಕಾರದ ಕ್ರಮಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ: ಮುಜರಾಯಿ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ

ಬೆಂಗಳೂರು, ಜುಲೈ,16, 2025 (www.justkannada.in): ಗಾಳಿ ಆಂಜನೇಯ ದೇವಾಲಯವನ್ನ ಮುಜರಾಯಿ ಇಲಾಖೆ...

ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಮೊದಲ ಸಭೆ ಯಶಸ್ವಿ:ಮಹತ್ವದ ಮಾಹಿತಿ ಹಂಚಿಕೊಂಡ ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು,ಜುಲೈ,16,2025 (www.justkannada.in): ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ...

ವಿಜಯಪುರ: ಬಂಜಾರ ಕಸೂತಿ ಸಂಸ್ಥೆ ಕ್ಷೇತ್ರಾಧ್ಯಯನಕ್ಕೆ ಎನ್.ಐ.ಎಫ್.ಟಿ. ವಿದ್ಯಾರ್ಥಿಗಳು

ವಿಜಯಪುರ,ಜುಲೈ,16,2025 (www.justkannada.in): ಜಿಲ್ಲೆಯಲ್ಲಿರುವ ಬಂಜಾರ ಕಸೂತಿ ಸಂಸ್ಥೆಗೆ ಬೆಂಗಳೂರಿನ ನ್ಯಾಷನಲ್‌ ಇನ್ಸ್ಟಿಟ್ಯೂಟ್‌...