ಬೆಂಗಳೂರು, ಜುಲೈ,15,2025 (www.justkannada.in): 2025-26ನೇ ಸಾಲಿಗೆ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ವತಿಯಿಂದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿದೇಶಿ ವ್ಯಾಸಂಗಕ್ಕೆ ಸಾಲ ಸೌಲಭ್ಯ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಸಕ್ತ ವಿಧ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಹಾಗೂ ಗ್ರಾಮಒನ್, https://gramaone.karnataka.gov.in ಬೆಂಗಳೂರು ಒನ್ https://www.karnatakaone.gov.in ಮತ್ತು ಕರ್ನಾಟಕ ಒನ್ https://k1app.karnatakaone.gov.in ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.
ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ & 3ಬಿ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ ಗರಿಷ್ಠ 15.00 ಲಕ್ಷ ರೂ.ಗಳ ಮಿತಿಯಲ್ಲಿರಬೇಕು. ವಿದ್ಯಾರ್ಥಿಗಳು ಅರ್ಹತಾ ಪರೀಕ್ಷೇಯಲ್ಲಿ ಶೇ.60ಕ್ಕಿಂತಲೂ ಹೆಚ್ಚಿನ ಅಂಕ ಪಡೆದಿರಬೇಕು. QS World Ranking 1000 ರೊಳಗೆ ಬರುವ ವಿಶ್ವ ವಿದ್ಯಾನಿಲಯಗಳಲ್ಲಿ ಪ್ರವೇಶ ಪಡೆದಿರಬೇಕು. ವಾರ್ಷಿಕ ಗರಿಷ್ಟ 25.00 ಲಕ್ಷ ಹಾಗೂ ಪೂರ್ಣ ಕೋರ್ಸ್ ನ ಅವಧಿಗೆ ರೂ.50.00 ಲಕ್ಷಗಳ ಸಾಲವನ್ನು ಬಡ್ಡಿರಹಿತವಾಗಿ ಒದಗಿಸಲಾಗುವುದು. ಸಾಲದ ಭದ್ರತೆಗೆ ನಿಗಮಕ್ಕೆ ಅರ್ಜಿದಾರ/ಜಾಮೀನುದಾರ/ಪೋಷಕರ ಸ್ಥಿರಾಸ್ತಿಯನ್ನು ನಿಗಮಕ್ಕೆ ಆಧಾರ ಮಾಡಬೇಕು. ಅರ್ಜಿಯ ಜೋತೆಯಲ್ಲಿ ವಿದೇಶಿ ವಿಶ್ವ ವಿದ್ಯಾಲಯದ ಪ್ರವೇಶ ಪತ್ರ ವಿದ್ಯಾರ್ಥಿಯ ವಿಸಾ ಪಾಸ್ ಪೋರ್ಟ್ ಮತ್ತು ಏರ್ ಟಿಕೆಟ್ ಪ್ರತಿ ಒದಗಿಸಬೇಕು. ಸ್ನಾತಕೋತ್ತರ ಕೊರ್ಸ್ ಗಳಿಗೆ ವಯೋಮಿತಿ 32, ಪಿ.ಎಚ್.ಡಿ ಕೊರ್ಸಗಳಿಗೆ 35 ವರ್ಷಗಳ ವಯೋಮಿತಿ ಒಳಗಿರಬೇಕು.
ಹೆಚ್ಚಿನ ಮಾಹಿತಿಗಾಗಿ 080-29605761 ಗೆ ಸಂಪರ್ಕಿಸಬಹುದು ಎಂದು ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ರಂಗನಾಥ ಎಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿಗೆ ಸಾಮಾನ್ಯ ವರ್ಗದ ಆರ್ಯ ವೈಶ್ಯ ಸಮುದಾಯದವರಿಗೆ ಸಾಲ ಸೌಲಭ್ಯ ಒದಗಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಆರ್ಯ ವೈಶ್ಯ ಆಹಾರ ವಾಹಿನಿ/ ವಾಹಿನಿ ಯೋಜನೆ, ವಾಸವಿ ಜಲಶಕ್ತಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ ಸೌಲಭ್ಯ ಕಲ್ಪಿಸಲಾಗುತ್ತಿದೆ.
ಸಂಬಂಧಪಟ್ಟ ಯೋಜನೆ ಸೌಲಭ್ಯ ಪಡೆಯಲು ಅರ್ಹ ಅರ್ಜಿದಾರರು ಸಾಮಾನ್ಯ ವರ್ಗದಲ್ಲಿ ಆರ್ಯ, ವೈಶ್ಯ ಸಮುದಾಯಕ್ಕೆ ಸೇರಿರಬೇಕು, “ನಮೂನೆ – ಜೆ” ಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಪಡೆದಿರಬೇಕು (ಪ್ರಮಾಣ ಪತ್ರ ಚಾಲ್ತಿಯಲ್ಲಿರಬೇಕು). ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು. ಹಾಗೇ ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಖಾತೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು. ಈ ಯೋಜನೆಯಲ್ಲಿ ಮಹಿಳೆಯರಿಗೆ ಶೇ.33%, ವಿಶೇಷಚೇತನರಿಗೆ ಶೇ.5% ಹಾಗೂ ತೃತೀಯ ಲಿಂಗಿಗಳಿಗೆ ಶೇ.5% ಮೀಸಲಾತಿಯನ್ನು ನೀಡಲಾಗಿದೆ. ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹಗಿರುತ್ತಾರೆ, ಆದರೆ ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಮಾತ್ರ ಇಬ್ಬರಿಗೆ ಸಾಲ ಸೌಲಭ್ಯ ಪಡೆಯಲು ಅವಕಾವಿರುತ್ತದೆ.
ಅರ್ಜಿಯನ್ನು ಅನ್ ಲೈನ್ ಮೂಲಕ kacdc.karnataka.gov.in ಅಧಿಕೃತ ಜಾಲತಾಣದಲ್ಲಿ ಜುಲೈ 31 ರೊಳಗೆ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ ಸಂಖ್ಯೆ: 080-29605761 ಗೆ ಕಚೇರಿ ಸಮಯದಲ್ಲಿ ಸಂಪರ್ಕಿಬಹುದಾಗಿದೆ ಎಂದು ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Key words: Application, apply, Loan Facility, online
The post ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.