ಬೆಂಗಳೂರು,ಏಪ್ರಿಲ್,25,2026 (www.justkannada.in): ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದಕ್ಕೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದ್ದು ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಸಚಿವ ದಿನೇಶ್ ಗುಂಡೂರಾವ್, ಮನೋಸ್ಥೈರ್ಯ ಕುಗ್ಗಿಸುವ ನಡೆ ಅಕ್ಷಮ್ಯ ಅಪರಾಧ ಕಾನೂನಿನ ಚೌಕಟ್ಟಿನಲ್ಲಿ ತಪ್ಪಿತಸ್ಥರ ವಿರುದ್ದ ಕ್ರಮ ಆಗುತ್ತದೆ. ದೂರು ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದರು.
ಈ ಬಗ್ಗೆ ವಿದ್ಯಾರ್ಥಿಗಳು ಪೋಷಕರು ಆತಂಕ ಪಡುವ ಆಗತ್ಯವಿಲ್ಲ ಕಾನೂನಿನ ಚೌಕಟ್ಟಿನಲ್ಲಿ ಪಾರದರ್ಶಕವಾಗಿ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದ್ದಾರೆ.
Key words: Minister, Dinesh Gundu Rao, Janiwar, CET exam
The post ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ವಿಚಾರ: ಸಿಬ್ಬಂದಿ ವಿರುದ್ದ ಸಚಿವ ದಿನೇಶ್ ಗುಂಡೂರಾವ್ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




