ಮೈಸೂರು,ಫೆಬ್ರವರಿ,19,2025 (www.justkannada.in): ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಇತರೆ ಆರೋಪಿಗಳಿಗೆ ತನಿಖಾ ವರದಿಯಲ್ಲಿ ಕ್ಲೀನ್ ಚಿಟ್ ನೀಡಿದ್ದು ಈ ಸಂಬಂಧ ದೂರುದಾರ ಸ್ನೇಹಮಯಿ ಕೃಷ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಸೂರು ಲೋಕಾಯುಕ್ತ ಪೊಲೀಸರ ವಿರುದ್ಧ ಕಿಡಿಕಾರಿರುವ ದೂರುದಾರ ಸ್ನೇಹಮಯಿ ಕೃಷ್ಣ, ಸಾಕ್ಷ್ಯಾಧಾರಗಳ ಕೊರತೆಯಿಂದ ಬಿ ರಿಪೋರ್ಟ್ ಸಲ್ಲಿಸುವುದಾಗಿ ಲೋಕಾಯುಕ್ತ ಪೊಲೀಸರು ಹೇಳಿದ್ದು, ಇದನ್ನ ನ್ಯಾಯಾಲಯದಲ್ಲಿ ಪ್ರಶ್ನಿಸಬಹುದೆಂದು ಹೇಳಿದ್ದಾರೆ. ತನಿಖೆ ಇನ್ನೂ ಬಾಕಿಯಿರುವಾಗಲೇ ಬಿ ರಿಪೋರ್ಟ್ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಇನ್ನು ತನಿಖೆ ಮುಕ್ತಾಯಗೊಳಿಸದೇ ಮಧ್ಯಂತರ ವರದಿ ಸಲ್ಲಿಸಲು ಮುಂದಾಗಿದ್ದಾರೆ. ಲೋಕಾಯುಕ್ತ ಪೊಲೀಸರಿಗೆ ನಾಚಿಕೆಯಾಗಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಪೊಲೀಸರು ಆತ್ಮಸಾಕ್ಷಿ ಮಾರಿಕೊಂಡಿದ್ದಾರೆ. ನಾನು ಸಾಕಷ್ಟು ಸಾಕ್ಷಿಗಳನ್ನ ಕೊಟ್ಟಿದ್ದೇನೆ ಕೋರ್ಟ್ ನಲ್ಲಿ ಪ್ರಶ್ನಿಸಿ ಅಂತಾ ಹೇಳಿದ್ದಾರೆ. ರಾಜ್ಯದ ಜನರಿಗೆ ಅಧಿಕಾರಿಗಳು ವಂಚಿಸುತ್ತಿದ್ದಾರೆ. ರಾಜ್ಯದ ಜನತೆ ಮುಂದೆ ಸತ್ಯ ಸಾಬೀತು ಮಾಡುವೆ. ಸಿಎಂಗೆ ಶಿಕ್ಷೆ ಕೊಡಿಸುವೆ ಎಂದು ಶಪಥ ಮಾಡಿದರು.
Key words: muda case, Lokayukta, police, Snehamayi Krishna
The post ಸಿಎಂಗೆ ಶಿಕ್ಷೆ ಕೊಡಿಸುವೆ : ಜನತೆ ಮುಂದೆ ಸತ್ಯ ಸಾಬೀತು ಮಾಡುವೆ- ಸ್ನೇಹಮಯಿ ಕೃಷ್ಣ ಶಪಥ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.