ಬೆಂಗಳೂರು, ಮಾರ್ಚ್,13,2025 (www.justkannada.in): ಸಿದ್ದರಾಮಯ್ಯ ಅವರೊಬ್ಬರೇ ಮುಖ್ಯಮಂತ್ರಿಯಾಗಿ 4.91 ಲಕ್ಷ ಕೋಟಿ ರೂ. ಸಾಲ ಮಾಡಿದ್ದಾರೆ. ಒಟ್ಟು ಸಾಲದಲ್ಲಿ ಶೇ.63 ರಷ್ಟು ಸಿದ್ದರಾಮಯ್ಯನವರು ಮಾಡಿರುವ ಸಾಲದ ಪಾಲಿದೆ. ಪ್ರತಿ ತಿಂಗಳು ಪರೋಕ್ಷವಾಗಿ ತೆರಿಗೆ ಹೆಚ್ಚಿಸುವ ಪರಿಸ್ಥಿತಿಗೆ ತಂದಿದ್ದಾರೆ. ಈ ವರ್ಷವೂ ತೆರಿಗೆ ಮಾರಿಹಬ್ಬ ಕಾದಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದರು.
ಬಜೆಟ್ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಆರ್.ಅಶೋಕ್, ರಾಜ್ಯದಲ್ಲಿ ಸಾಲದ ಕೂಪಕ್ಕೆ ಹೋಗ್ತಾ ಇದ್ದೀವಿ. ನಾವು ಬಡ್ಡಿ ಕಟ್ಟಲು ಸಾಲ ಮಾಡಬೇಕಾದ ಪರಿಸ್ಥಿತಿ ಬಂದಿದೆ. 2025 ರಲ್ಲೂ ನಾಡಿನ ಜನರಿಗೆ ಕಾದಿದೆ ಮಾರಿಹಬ್ಬ, ಪ್ರತಿ ತಿಂಗಳು ಪರೋಕ್ಷವಾಗಿ ತೆರಿಗೆ ಹೆಚ್ಚಿಸುವ ಪರಿಸ್ಥಿತಿಗೆ ತಂದಿದ್ದಾರೆ ಎಂದು ಕಿಡಿಕಾರಿದರು.
ರಾಜ್ಯ ಸರ್ಕಾರ ಬಜೆಟ್ ನಲ್ಲಿ ಅಭಿವೃದ್ಧಿಯ ಅಂಶಗಳೇ ಇಲ್ಲ ಶಾಸಕರೇ ಅಭಿವೃದ್ಧಿಗೆ ಹಣ ಇಲ್ಲ. ಆಶಾ ಕಾರ್ಯಕರ್ತರು, ಬಿಸಿಯೂಟ ಮತ್ತು ಅಂಗನವಾಡಿಯ ಸಿಬ್ಬಂದಿಗಳಿಗೆ ಸರಿಯಾಗಿ ಗೌರವ ಧನ ನೀಡುತ್ತಿಲ್ಲ, ಆತಿಥಿ ಉಪನ್ಯಾಸಕರಿಗೆ 6 ತಿಂಗಳಿನಿಂದಲೂ ವೇತನ ಕೊಟ್ಟಿಲ್ಲ. ಚನ್ನಗಿರಿಯ ಶಾಸಕರು ಅಭಿವೃದ್ಧಿಗೆ ಹಣ ಇಲ್ಲ, ವಿಷ ಕುಡಿಯುವ ಪರಿಸ್ಥಿತಿ ಬಂದಿದೆ ಎಂದು ಹೇಳುತ್ತಿದ್ದಾರೆ. ಈ ಸರ್ಕಾರ ಅಭಿವೃದ್ಧಿಯನ್ನು ಸಂಪೂರ್ಣ ಕಡೆಗಣಿಸಿದೆ ಎಂದು ಆರ್ .ಅಶೋಕ್ ಹರಿಹಾಯ್ದರು.
Key words: Siddaramaiah, CM, debt, Tax, Budget, R. Ashok
The post ಸಿಎಂ ಆಗಿ ಸಿದ್ದರಾಮಯ್ಯ 4.91 ಲಕ್ಷ ಕೋಟಿ ರೂ. ಸಾಲ: ಈ ವರ್ಷವೂ ತೆರಿಗೆ ಮಾರಿಹಬ್ಬ ಕಾದಿದೆ- ಆರ್.ಅಶೋಕ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.