ನವದೆಹಲಿ,ಜೂನ್,9,2025 (www.justkannada.in): ಆರ್ ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಗೆ ಬಂದು ವಿವರಣೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಗೆ ಕಾಂಗ್ರೆಸ್ ಹೈಕಮಾಂಡ್ ಬುಲಾವ್ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಮಧ್ಯೆ ಡಿಸಿಎಂ ಡಿಕೆ ಶಿವಕುಮಾರ್ ನವದೆಹಲಿಯಲ್ಲೇ ಇದ್ದಾರೆ. ನಾಳೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ ಎನ್ನಲಾಗುತ್ತಿದೆ. ಕಾಲ್ತುಳಿತ ಘಟನೆಯಿಂದ ಅಸಮಾಧಾನಗೊಂಡಿರುವ ಕಾಂಗ್ರೆಸ್ ಹೈಕಮಾಂಡ್ ಈ ಬಗ್ಗೆ ವಿವರಣೆ ನೀಡುವಂತೆ ಕೇಳಲಿದೆ.
ನಾಳೇ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಭೆ ನಡೆಸಲಿದ್ದು ಕಾಲ್ತುಳಿತ ಬಗ್ಗೆ ಗಂಭೀರ ಚರ್ಚೆ ನಡೆಸಲಿದ್ದಾರೆ. ರಾಹುಲ್ ಗಾಂಧಿ ಕಾಲ್ತುಳಿತ ದುರಂತದ ಬಗ್ಗೆ ಮಾಹಿತಿ ಕೇಳಲಿದ್ದಾರೆ. ಸರ್ಕಾರದ ಲೋಪದಿಂದಲೇ ದುರಂತ ಸಂಭವಿಸಿರುವುದು ಎಂಬ ಆರೋಪಗಳು ಕೇಳಿ ಬಂದಿದ್ದು, ಈ ಹಿನ್ನಲೆಯಲ್ಲಿ ಈ ಬಗ್ಗೆ ರಾಹುಲ್ ಗಾಂಧಿ ಮಾಹಿತಿ ಪಡೆಯಲಿದ್ದಾರೆ.
Key words: Congress, high command, calls, CM , DCM
The post ಸಿಎಂ ಮತ್ತು ಡಿಸಿಎಂಗೆ ಕಾಂಗ್ರೆಸ್ ಹೈಕಮಾಂಡ್ ಬುಲಾವ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.