ಬೆಂಗಳೂರು,ಜನವರಿ,27,2025 (www.justkannada.in): ಸಿಎಂ ಸಿದ್ದರಾಮಯ್ಯ ವಿರುದ್ದ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಆದೇಶವನ್ನ ಕಾಯ್ದಿರಿಸಿದೆ.
ಮುಡಾ ಹಗರಣವನ್ನ ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಎರಡು ಕಡೆ ವಾದ ಪ್ರತಿವಾದ ಆಲಿಸಿ ನಂತರ ಆದೇಶವನ್ನ ಕಾಯ್ದಿರಿಸಿದೆ.
ದೂರುದಾರ ಸ್ನೇಹಮಯಿ ಕೃಷ್ಣ ಪರ ಹಿರಿಯ ವಕೀಲ ಮಣಿಂದರ್ ಸಿಂಗ್ ವಾದ ಮಂಡಿಸಿದರು. ಹಾಗೆಯೇ ಲೋಕಾಯುಕ್ತ ಪೊಲೀಸರಿಂದ ಅಂತಿಮ ವರದಿ ಸಲ್ಲಿಕೆಗೆ ಗಡುವು ವಿಸ್ತರಣೆ ಮಾಡಿದೆ. ಹೈಕೋರ್ಟ್ ಆದೇಶ ಪ್ರಕಟಿಸುವವರೆಗೂ ಗಡುವು ವಿಸ್ತರಣೆ ಮಾಡಿದೆ.
Key words: CBI, probe, against CM, High Court, reserves, order
The post ಸಿಎಂ ವಿರುದ್ದ ಸಿಬಿಐ ತನಿಖೆಗೆ ಕೋರಿ ಅರ್ಜಿ: ಆದೇಶ ಕಾಯ್ದಿರಿಸಿದ ಹೈಕೋರ್ಟ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.