ಮೈಸೂರು,ಏಪ್ರಿಲ್,26,2025 (www.justkannada.in): ಸಿಎಂ ಸಿದ್ದರಾಮಯ್ಯ ಇಂದು ಮೈಸೂರು ಪ್ರವಾಸ ಕೈಗೊಂಡಿದ್ದು ಪಿರಿಯಾಪಟ್ಟಣಕ್ಕೆ ಭೇಟಿ ನೀಡಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಇದಕ್ಕೂ ಮುನ್ನ ಇದೀಗ ಪ್ರತಿಭಟನೆ ಬಿಸಿ ತಟ್ಟಿದೆ.
ಪಿರಿಯಾಪಟ್ಟಣಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಆಗಮಿಸುವ ಮುನ್ನವೇ ಪಿರಿಯಾಪಟ್ಟಣ ತಾಲೂಕು ಆಡಳಿತ ಕಚೇರಿ ಎದುರು ಮೈ ಮೇಲೆ ಸಗಣಿ ಸುರಿದುಕೊಂಡು ಅಮಾನವೀಯ ಪ್ರತಿಭಟನೆ ನಡೆದಿದೆ.
ಮೈಸೂರು ಜಿಲ್ಲೆ ಪಿರಿಯಾಪಟ್ಟಣಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಚಾಮರಾಜನಗರ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಉಪಸ್ಥಿತರಿರಲಿದ್ದಾರೆ.
ಇದಕ್ಕೂ ಮುನ್ನ ಪ್ರತಿಭಟನೆ ಬಿಸಿ ತಟ್ಟಿದ್ದು, ಪ್ರಭಾವಿಗಳು ದಲಿತರ ಹಾಗೂ ರೈತರ ಭೂಮಿ ಕಬಳಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ದಸಂಸ ಮುಖಂಡ ಸಿ.ಎಸ್. ಜಗದೀಶ್, ಮುಮ್ಮಡಿ ಕಾವಲ್ ದೊಡ್ಡಯ್ಯ ಅವರು ಮೈಮೇಲೆ ಸಗಣಿ ಸುರಿದುಕೊಂಡು ಪ್ರತಿಭಟನೆ ನಡೆಸಿದ್ದಾರೆ.
ಚನ್ನಕಲ್ ಕಾವಲು ಗ್ರಾಮದ ಸರ್ವೇ ನಂಬರ್ 1 ಮತ್ತು 3ರ ಭೂಮಿ ಸಮಸ್ಯೆ ಬಗೆಹರಿಸಿ, ಸೂಳೆಕೋಟೆ ಸರ್ವೆ ನಂಬರ್ 10 ರ ದಾಖಲಾತಿಗಳನ್ನು ತಿರುಚಿದವರ ಮೇಲೆ ಕಾನೂನು ಕ್ರಮವಾಗಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
Key words: Protests, Mysore, CM Siddaramaiah, pouring, dung
The post ಸಿಎಂ ಸಿದ್ದರಾಮಯ್ಯಗೆ ಪ್ರತಿಭಟನೆ ಬಿಸಿ: ಮೈ ಮೇಲೆ ಸಗಣಿ ಸುರಿದುಕೊಂಡು ಧರಣಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.