ಮೈಸೂರು,ಆಗಸ್ಟ್,11,2025 (www.justkannada.in): ಸಿಎಂ ಸಿದ್ದರಾಮಯ್ಯ ಅವರ ಹುಟ್ಟುಹಬ್ಬದ ಪ್ರಯುಕ್ತ ನಾಳೆ ಪೌರಕಾರ್ಮಿಕರಿಂದ ಸ್ಥಳದಲ್ಲೇ ಅಡುಗೆ ತಯಾರಿಸಿ ಸಹಪಂಕ್ತಿ ಭೋಜನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಶಿವರಾಮು ತಿಳಿಸಿದರು.
ಈ ಬಗ್ಗೆ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಾಹಿತಿ ನೀಡಿದ ಕೆ.ಶಿವರಾಮು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೃದಿಕೆ ವತಿಯಿಂದ ಪೌರ ಸೇನಾನಿಗಳು, ದಲಿತ, ಹಿಂದುಳಿದ, ಅಲ್ಪಸಂಖ್ಯಾತ, ಸಾಹಿತಿಗಳು, ಚಿಂತಕರೊಂದಿಗೆ ಸಹಪಂಕ್ತಿ ಭೋಜನ ಕಾರ್ಯಕ್ರಮವನ್ನು ಏರ್ಪಾಡು ಮಾಡಲಾಗಿದೆ. ನಗರದ ಬಲ್ಲಾಳ್ ವೃತ್ತದ ಬಳಿ ಇರುವ ಬುದ್ದ ವಿಹಾರದ ಆವರಣದಲ್ಲಿ ಸಹಪಂಕ್ತಿ ಬೋಜನ ನಡೆಯಲಿದೆ. ಕಾರ್ಯಕ್ರಮಕ್ಕೆ ಹಲವಾರು ಪ್ರಗತಿಪರ ಚಿಂತಕರು, ಸಾಹಿತಿಗಳು ಸೇರಿದಂತೆ ಹಲವಾರು ಮುಖಂಡರು ಪಕ್ಷಾತೀತ, ಜಾತ್ಯಾತೀತ ಪಾಲ್ಗೊಳ್ಳಲಿದ್ದಾರೆ ಎಂದರು.
ಸಿದ್ದರಾಮಯ್ಯನವರ ಜಾತ್ಯತೀತ ಸೈದ್ಧಾಂತಿಕ ನಿಲುವುಗಳು ನಮಗೆ ಪ್ರೇರಣೆ. ಅಂತಹ ಒಬ್ಬ ಮಹಾನ್ ವ್ಯಕ್ತಿಯ ಹುಟ್ಟು ಹಬ್ಬವನ್ನ ಅರ್ಥಗರ್ಭಿತವಾಗಿ ಆಚರಿಸಲಾಗುತ್ತದೆ ಎಂದು ಕೆ.ಶಿವರಾಮು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಉಪ್ಪಾರ ಸಮುದಾಯದ ಜಿಲ್ಲಾ ಅಧ್ಯಕ್ಷ ಯೋಗೇಶ್, ಪೌರ ಕಾರ್ಮಿಕರ ಸಂಘದ ಮುಖಂಡ ಮಾರ ಸೇರಿದಂತೆ ಹಲವರು ಭಾಗಿಯಾಗಿದ್ದರು.
Key words: CM, Siddaramaiah, birthday, joint dinner, civic workers, Mysore
The post ಸಿಎಂ ಸಿದ್ದರಾಮಯ್ಯ ಹುಟ್ಟುಹಬ್ಬ: ನಾಳೆ ಪೌರಕಾರ್ಮಿಕರಿಂದ ಸಹಪಂಕ್ತಿ ಭೋಜನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.