16
April, 2026

A News 365Times Venture

16
Thursday
April, 2026

A News 365Times Venture

ಸಿಎಂ ಸಿದ್ಧರಾಮಯ್ಯ ವಿಷಯದಲ್ಲಿ ED ರಾಜಕೀಯ ಸಾಬೀತು : ಸಂಸದ ಸುನಿಲ್ ಬೋಸ್

Date:

ಮೈಸೂರು,ಜುಲೈ,21,2025 (www.justkannada.in): ಸಿಎಂ ಸಿದ್ಧರಾಮಯ್ಯನವರ ವಿಷಯದಲ್ಲಿ ED ಸಂಸ್ಥೆ ರಾಜಕೀಯ ಮಾಡಿದೆ ಎಂದು ಸಾಬೀತಾಗಿದೆ ಎಂದು  ಸಂಸದ ಸುನಿಲ್ ಬೋಸ್ ಟೀಕಿಸಿದರು.

ಈ ಕುರಿತು ಕೇಂದ್ರ ಸರ್ಕಾರದ ವಿರುದ್ದ ಕಿಡಿಕಾರಿರುವ ಸಂಸದ ಸುನೀಲ್ ಬೋಸ್, ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಮೇಲೆ ED ತನಿಖಾ ಸಂಸ್ಥೆಯು ರಾಜಕೀಯ ಮಾಡುತ್ತಿದ್ದು ಇದು  ಸರಿಯಲ್ಲ ಎಂಬುದಾಗಿ ಸುಪ್ರೀಂ ಅಭಿಪ್ರಾಯ ಪಟ್ಟಿದೆ.  ED ತನಿಖಾ ಸಂಸ್ಥೆ ಏಕೆ ರಾಜಕೀಯ ದಾಳ ಆಗುತ್ತಿದೆ ಎಂದು ನೇರವಾಗಿ ಪ್ರಶ್ನೆ ಮಾಡಿದೆ.

ದೇಶವೊಂದರ ಪ್ರಮುಖ ತನಿಖಾ ಸಂಸ್ಥೆಗಳನ್ನು ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿರುವ ಬಿಜೆಪಿಯು ದೇಶಾದ್ಯಂತ ಚುನಾವಣಾ ಪ್ರಣಾಳಿಕೆಯನ್ನು ಮುಂದಿಟ್ಟುಕೊಂಡು ಕೆಲಸ ರಾಜಕೀಯ ಮಾಡಬೇಕಾದ ಜಾಗದಲ್ಲಿ ವಿಪಕ್ಷಗಳನ್ನು ಹೆದರಿಸಿ ಚುನಾವಣೆ ಮಾಡುತ್ತಿರುವುದು ನಿಜಕ್ಕೂ ಖಂಡನೀಯ ವಿಷಯವಾಗಿದ್ದು ಸುಪ್ರೀಂ ಕೋರ್ಟ್ ನ ಈ ಎಚ್ಚರಿಕೆಯು, ರಾಜಕೀಯ ಪ್ರೇರಿತವಾಗಿ ವರ್ತಿಸುವ ತನಿಖಾ ಸಂಸ್ಥೆಗಳಿಗೆ ಅಗತ್ಯವಾಗಿ ನೀಡಬೇಕಿದ್ದ ಎಚ್ಚರಿಕೆ ಆಗಿದೆ ಎಂದು ಹೇಳಿದ್ದಾರೆ.

ಪ್ರಜಾಪ್ರಭುತ್ವದ ಸೌಂದರ್ಯವಾದ ಜನಾಭಿಪ್ರಾಯವನ್ನು ಭ್ರಷ್ಟ ಗೊಳಿಸುವ ಬಿಜೆಪಿಗರ ಹೀನಾಯ ಪ್ರಯತ್ನಗಳು ಇಲ್ಲಿಗೆ ಕೊನೆಯಾಗಬೇಕು. ಇಲ್ಲವಾದರೆ ಮುಂದೆ ಜನರೇ ಇವರಿಗೆ ಪಾಠ ಕಲಿಸುವ ದಿನಗಳು ದೂರವಿಲ್ಲ ಎಂದು ಸಂಸದ ಸುನೀಲ್ ಬೋಸ್ ಎಚ್ಚರಿಸಿದ್ದಾರೆ.vtu

Key words: ED , proves, politics , CM Siddaramaiah, case, MP, Sunil Bose

The post ಸಿಎಂ ಸಿದ್ಧರಾಮಯ್ಯ ವಿಷಯದಲ್ಲಿ ED ರಾಜಕೀಯ ಸಾಬೀತು : ಸಂಸದ ಸುನಿಲ್ ಬೋಸ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಹಿಳಾ ಮೀಸಲಾತಿಗೆ ಈ ಎರಡು ಮಸೂದೆ ಅನಿವಾರ್ಯ- ವಿಪಕ್ಷಗಳಿಗೆ ಕೇಂದ್ರ ಸಚಿವ ಅಮಿತ್ ಶಾ ಟಾಂಗ್

ನವದೆಹಲಿ,ಏಪ್ರಿಲ್,16,2026 (www.justkannada.in): ಲೋಕಸಭೆಯಲ್ಲಿ ಇಂದು ಮಂಡನೆಯಾಗಿರುವ ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಕಾಂಗ್ರೆಸ್...

ಉಪ್ಪು ತಿಂದವರು ನೀರು ಕುಡಿಯಲೇಬೇಕು- ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು,ಏಪ್ರಿಲ್,16,2026 (www.justkannada.in):  ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ...

ಮಹಿಳಾ ಮೀಸಲಾತಿ ಕಾನೂನು ಜಾರಿ ಕ್ರೆಡಿಟ್ ನಮಗೆ ಬೇಡ: ಕ್ಷೇತ್ರ ವಿಂಗಡಣೆಯಿಂದ ಅನ್ಯಾಯವಾಗಲ್ಲ- ಪ್ರಧಾನಿ ಮೋದಿ

ನವದೆಹಲಿ,ಏಪ್ರಿಲ್,16,2026 (www.justkannada.in):  ಮಹಿಳಾ ಮೀಸಲಾತಿ ಕಾನೂನು ಜಾರಿಯ ಕ್ರೆಡಿಟ್ ನಮಗೆ ಬೇಡ. ...

ಕುಡಿಯುವ ನೀರಿಗಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ- ಜಿಲ್ಲಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಏಪ್ರಿಲ್, 16,2026 (www.justkannada.in):  ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ...