ಬೆಂಗಳೂರು, ಮೇ 03,2025 (www.justkannada.in): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದ್ದ, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧ 8 ಮಂದಿ ಆರೋಪಿಗಳನ್ನ ಬಂಧಿಸಿರುವುದಾಗಿ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
ಗೃಹ ಸಚಿವ ಪರಮೇಶ್ವರ್ ಜೊತೆ ಸಭೆ ನಡೆಸಿದ ನಂತರ ಮಾತನಾಡಿದ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ (ಘಟನೆ ಸಂಬಂಧ ಎಂಟು ಮಂದಿಯನ್ನು ಬಂಧಿಸಲಾಗಿದೆ ಅಬ್ದುಲ್ ಸಫ್ವಾನ್ (29), ನಿಯಾಜ್ (28), ಕಲಂದರ್ ಶಾಫಿ (31), ಮೊಹಮ್ಮದ್ ಮುಝಮ್ಮಿಲ್ (32), ರಂಜಿತ್ (19), ನಾಗರಾಜ್ (20), ಮೊಹಮ್ಮದ್ ರಿಜ್ವಾನ್ (28) ಮತ್ತು ಆದಿಲ್ ಮೆಹರೂಫ್ ಬಂಧಿತರು. ಬಂಧಿತ 8 ಆರೋಪಿಗಳ ಪೈಕಿ ಇಬ್ಬರು ಹಿಂದೂಗಳಿದ್ದಾರೆ ಎಂದರು.
ಸಫ್ವಾನ್ ಪ್ರಮುಖ ಆರೋಪಿ. 2023ರಲ್ಲಿ ಅಬ್ದುಲ್ ಸಫ್ವಾನ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು. ಸಫ್ವಾನ್ ಗೆ ಸುಹಾಸ್ ಶೆಟ್ಟಿ ಕೊಲೆ ಮಾಡುವ ಆತಂಕ ಇತ್ತು. ಹಾಗಾಗಿ ಸುಹಾಸ್ ಶೆಟ್ಟಿಯನ್ನು ಕೊಲೆ ಮಾಡಲು ತೀರ್ಮಾನಿಸಿದ್ದರು. ಅದಕ್ಕಾಗಿ ಫಾಜಿಲ್ ತಮ್ಮ ಆದಿಲ್ ಮೆಹರೂಫ್ ನನ್ನು ಸಂಪರ್ಕಿಸಿ ಕೊಲೆ ಮಾಡಲು ತೀರ್ಮಾನಿಸಿದ್ದರು ಎಂದು ಮಾಹಿತಿ ನೀಡಿದರು.
ಸುಹಾಸ್ ಶೆಟ್ಟಿ ಕೊಲೆ ಮಾಡಲು ಸಫ್ವಾನ್ ತಂಡಕ್ಕೆ ಆದಿಲ್ 5 ಲಕ್ಷ ರೂ. ನೀಡಿದ್ದನು. ನಿಯಾಜ್ ಸ್ನೇಹಿತರಾದ ನಾಗರಾಜ್ ಮತ್ತು ರಂಜಿನ್ ಸಂಪರ್ಕ ಮಾಡುತ್ತಾರೆ. ಈ ಇಬ್ಬರು ಸಫ್ವಾನ್ ಮನೆಯಲ್ಲಿ ಎರಡು ದಿನಗಳ ಕಾಲ ವಾಸವಿದ್ದು, ಮೇ 1ರಂದು ಸುಹಾಸ್ ಚಲನವಲನ ಗಮನಿಸಿ ಕೊಲೆ ಮಾಡಿದ್ದಾರೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದರು.
Key words: Suhas Shetty, murder case, 8 accused, arrested
The post ಸುಹಾಸ್ ಶೆಟ್ಟಿ ಹತ್ಯೆ ಕೇಸ್: 8 ಆರೋಪಿಗಳ ಬಂಧನ; ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.