12
July, 2025

A News 365Times Venture

12
Saturday
July, 2025

A News 365Times Venture

ಸೆಂಟ್ ಫಿಲೋಮಿನಾ ಕಾಲೇಜು 11ನೇ ಘಟಿಕೋತ್ಸವ: 589 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Date:

ಮೈಸೂರು,ಮಾರ್ಚ್,15,2025 (www.justkannada.in): ಮೈಸೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ(ಸ್ವಾಯತ್ತ) ನಡೆದ 11ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ 589 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.

ಇಂದು ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 11ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಒಟ್ಟು 589 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಈ ಪೈಕಿ 406 ಪದವೀಧರರು ಮತ್ತು 183 ಸ್ನಾತಕೋತ್ತರ ಪದವೀಧರರು ಸೇರಿದ್ದಾರೆ. ಇವರಲ್ಲಿ 45 ಪ್ರತಿಭಾವಂತ ವಿದ್ಯಾರ್ಥಿಗಳು, 34 ಪದವೀಧರರು ಮತ್ತು 11 ಸ್ನಾತಕೋತ್ತರ ವಿದ್ಯಾರ್ಥಿಗಳು, ಶ್ರೇಷ್ಠ ಶೈಕ್ಷಣಿಕ ಸಾಧನೆಗಾಗಿ ಚಿನ್ನದ ಪದಕಗಳನ್ನು ಸ್ವೀಕರಿಸಿದರು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಮೈಸೂರು ಧರ್ಮಪ್ರಾಂತ್ಯದ ಆಡಳಿತಾಧಿಕಾರಿ  ಡಾ. ಬರ್ನಾಡ್ ಮೊರಾಸ್ ಆಗಮಿಸಿದ್ದರು.   ಚಂಡೀಗಢ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಡಾ. ಮನ್‌ಪ್ರೀತ್ ಸಿಂಗ್ ಮನ್ನಾ ಪದವಿ ಪ್ರದಾನ ಭಾಷಣ ಮಾಡಿದರು.

ಹಾಗೆಯೇ  ಅತಿಥಿಯಾಗಿ ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ  ಪ್ರೊ. ಎನ್.ಕೆ. ಲೋಕನಾಥ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಸಮಾರಂಭದಲ್ಲಿ ಆಡ್ ಜಾನ್ ಮೆಂಡೋನ್ಸಾ ಧರ್ಮಪ್ರಾಂತ್ಯ ಶಿಕ್ಷಣ ಸಮಿತಿಯ ಕಾರ್ಯದರ್ಶಿಗಳಾದ ಫಾದರ್ ಎಡ್ವರ್ಡ್ ವಿಲಿಯಮ್ ಸಾಲ್ಡಾನ್ಹಾ ಸಂತ ಫಿಲೋಮಿನಾ ವಿದ್ಯಾಸಂಸ್ಥೆ ಗುರುಗಳಾದ ಡಾ. ಲೂರ್ದ್ ಪ್ರಸಾದ್, ರೆಕ್ಟರ್, ಜ್ಞಾನ ಪ್ರಗಾಸಂ,  ಡೇವಿಡ್ ಸಾಗಯರಾಜ್ ಎಸ್ ಮತ್ತಿತರರು ಉಪಸ್ಥಿತರಿದ್ದರು.

Key words: St. Philomena’s College, 11th Convocation

The post ಸೆಂಟ್ ಫಿಲೋಮಿನಾ ಕಾಲೇಜು 11ನೇ ಘಟಿಕೋತ್ಸವ: 589 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೆಲವೇ ಶಾಸಕರ ಬೆಂಬಲ: ಸಿಎಂ ಹೇಳಿಕೆ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಏನು..?

ಬೆಂಗಳೂರು,ಜುಲೈ,11,2025 (www.justkannada.in): ಕೆಲವೇ ಶಾಸಕರ ಬೆಂಬಲ ಡಿಕೆ ಶಿವಕುಮಾರ್ ಗಿದೆ ಎಂಬ...

ದೇವನಹಳ್ಳಿ ಭೂಸ್ವಾಧೀನ ಪ್ರಕ್ರಿಯೆ : ಸಿಎಂ ಸಿದ್ದರಾಮಯ್ಯ “ನಾಟಕ” ಮಾಡುತ್ತಿದ್ದಾರೆ – ಪ್ರಕಾಶ್ ರೈ.

ಮೈಸೂರು, ಜು.೧೧,೨೦೨೫ : ದೇವನಹಳ್ಳಿ ರೈತರು ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕೆಂಬ ಬೇಡಿಕೆಯ...

ಮೈಸೂರು: ಭೂಮಿ ಖರೀದಿಗೆ ಮುಂದಾದ KPTCL: ಭೂಮಾಲೀಕರಿಗೆ ಮನವಿ

ಮೈಸೂರು,ಜುಲೈ, 11, 2025 (www.justkannada.in): ಮೈಸೂರು ವ್ಯಾಪ್ತಿಯಲ್ಲಿ 220/66 ಕೆ.ವಿ ವಿದ್ಯುತ್‌...

ವೈದ್ಯೆಗೆ ವರದಕ್ಷಿಣೆ ಕಿರುಕುಳ, ಗರ್ಭಪಾತ: ಐವರ ವಿರುದ್ದ FIR

ಮೈಸೂರು,ಜುಲೈ,11,2025 (www.justkannada.in): ಮದುವೆಯಾದ ಎರಡೇ ತಿಂಗಳಿಗೆ ವೈದ್ಯೆಗೆ ಕಿರುಕುಳ ನೀಡಿ ಗರ್ಭಪಾತ...