20
July, 2025

A News 365Times Venture

20
Sunday
July, 2025

A News 365Times Venture

ಸ್ನೇಹಮಯಿ ಕೃಷ್ಣಗೆ ಲೋಕಾಯುಕ್ತರ ನೋಟೀಸ್..!

Date:

ಮೈಸೂರು,ಫೆಬ್ರವರಿ,19,2025 (www.justkannada.in):  ರಾಜ್ಯದಲ್ಲಿ ಭಾರಿ ಚರ್ಚಿತವಾಗಿದ್ದ ಮುಡಾ ಹಗರಣ ವಿಚಾರಕ್ಕೆ ಟ್ವಿಸ್ಟ್ ಸಿಕ್ಕಿದ್ದು ಸಾಕ್ಷ್ಯಾಧಾರಗಳ ಕೊರತೆ  ಎಂದು  ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದಾರೆ. ಈ ಮೂಲಕ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕಿದೆ.

ಲೋಕಾಯುಕ್ತ ಎಸ್ಪಿ ಉದೇಶ್ ಅವರು ಸ್ನೇಹಮಯಿ ಕೃಷ್ಣ ಅವರಿಗೆ ನೋಟಿಸ್ ನೀಡಿದ್ದು, ನೀವು ನೀಡಿದ ದೂರು ಸಂಬಂಧ 1ನೇ ಆರೋಪಿಯಿಂದ 4ನೇ ಆರೋಪಿವರೆಗೆ ವಿಚಾರಣೆ ನಡೆಸಲಾಗಿದೆ. ಇದು ಸಿವಿಲ್ ಸ್ವರೂಪ್ಪದ್ದಾಗಿದೆ. ಹಾಗೆಯೇ ಈ ಪ್ರಕರಣ ತನಿಖೆ ನಡೆಸಲು ತಕ್ಕುದಲ್ಲ, ಅಲ್ಲದೆ ದೂರಿನಲ್ಲಿ ವಜಾ ಮಾಡಿದ ಪ್ರಕರಣಗಳು ಸಹ ಇದೆ . ಜೊತೆಗೆ ಸಾಕಷ್ಟು ಸಾಕ್ಷ್ಯಾಧಾರಗಳ ಕೊರೆತೆಯಿದೆ. ಎಲ್ಲಾ ಆರೋಪಿಗಳ ಆರೋಪಗಳು ಸಾಕ್ಷ್ಯಾಧಾರಗಳ ಕೊರತೆಯಿಂದ ಆರೋಪ ಸಾಬೀತಾಗಿಲ್ಲ ಎಂದು ನೋಟಿಸ್ ನಲ್ಲಿ ಉಲ್ಲೇಖಿಸಿದ್ದಾರೆ.

ಹಾಗೆಯೇ ಈ ವರದಿಯನ್ನು ವಿರೋಧಿಸುವುದಿದ್ದರೆ, ತಾವು ಈ ನೋಟೀಸು ತಲುಪಿದ ಒಂದು ವಾರದೊಳಗಾಗಿ ಮ್ಯಾಜಿಸ್ಟ್ರೇಟರ ಎದುರು ಆ ಬಗ್ಗೆ ವಿರೋಧಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಪ್ರಕರಣದ ಆರೋಪಿ-1 ರಿಂದ ಆರೋಪಿ-4 ರವರೆಗಿನ ಮೇಲಿನ ಆರೋಪಗಳು ಸಾಕ್ಷ್ಯಾಧಾರಗಳ ಕೊರತೆಯಿಂದ ಸಾಬೀತಾಗಿಲ್ಲವಾದ್ದರಿಂದ ಅಂತಿಮ ವರದಿಯನ್ನು ಘನ ನ್ಯಾಯಾಲಯಕ್ಕೆ ಸಲ್ಲಿಸಲಾಗುತ್ತಿದೆ.  ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 2016ನೇ ಸಾಲಿನಿಂದ 2024ನೇ ಸಾಲಿನವರೆಗೆ 50:50 ಅನುಪಾತದಲ್ಲಿ ಪರಿಹಾರಾತ್ಮಕ ನಿವೇಶನಗಳನ್ನು ನೀಡಿರುವ ಆರೋಪಗಳ ಬಗ್ಗೆ ಹೆಚ್ಚುವರಿ ತನಿಖೆ ನಡೆಸಿ ಕಲಂ 173 (8) ಸಿ.ಆರ್.ಪಿ.ಸಿ ರೀತ್ಯಾ ಹೆಚ್ಚುವರಿ ಅಂತಿಮ ವರದಿಯನ್ನು ಘನ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ನೋಟಿಸ್ ನಲ್ಲಿ ಎಸ್ಪಿ ಉದೇಶ್ ತಿಳಿಸಿದ್ದಾರೆ.

Key words: Muda case,  Lokayukta, notice , Snehamayi Krishna.

The post ಸ್ನೇಹಮಯಿ ಕೃಷ್ಣಗೆ ಲೋಕಾಯುಕ್ತರ ನೋಟೀಸ್..! appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೋದಿ ಕೇವಲ ಪ್ರಚಾರ ಪ್ರಿಯ: ಯಾವುದೇ ಕಾರಣಕ್ಕೂ ಸಂವಿಧಾನ ಬದಲಾವಣೆ ಮಾಡಲು ಆಗಲ್ಲ-ಮಲ್ಲಿಕಾರ್ಜುನ ಖರ್ಗೆ

ಮೈಸೂರು,ಜುಲೈ,19,2025 (www.justkannada.in): ಪ್ರಧಾನಿ ಮೋದಿ ಕೇವಲ ಪ್ರಚಾರಪ್ರಿಯ. ಬಿಜೆಪಿಯವರು ಎಷ್ಟೇ ತಿಪ್ಪರಲಾಗ...

ನಮ್ಮ ಗ್ಯಾರಂಟಿಗಳ ಕದ್ದ ಬಿಜೆಪಿಗೆ ನಾಚಿಕೆ ಇಲ್ಲ: ಅವರ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರ- ಸಿಎಂ ಸಿದ್ದರಾಮಯ್ಯ

ಮೈಸೂರು ಜುಲೈ, 19,2025 (www.justkannada.in): ಜೆಡಿಎಸ್- ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ...

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ- ಸಚಿವ ಕೆ.ವೆಂಕಟೇಶ್

ಮೈಸೂರು,ಜುಲೈ,19,2025 (www.justkannada.in): ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸುತ್ತಾರೆಂದು ಬಿಜೆಪಿ ಜೆಡಿಎಸ್ ಅಪಪ್ರಚಾರ ಮಾಡುತ್ತಿವೆ....

ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ 1.06 ಕೋಟಿ ರೂ. ಪರಿಹಾರ ವಿತರಣೆ

ಮೈಸೂರು, ಜುಲೈ 19, 2025 (www.justkannada.in): ನಿಗಮದ ಸಿಬ್ಬಂದಿ ಹಾಗೂ ಅಧಿಕಾರಿಗಳ...