8
July, 2025

A News 365Times Venture

8
Tuesday
July, 2025

A News 365Times Venture

ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಳ್ಳಬೇಕಾದರೆ ಆಸಕ್ತಿ ಬಹಳ ಮುಖ್ಯ- ಎ.ದೇವರಾಜು

Date:

ಮೈಸೂರು.ಫೆಬ್ರವರಿ,15,2025 (www.justkannada.in): ಯಾವುದೇ ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಳ್ಳಬೇಕಾದರೆ ಆಸಕ್ತಿ ಬಹಳ ಮುಖ್ಯ ಎಂದು ಪುರಾತತ್ವ, ವಸ್ತು ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ಆಯುಕ್ತ ಎ.ದೇವರಾಜು ಶಿಬಿರಾರ್ಥಿಗಳಿಗೆ ಸಲಹೆ ನೀಡಿದರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದಲ್ಲಿ ನಡೆಯುತ್ತಿರುವ ಬ್ಯಾಂಕಿಂಗ್ ತರಬೇತಿ ಶಿಬಿರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,  ಪ್ರಸ್ತುತ ದಿನಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಕಠಿಣವಾಗಿದೆ. ಪರೀಕ್ಷೆ ಎದುರಿಸಲು ತಯಾರಿ ಜೊತೆಗೆ ಅಸಕ್ತಿ ಬಹಳ ಮುಖ್ಯವಾಗಿದೆ ಎಂದು ಹೇಳಿದರು. ಹಿಂದೆಲ್ಲಾ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ತರಬೇತಿ ಇರುತ್ತಿರಲಿಲ್ಲ. ಇತ್ತೀಚಿಗೆ ತುಂಬಾ ತರಬೇತಿ ಸಂಸ್ಥೆಗಳಿವೆ. ಆದರೆ ದುಬಾರಿ ಶುಲ್ಕ ವಿದ್ಯಾರ್ಥಿಗಳಿಗೆ ಭರಿಸಲಾಗದೆ ತರಬೇತಿ ಪಡೆಯಲು ಆಗುತ್ತಿಲ್ಲ. ಅಂತಹ ವಿದ್ಯಾರ್ಥಿಗಳಿಗೆ ಮುಕ್ತ ವಿವಿಯ ತರಬೇತಿ ಕೇಂದ್ರವು ಬಹಳ ಪ್ರಯೋಜನಕಾರಿಯಾಗಿದೆ ಎಂದು ಶ್ಲಾಘಿಸಿದರು.

ವಿದ್ಯಾರ್ಥಿಗಳು ಶ್ರದ್ಧೆ ಹಾಗೂ ನಿರಂತರ ಪ್ರಯತ್ನದಿಂದ ತಮ್ಮ ಗುರಿ ಮುಟ್ಟುವ ತನಕ ಅಭ್ಯಾಸವನ್ನು ಸಮಸ್ಯೆಗೆ ಹೆದರಿ ನಿಲ್ಲಿಸಬಾರದು. ಜೊತೆಗೆ ಸಮಯವನ್ನು ವ್ಯರ್ಥ ಮಾಡದೆ ಸದುಪಯೋಗ ಮಾಡಿಕೊಳ್ಳಿ. ನಿಮ್ಮ ಶೈಕ್ಷಣಿಕ ಅರ್ಹತೆಗೆ ಪೂರಕವಾದ ಎಲ್ಲಾ ಪರೀಕ್ಷೆಗಳನ್ನು ಧೈರ್ಯವಾಗಿ ತೆಗೆದುಕೊಂಡು ಪರೀಕ್ಷೆಯನ್ನು ಎದುರಿಸಿ ಎಂದು ಕಿವಿಮಾತು ಹೇಳಿದರು.

ಪರೀಕ್ಷೆ ಎದುರಿಸಲು ನಿಮ್ಮ ವೈಯಕ್ತಿಕ ಆಸಕ್ತಿ ಮುಖ್ಯವಾಗಿರಬೇಕೆ ಹೊರತು ಬೇರೆಯವರ ಒತ್ತಾಯಕ್ಕೆ ಓದಬಾರದು. ಪರೀಕ್ಷೆ ಬರೆಯುವವರೆಲ್ಲ ಪಾಸಾಗುವುದಿಲ್ಲ. 100 ಹುದ್ದೆಗೆ ಪರೀಕ್ಷೆ ನಡೆಸಿದರೆ ಸುಮಾರು 1 ಲಕ್ಷ ಜನರು ಪರೀಕ್ಷೆಯನ್ನು ತೆಗೆದುಕೊಳ್ಳುತ್ತಾರೆ. ಅದರಲ್ಲಿ ಸತತವಾಗಿ ಅಭ್ಯಾಸ ನಡೆಸಿದವರಿಗೆ ಮಾತ್ರ ಕೆಲಸ ದೊರಕುತ್ತದೆ. ಆದ್ದರಿಂದ ನಿಮ್ಮ ಗುರಿ ಅಚಲವಾಗಿರಬೇಕು ಎಂದರು.

ಪ್ರತಿಯೊಬ್ಬರೂ ಕೂಡ ನಿಮ್ಮ ಗುರಿಯನ್ನು ಪ್ರೀತಿಸಿ. ಎಲ್ಲರ ಬಳಿಯೂ ಮೊಬೈಲ್ ಇರುವುದರಿಂದ ಪ್ರಯಾಣ ಮಾಡುವಾಗ ಅಥವಾ ಇನ್ನಾವುದೇ ಸಮಯದಲ್ಲಿ ಬೆಳಿಗ್ಗೆ, ಸಂಜೆ, ತಡರಾತ್ರಿಯಲ್ಲಿ ಪ್ರಸಾರವಾಗುವ ಆಕಾಶವಾಣಿಯ ಸುದ್ದಿ ಪ್ರಸಾರವನ್ನು ಗಮನವಿಟ್ಟು ಕನ್ನಡ ಮತ್ತು ಆಂಗ್ಲಭಾಷೆ ಎರಡರಲ್ಲಿಯೂ ಕೇಳಬೇಕು. ಜೊತೆಗೆ ಪ್ರಚಲಿತ ಘಟನೆ, ನ್ಯೂಸ್ ಪೇಪರ್ ಹಾಗೂ ಇನ್ನಿತರ ವಿಷಯಗಳನ್ನು ಪ್ರತಿನಿತ್ಯ ಗಮನಿಸಿ ಟಿಪ್ಪಣಿಮಾಡಿಕೊಳ್ಳಬೇಕು. ಇಂದಿನ ಸ್ಪರ್ಧಾತ್ಮಕ ಪ್ರಪಂಚದಲ್ಲಿ ಸ್ಪರ್ಧೆಗಳು ಹೆಚ್ಚಿದೆ. ಆದರೂ ಸಹ ಯಾರೂ ಎದೆಗುಂದದೆ ಮುನ್ನುಗ್ಗಿದರೆ ಯಶಸ್ಸು ಖಚಿತ ಎಂದರು. ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ವಿವಿ ಕುಲಪತಿ ಪ್ರೊ.ಶರಣಪ್ಪ ವಿ.ಹಲಸೆ ಮಾತನಾಡಿ ‘ಪ್ರಯತ್ನ ಪಟ್ಟರೆ ಪರಮಾತ್ಮನೇ ಸಿಗುವನು’ ಎಂಬ ಮಾತಿನಂತೆ ಪ್ರಯತ್ನದಿಂದ ಎಲ್ಲವೂ ಸಾಧ್ಯ. ಹೀಗಾಗಿ ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ತಮ್ಮ ಗುರಿಯನ್ನು ಮುಟ್ಟಬಹುದಾಗಿದೆ ಎಂದರು.

ಪ್ರಯತ್ನಕ್ಕೆ ತಕ್ಕ ಪ್ರತಿಫಲ ದೊರೆಯುತ್ತದೆ. ಇಂದು ಕಷ್ಟಪಟ್ಟರೆ ಮುಂದಿನ ನಿಮ್ಮ ಜೀವನ ಸುಖಕರವಾಗಿರುತ್ತದೆ. ಜೊತೆಗೆ ಸಮಾಜದಲ್ಲಿ ಉನ್ನತ ಗೌರವಗಳು ದೊರಕುತ್ತದೆ. ಎಲ್ಲಾ ಅಭ್ಯರ್ಥಿಗಳಿಗೂ ಓದಿನ ಹಸಿವಿರಬೇಕು. ಕಲಿಕೆ ಎಂಬುದು ದಿನನಿತ್ಯದ ಪಯಣವಾಗಿದೆ. ಎಲ್ಲರೂ ಉತ್ತಮ ಶ್ರದ್ದೆಯಿಂದ ಕಲಿಕೆಯನ್ನು ಮುಂದುವರಿಸಿ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಉಪಕುಲಪತಿ ಪ್ರೊ. ಕಿವಿ. ಪ್ರವೀಣ್, ಹಣಕಾಸು ಅಧಿಕಾರಿ ಪ್ರೊ. ನಿರಂಜನ್ ರಾಜ್, ಸಂಯೋಜಕ ಜೆ.ನಹಳ್ಳಿ ಸತ್ಯನಾರಾಯಣಗೌಡ ಉಪಸ್ಥಿತರಿದ್ದರು.

Key words: KSOU,  competitive exams, Coaching, A. Devaraju

The post ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಳ್ಳಬೇಕಾದರೆ ಆಸಕ್ತಿ ಬಹಳ ಮುಖ್ಯ- ಎ.ದೇವರಾಜು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಿಜೆಪಿ ಬಿಟ್ಟೋಗಿದ್ದ ಬಿಎಸ್ ವೈ ಮತ್ತೆ ಯಾಕೆ ಬಂದ್ರು ಗೊತ್ತಿಲ್ಲ : ಅರವಿಂದ ಲಿಂಬಾವಳಿ ವಾಗ್ದಾಳಿ

ದಾವಣಗೆರೆ,ಜುಲೈ,8,2025 (www.justkannada.in): ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಬಿಜೆಪಿ ಬಿಟ್ಟು...

ಶಾಸಕರ ಜೊತೆ ಸುರ್ಜೇವಾಲ ಸಭೆ: ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಧಾರವಾಡ,ಜುಲೈ,8,2025 (www.justkannada.in):  ಕಾಂಗ್ರೆಸ್ ಶಾಸಕರ ಜೊತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್...

ರಾಜ್ಯದಲ್ಲಿ ಕಾಂಗ್ರೆಸ್ ದಿವಾಳಿ: ಸಿದ್ದರಾಮಯ್ಯ ಜೈಲಿಗೆ ಹೋಗಲಿದ್ದಾರೆ- ಪ್ರತಾಪ್ ಸಿಂಹ

ದಾವಣಗೆರೆ,ಜುಲೈ,8,2025 (www.justkannada.in): ಮುಡಾ ಕೇಸ್ ನಲ್ಲಿ ಜೈಲಿಗೆ ಹೋಗುವುದನ್ನ ಸಿಎಂ ಸಿದ್ದರಾಮಯ್ಯ...

ಆಡಳಿತ ಸುಧಾರಣೆ ಬಗ್ಗೆ ಚರ್ಚೆ: ಶಾಸಕರು ಸಾಕಷ್ಟು ಸಮಸ್ಯೆ ಹೇಳುತ್ತಿದ್ದಾರೆ- ರಣದೀಪ್ ಸಿಂಗ್ ಸುರ್ಜೇವಾಲ

ಬೆಂಗಳೂರು,ಜುಲೈ,7,2025 (www.justkannada.in): ಪದೇ ಪದೇ ರಾಜ್ಯಕ್ಕೆ ಆಗಮಿಸುತ್ತಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ...