31
August, 2025

A News 365Times Venture

31
Sunday
August, 2025

A News 365Times Venture

ಸ್ಪೇಸ್‌ ಪಾರ್ಕ್‌ ಸಹಿತ ಹಲವು ಯೋಜನೆಗಳಿಗೆ ವಿಶೇಷ ಪ್ರೋತ್ಸಾಹನಾ ನೀತಿ: ಸಿಎಂ ಜತೆ ಚರ್ಚೆಗೆ ಸಚಿವರ ತೀರ್ಮಾನ

Date:

ಬೆಂಗಳೂರು,ಜುಲೈ,30,2025 (www.justkannada.in):  ಉದ್ದೇಶಿತ ಬಾಹ್ಯಾಕಾಶ ಪಾರ್ಕ್‌, ವಿದ್ಯುನ್ಮಾನ ಬಿಡಿಭಾಗಗಳ ತಯಾರಿಕೆ ಪಾರ್ಕ್‌ ಮುಂತಾದ ಯೋಜನೆಗಳು ಸೇರಿದಂತೆ ಹಲವು ಮಹತ್ತ್ವದ ಉದ್ಯಮಗಳಿಗೆ ಸರಕಾರ ಕೊಡುವ ರಿಯಾಯಿತಿಗಳ ಕುರಿತ ನೀತಿಯನ್ನು ರೂಪಿಸಲಾಗುತ್ತಿದೆ. ಈ ಸಂಬಂಧವಾಗಿ ಇನ್ನೊಂದು ವಾರದಲ್ಲಿ ಕೈಗಾರಿಕಾ ಮತ್ತು ಐಟಿ-ಬಿಟಿ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ವಿಸ್ತೃತ ಹೂಡಿಕೆ- ಪ್ರೋತ್ಸಾಹನಾ ನೀತಿಗೆ ಸಂಬಂಧಿಸಿದ ವರದಿ ಸಿದ್ಧಪಡಿಸಲು ಸೂಚಿಸಲಾಗಿದೆ. ಇದಾದ ಕೂಡಲೇ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ವಿಸ್ತೃತವಾಗಿ ಚರ್ಚಿಸಲು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮತ್ತು ಐಟಿ-ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ತೀರ್ಮಾನಿಸಿದ್ದಾರೆ.

ಎರಡೂ ಇಲಾಖೆಗಳು ಜತೆಗೂಡಿ ಜಾರಿಗೊಳಿಸಬೇಕಾದ ಹಲವು ಯೋಜನೆಗಳು ಮತ್ತು ರೂಪಿಸಬೇಕಾದ ಉಪಕ್ರಮಗಳ ಕುರಿತು ಇಬ್ಬರೂ ಸಚಿವರು ಇಲ್ಲಿನ ಖನಿಜ ಭವನದಲ್ಲಿ ಮಹತ್ವದ ಸಭೆ ನಡೆಸಿದರು.

ಐಟಿ ಇಲಾಖೆಯು ಇಎಸ್‌ ಡಿಎಂ ವಲಯಕ್ಕೆ ಸಂಬಂಧಿಸಿದಂತೆ ವಿಶೇಷ ಪ್ರೋತ್ಸಾಹನಾ ಕ್ರಮಗಳ ನೀತಿಯನ್ನು ರೂಪಿಸುತ್ತಿದೆ. ಇದಕ್ಕೆ ಪೂರಕವಾಗಿ ಕೈಗಾರಿಕಾ ಇಲಾಖೆ ಕೂಡ ವಿದ್ಯುನ್ಮಾನ ತಯಾರಿಕೆ ವಲಯದಲ್ಲಿ ಹೂಡಿಕೆ ಆಕರ್ಷಣೆಗೆ ಕಾರ್ಯತಂತ್ರ ರೂಪಿಸಬೇಕಾದ ಅಗತ್ಯವಿದೆ. ಕೆಲವೆಡೆಗಳಲ್ಲಿ ಒಂದೇ ಯೋಜನೆಗೆ ಐಟಿ ಮತ್ತು ಕೈಗಾರಿಕೆ ಇಲಾಖೆಗಳೆರಡೂ ರಿಯಾಯಿತಿಗಳನ್ನು ಕೊಡುತ್ತಿದ್ದು, ಇದನ್ನು ಸರಿ ಮಾಡಬೇಕಾಗಿದೆ ಎನ್ನುವ ಅಭಿಪಾಯ ಸಭೆಯಲ್ಲಿ ವ್ಯಕ್ತವಾಗಿದೆ ಎಂದು ತಿಳಿದುಬಂದಿದೆ.

ಸದ್ಯಕ್ಕೆ ನಮ್ಮಲ್ಲಿ ತಯಾರಾಗುತ್ತಿರುವ ಸ್ಮಾರ್ಟ್‌ಫೋನ್‌ಗಳಲ್ಲಿ ಶೇಕಡ 44ರಷ್ಟು ಅಮೆರಿಕಕ್ಕೆ ರಫ್ತಾಗುತ್ತಿದೆ. ಇದರಲ್ಲಿ ಮೊದಲು ಶೇ.61ರಷ್ಟು ಪಾಲು ಹೊಂದಿದ್ದ ಚೀನಾದ ಪ್ರಮಾಣ ಈಗ ಶೇ.25ಕ್ಕೆ ಕುಸಿದಿದೆ. ಆದರೆ, ವಿಯಟ್ನಾಂನ ಪಾಲು ಮಾತ್ರ ಶೇ.50ರಷ್ಟಿದೆ. ಈ ಸ್ಪರ್ಧೆಯನ್ನು ಪರಿಗಣಿಸಿ ಬಂಡವಾಳವನ್ನು ಸೆಳೆಯಬೇಕಾಗಿದೆ. ಜೊತೆಗೆ ಸ್ಮಾರ್ಟ್‌ಫೋನ್‌ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬೇಕಾಗಿದೆ. ಇದಕ್ಕೆ ಪೂರಕವಾಗಿ ಈ ಕ್ಷೇತ್ರಕ್ಕೆ ಹಲವು ರಿಯಾಯಿತಿಗಳನ್ನು ಘೋಷಿಸಬೇಕಾಗಿದೆ ಎಂದು ಇಬ್ಬರೂ ಸಚಿವರು ಅಭಿಪ್ರಾಯಪಟ್ಟರು.

ಸ್ಪೇಸ್‌ ಪಾರ್ಕ್‌, ಪಿಸಿಬಿ ಪಾರ್ಕ್‌ಗೆ ಭೂಮಿ

ಐಟಿ ಸಚಿವ ಪ್ರಿಯಾಂಕ್‌ ಖರ್ಗೆ ಮಾತನಾಡಿ, ತಮ್ಮ ಇಲಾಖೆಯು ದೇವನಹಳ್ಳಿ ಸಮೀಪದ ಆದಿನಾರಾಯಣ ಹೊಸಹಳ್ಳಿ ಅಥವಾ ಐಟಿಐಆರ್‌ ಪ್ರದೇಶದಲ್ಲಿ 100 ಎಕರೆಯಲ್ಲಿ ಸ್ಪೇಸ್‌ ಪಾರ್ಕ್‌, ಮೈಸೂರಿನ ಕೋಚನಹಳ್ಳಿ ಹಂತ-2ರಲ್ಲಿ 150 ಎಕರೆಯಲ್ಲಿ ಪ್ರಿಂಟೆಡ್‌ ಸರ್ಕ್ಯೂಟ್‌ ಬೋರ್ಡ್‌ (ಪಿಸಿಬಿ) ಪಾರ್ಕ್‌, ಕ್ವಿನ್‌ ಸಿಟಿ / ಅಡಕನಹಳ್ಳಿ ಮತ್ತು ಕೋಚನಹಳ್ಳಿ ಎರಡೂ ಕಡೆಗಳಲ್ಲಿ ತಲಾ 100 ಎಕರೆಯಲ್ಲಿ ಗ್ಲೋಬಲ್‌ ಇನ್ನೋವೇಶನ್‌ ಸಿಟಿ, ಅಡಕನಹಳ್ಳಿ/ ಕೋಚನಹಳ್ಳಿಯಲ್ಲಿ 100 ಎಕರೆಯಲ್ಲಿ ಕಿಯೋನಿಕ್ಸ್‌ ಪ್ಲಗ್‌ & ಪ್ಲೇ ಸೌಲಭ್ಯ ಕೇಂದ್ರದ ಅಭಿವೃದ್ಧಿ ಮೂಲಕ ʻಗ್ಲೋಬಲ್‌ ಕೇಪಬಿಲಿಟಿ ಸೆಂಟರ್‌ ʼಗಳನ್ನು ಸ್ಥಾಪಿಸಲು ತೀರ್ಮಾನಿಸಿದೆ. ಇದಕ್ಕಾಗಿ ಈ ಸ್ಥಳಗಳಲ್ಲಿ ಜಮೀನನ್ನು ಮಂಜೂರು ಮಾಡುವಂತೆ ಈ ಸಂದರ್ಭದಲ್ಲಿ ಎಂ.ಬಿ ಪಾಟೀಲ್  ಅವರಲ್ಲಿ ಕೋರಿದರು.

ಡ್ರೋನ್‌ ಪರೀಕ್ಷಾ ಕೇಂದ್ರವು ನಿರ್ಜನ ಪ್ರದೇಶದಲ್ಲಿ ಇರಬೇಕು ಎನ್ನುವ ನಿಯಮವಿದೆ. ಆದ್ದರಿಂದ ಬೆಂಗಳೂರಿನ ಭಾಗವೇ ಆಗಿರುವ ಹೆಸರಘಟ್ಟದಲ್ಲಿ ಈ ಯೋಜನೆ ಬರುವುದು ಕಷ್ಟವಾಗಬಹುದು. ಆದ್ದರಿಂದ ಇದಕ್ಕೆ ಸೂಕ್ತ ಜಾಗ ಹುಡುಕುವುದು ಸೂಕ್ತ ಎಂದೂ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಕೈಗಾರಿಕೆಗಳಿಗೆ ನೀರು ಪೂರೈಕೆಗೆ ಕ್ರಮ

ಡೇಟಾ ಸೈನ್ಸ್‌, ತಯಾರಿಕಾ ಸ್ಥಾವರಗಳು ಸೇರಿದಂತೆ ಕೈಗಾರಿಕೆಗಳು ಬೆಳೆಯಬೇಕೆಂದರೆ ವಿದ್ಯುತ್‌ ಮತ್ತು ನೀರಿನ ಭಾರೀ ಅಗತ್ಯವಿದೆ. ಹೀಗಾಗಿ ರಾಜ್ಯದಲ್ಲಿ ʻಕೈಗಾರಿಕಾ ನೀರು ಭದ್ರತಾ ಕಾಯ್ದೆʼಯನ್ನು (ಇಂಡಸ್ಟ್ರಿಯಲ್‌ ವಾಟರ್‌ ಸೆಕ್ಯುರಿಟಿ ಪಾಲಿಸಿ) ರೂಪಿಸುವ ಮತ್ತು ಕೈಗಾರಿಕಾ ಮರುಬಳಕೆ ವಿದ್ಯುತ್‌ ಉತ್ಪಾದನಾ ಪಾರ್ಕ್‌ ಸ್ಥಾಪಿಸುವ ಅಗತ್ಯ ಇದೆ. ನೈಸರ್ಗಿಕ ಅನಿಲದಿಂದ ವಿದ್ಯುತ್‌ ತಯಾರಿಸುವ ನಿಟ್ಟಿನಲ್ಲಿ ಗಂಭೀರವಾದ ಚರ್ಚೆ ಅಗತ್ಯ ಇದೆ. ಈ ಸಂಬಂಧ ಯೋಜನೆ ರೂಪಿಸುವಂತೆ ಇಬ್ಬರೂ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ನೀರು ಪೂರೈಕೆ ಯೋಜನೆಯಡಿಯಲ್ಲಿ ಉದ್ಯಮಗಳಿಗೆ ಶೇಕಡ 50ರಷ್ಟು ನೀರನ್ನು ನಾವು ಪೂರೈಸುತ್ತೇವೆ. ಉಳಿದ ಶೇಕಡಾ 50ರಷ್ಟನ್ನು ಕೈಗಾರಿಕೆಗಳೇ ಸಂಸ್ಕರಿಸಿ, ವ್ಯವಸ್ಥೆ ಮಾಡಿಕೊಳ್ಳಬೇಕು. ಕೆಐಎಡಿಬಿ ಕೈಗಾರಿಕಾ ಪ್ರದೇಶಗಳಿಗೆ ನೀರು ಪೂರೈಸಲು ಈಗಾಗಲೇ 2500 ಕೋಟಿ ರೂ. ವೆಚ್ಚದ ಯೋಜನೆ ರೂಪಿಸಲಾಗಿದೆ. ಅಂತಹ ಮಾದರಿಯ ಸಾಧ್ಯತೆಗಳ ಬಗ್ಗೆ ಗಂಭೀರ ಆಲೋಚನೆ ನಡೆದಿದೆ ಎಂದು ಎಂ.ಬಿ ಪಾಟೀಲ್ ಅವರು ಮಾಹಿತಿ ನೀಡಿದ್ದಾರೆ.

ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಐಟಿಬಿಟಿ ಇಲಾಖೆ ಕಾರ್ಯದರ್ಶಿ ಏಕ್ ರೂಪ್ ಕೌರ್, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಮಹೇಶ, ಐಟಿ ಇಲಾಖೆ ನಿರ್ದೇಶಕ ರಾಹುಲ್ ಸಂಕನೂರು ಸೇರಿದಂತೆ ಇತರ ಅಧಿಕಾರಿಗಳು ಸಭೆಯಲ್ಲಿ ಇದ್ದರು.vtu

Key words: Special incentive policy, many projects, Minister, MB Patil, Priyank kharge

The post ಸ್ಪೇಸ್‌ ಪಾರ್ಕ್‌ ಸಹಿತ ಹಲವು ಯೋಜನೆಗಳಿಗೆ ವಿಶೇಷ ಪ್ರೋತ್ಸಾಹನಾ ನೀತಿ: ಸಿಎಂ ಜತೆ ಚರ್ಚೆಗೆ ಸಚಿವರ ತೀರ್ಮಾನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಧರ್ಮಸ್ಥಳ ಕೇಸ್ :ಗೃಹ ಸಚಿವರ ಭೇಟಿಯಾಗಿ ಚರ್ಚಿಸಿದ SIT ಮುಖ್ಯಸ್ಥರು: ತನಿಖಾ ಪ್ರಗತಿ ವರದಿ ಸಲ್ಲಿಕೆ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಹೂತಿಟ್ಟ ಆರೋಪ ಪ್ರಕರಣ ಕುರಿತು...

ಧರ್ಮಸ್ಥಳ ಕೇಸ್: ದೂರುದಾರನನ್ನು ಮಂಪರು ಪರೀಕ್ಷೆಗೆ ಒಳಪಡಿಸಿ- MLC ಸಿ.ಟಿ ರವಿ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆಯಾಗುತ್ತಿದ್ದು...

ಧರ್ಮಸ್ಥಳದ ವಿಚಾರದಲ್ಲಿ ಬಿಜೆಪಿ ರಾಜಕೀಯ: ಸದನದಲ್ಲಿ ಇಂದು ಪರಮೇಶ್ವರ್ ಮಾತು-ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಆಗಸ್ಟ್,18,2025 (www.justkannada.in):  ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸಾರಿಗೆ...

ಮೈಸೂರು: ಅತಿಹೆಚ್ಚು ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಸ್ಟೇಷನ್‌ ಉದ್ಘಾಟಿಸಿದ ಸೆಸ್ಕ್ ಎಂಡಿ

ಮೈಸೂರು, ಆಗಸ್ಟ್‌, 18, 2025 (www.justkannada.in): ಮೈಸೂರಿನಲ್ಲಿ ನೂತನವಾಗಿ ಆರಂಭಿಸಿರುವ ಅತ್ಯಧಿಕ...