16
July, 2025

A News 365Times Venture

16
Wednesday
July, 2025

A News 365Times Venture

ಹಣಕಾಸಿನ ಪರಿಸ್ಥಿತಿ ಅವಲೋಕಿಸಿ, ಗುತ್ತಿಗೆದಾರರ ಬಾಕಿ ಬಿಲ್ಲುಗಳ ಬಗ್ಗೆ ಕ್ರಮ- ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು, ಮಾರ್ಚ್ 3,2025 (www.justkannada.in):  ಸರ್ಕಾರದಲ್ಲಿನ ಹಣಕಾಸಿನ ಪರಿಸ್ಥಿತಿಯನ್ನು ಅವಲೋಕಿಸಿ, ಗುತ್ತಿಗೆದಾರರ ಬಾಕಿ ಬಿಲ್ಲುಗಳ ಪಾವತಿ ಬಗ್ಗೆ ಪರಿಶೀಲಿಸಲಾಗುವುದು  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಬಾಕಿಯಿರುವ ಮೊತ್ತಗಳ ಪಾವತಿಗೆ ಮನವಿಕೊಂಡಿದ್ದು, ಏಪ್ರಿಲ್ ಮಾಹೆಯಲ್ಲಿ ಸಾಧ್ಯವಾದಷ್ಟು ಬಾಕಿ ಬಿಲ್ಲುಗಳನ್ನು ಪಾವತಿಸಲು ಪ್ರಯತ್ನಿಸಲಾಗುವುದು. ಹಿಂದಿನ ಸರ್ಕಾರದ ಅವಧಿಯಲ್ಲಿ ಅನುದಾನವಿಲ್ಲದಿದ್ದರೂ, ಟೆಂಡರ್ ಪ್ರಕ್ರಿಯೆಯನ್ನು ಕೈಗೊಂಡು, ಕಾಮಗಾರಿ ಪ್ರಾರಂಭಿಸಿದ ಕಾರಣದಿಂದಾಗಿ ಬಾಕಿ ಬಿಲ್ಲುಗಳು ಹೆಚ್ಚಿವೆ. ಇದಕ್ಕೆ ನಮ್ಮ ಸರ್ಕಾರ ಹೊಣೆಯಾಗಲು ಸಾಧ್ಯವೇ ಎಂದು ಮರುಪ್ರಶ್ನಿಸಿದರು.

ಲಂಚ ಪಡೆಯುವುದು ಹಾಗೂ ಲಂಚ ನೀಡುವುದು ಅಪರಾಧ

ಅಧಿಕಾರಿಗಳ ಮಟ್ಟದಲ್ಲಿ ಕಮೀಷನ್ ದಂಧೆ ನಡೆದಿರುವುದಾಗಿ ಗುತ್ತಿಗೆ ಸಂಘದವರು ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಲಂಚ ಪಡೆಯುವುದು ಹಾಗೂ ಲಂಚ ನೀಡುವುದು ಸಹ ಅಪರಾಧ. ಈ ರೀತಿಯ ಕೃತ್ಯದಲ್ಲಿ ಯಾರು ತೊಡಗಬಾರದು. ತಾನು ಇದುವರೆವಿಗೂ ಹಣಬಿಡುಗಡೆ ಮಾಡಲು ಯಾರಿಂದಲೂ ದುಡ್ಡು ಪಡೆದಿಲ್ಲವೆಂದರು.

ಹೈಕಮಾಂಡ್ ತೀರ್ಮಾನ ಅಂತಿಮ

ಡಿಕೆ ಶಿವಕುಮಾರ್ ಅವರು ಇದೇ ಅವಧಿಯಲ್ಲಿ ಮುಖ್ಯಮಂತ್ರಿಗಳಾಗುವ ಸಾಧ್ಯತೆ ಬಗ್ಗೆ ವೀರಪ್ಪ ಮೊಯಿಲಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ವಿಷಯದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿದೆ ಎಂದರು.

ಮಾರ್ಚ್ 7 ರಂದು ರಾಜ್ಯ ಬಜೆಟ್ ಮಂಡನೆ

ಉಭಯಸದನಗಳ ಕಾರ್ಯಕಲಾಪಗಳ ಸಲಹಾ ಸಮಿತಿಗಳ ಜಂಟಿ ಸಭೆ ನಡೆಸಲಾಗಿದೆ. ಸರ್ವಪಕ್ಷಗಳ ಶಾಸಕರು ಸಭೆಯಲ್ಲಿ ಭಾಗವಹಿಸಿದ್ದರು. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯ ನಂತರ, ನಾನು ಉತ್ತರ ನೀಡಲಿದ್ದೇನೆ. ಮಾರ್ಚ್ 7 ರಂದು ರಾಜ್ಯ ಬಜೆಟ್ ಮಂಡಿಸಲಾಗುವುದು. ಮಾರ್ಚ್ 19ರವರೆಗೆ ಬಜೆಟ್ ಮೇಲಿನ ಚರ್ಚೆಗಳು  ನಡೆಯಲಿದ್ದು, ಮಾರ್ಚ್ 19 ರಂದು ವಿಧಾನಸಭೆಯಲ್ಲಿ ಹಾಗೂ 20 ರಂದು ವಿಧಾನಪರಿಷತ್ತಿನಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡುವುದಾಗಿ ತಿಳಿಸಿದರು.

Key words: CM Siddaramaiah , financial situation, pending bills, contractors

The post ಹಣಕಾಸಿನ ಪರಿಸ್ಥಿತಿ ಅವಲೋಕಿಸಿ, ಗುತ್ತಿಗೆದಾರರ ಬಾಕಿ ಬಿಲ್ಲುಗಳ ಬಗ್ಗೆ ಕ್ರಮ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಎಲ್ಲ ಉದ್ಯಮಿಗಳಿಗೂ ರಾಜ್ಯದಲ್ಲೇ ಭೂಮಿ: ಒಂದೇ ಒಂದು ಕಂಪನಿ ಹೊರಹೋಗಲು ಬಿಡಲ್ಲ-ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಜುಲೈ,16,2025 (www.justkannada.in):  ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್ ಸ್ಥಾಪನೆಗೆ ದೇವನಹಳ್ಳಿಯಲ್ಲಿ ನಡೆಯಬೇಕಾಗಿದ್ದ...

ಆ.15ರೊಳಗೆ ಒಳ ಮೀಸಲಾತಿ ಜಾರಿಯಾಗದಿದ್ರೆ ಕರ್ನಾಟಕ ಬಂದ್- ಎ. ನಾರಾಯಣಸ್ವಾಮಿ

ಬೆಂಗಳೂರು,ಜುಲೈ,16,2025 (www.justkannada.in):   ಒಳ ಮೀಸಲಾತಿ ಜಾರಿಗೆ ತೀವ್ರ ವಿಳಂಬ ಮಾಡುತ್ತಿರುವ ರಾಜ್ಯ...

ಜು.19ರಂದು ಮೈಸೂರಿನಲ್ಲಿ ಸಾಧನ ಸಮಾವೇಶ: ವೇದಿಕೆ ಸ್ಥಳ ಪರಿಶೀಲನೆ ನಡೆಸಿದ ಸಚಿವ ಹೆಚ್.ಸಿ ಮಹದೇವಪ್ಪ

ಮೈಸೂರು,ಜುಲೈ,16,2025 (www.justkannada.in):  ಜುಲೈ 19 ರಂದು ಮೈಸೂರಿನಲ್ಲಿ ಕಾಂಗ್ರೆಸ್ ಸಾಧನ ಸಮಾವೇಶ...

ಆ.5 ರಂದು KSRTC, BMTC ಸೇರಿ 4 ನಿಗಮಗಳಿಂದ ಸಾರಿಗೆ ಮುಷ್ಕರ

ಬೆಂಗಳೂರು, ಜುಲೈ, 16,2025 (www.justkannada.in): ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಾರಿಗೆ ನಿಗಮಗಳ...