ಹಾಸನ ,ಜೂನ್,30,2025 (www.justkannada.in): ಹಾಸನದಲ್ಲಿ ಹೃದಯಾಘಾತದಿಂದ ಮತ್ತೆ ಮೂವರು ಸಾವನ್ನಪ್ಪಿದ್ದಾರೆ.
ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಜೆಪಿ ನಗರದ ಲೇಪಾಕ್ಷಿ(50) ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಬೆಳಿಗ್ಗೆ ಮನೆಯಲ್ಲಿದ್ದಾಗಲೇ ಲೇಪಾಕ್ಷಿ ಸುಸ್ತು ಎಂದು ಕುಸಿದು ಬಿದಿದ್ದರು. ಲೇಪಾಕ್ಷಿ ಅವರನ್ನು ತಕ್ಷಣ ಆಸ್ಪತ್ರೆಗೆ ಶಿಫ್ಟ್ ಮಾಡಲಾಯಿತು.ಆದರೆ ಆಸ್ಪತ್ರೆಗೆ ಬರುವಷ್ಟರಲ್ಲಿ ಲೇಪಾಕ್ಷಿ ಸಾವನ್ನಪ್ಪಿದ್ದಾರೆ.
ಇನ್ನು ದೇಶ ಕಾಯುವ ಯೋಧ ರಜೆಗೆ ಎಂದು ಊರಿಗೆ ಬಂದಾಗ ಜಮೀನಿನಲ್ಲಿ ಉಳುಮೆ ಮಾಡುವಾಗಲೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಯೋಧನನ್ನು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕೆಂಬಾಳು ಗ್ರಾಮದ ಲೋಹಿತ್ (38) ಎಂದು ಗುರುತಿಸಲಾಗಿದೆ.
18 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ ಲೋಹಿತ್ ರಜೆಗೆಂದು ಊರಿಗೆ ತೆರಳಿದ್ದಾಗ ಜಮೀನು ಉಳುಮೆ ಮಾಡುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿತ್ತು. ಬಳಿಕ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ಹೊಳೇನರಸೀಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕ ಮುತ್ತಯ್ಯ(58) ಸಹ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಇವರು ಚನ್ನರಾಯಪಟ್ಟಣದ ನಿವಾಸಿಯಾಗಿದ್ದಾರೆ. ಕಳೆದ 40 ದಿನಗಳಲ್ಲಿ ಹಾಸನ ಜಿಲ್ಲೆಯಲ್ಲಿ 21 ಜನ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
Key words: Three, die ,heart attacks, Hassan
The post ಹಾಸನದಲ್ಲಿ ಮತ್ತೆ ಮೂವರು ಹೃದಯಾಘಾತಕ್ಕೆ ಬಲಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.