ಹಾಸನ,ಜೂನ್,28,2025 (www.justkannada.in): ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಬಲಿಯಾಗತ್ತಲೇ ಇದ್ದು ಇಂದು ಬೆಳಿಗ್ಗೆ ಆಟೋ ಚಾಲಕರೊಬ್ಬರು ಮೃತಪಟ್ಟಿದ್ದರು. ಇದೀಗ ಮತ್ತೋರ್ವ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
41 ವರ್ಷದ ಬಸ್ ಕಂಡಕ್ಟರ್ ಗಿರೀಶ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹಾಸನ ತಾಲ್ಲೂಕಿನ ಕಟ್ಟಾಯ ಹೋಬಳಿಯ ಹ್ಯಾರಾನೆ ಗ್ರಾಮದ ಗಿರೀಶ್ ಬಿಎಂಟಿಸಿ ಬಸ್ ಕಂಡಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಮಧ್ಯೆ ಇಂದು ರಜೆ ಇದ್ದ ಕಾರಣ ಊರಿಗೆ ಬಂದಿದ್ದರು.
ಹೊಲದಲ್ಲಿ ಜೋಳ ಬೆಳೆಗೆ ಗೊಬ್ಬರ ಹಾಕಿ ಮನೆಗೆ ವಾಪಸ್ ಆಗಿದ್ದ ಗಿರೀಶ್, ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಈ ಮೂಲಕ ಇಂದು ಒಂದೇ ದಿನ ಹಾಸನದಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿದ್ದಾರೆ. ಕಳೆದ ಒಂದುವರೆ ತಿಂಗಳಲ್ಲಿ ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಬಲಿಯಾದವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ಬೆಳಿಗ್ಗೆಯಷ್ಟೇ ಆಟೋ ಚಾಲಕ ಗೋವಿಂದ (37) ಹೃದಯಾಘಾತದಿಂದ ಸಾವನ್ನಪ್ಪಿದ್ದರು.
Key words: Hassan, heart attack, Bus conductor, dies.
The post ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೋರ್ವ ಬಲಿ: ಬಸ್ ಕಂಡಕ್ಟರ್ ಸಾವು. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.