ಬೆಂಗಳೂರು,ಫೆಬ್ರವರಿ,22,2025 (www.justkannada.in): ನಂದಿನಿ ಹಾಲಿನ ದರ ಹೆಚ್ಚಳದ ಬಗ್ಗೆ ಸರ್ಕಾರ ಯಾವುದೇ ನಿರ್ಧಾರ ಮಾಡಿಲ್ಲ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ತಿಳಿಸಿದ್ದಾರೆ.
ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಭೀಮಾನಾಯ್ಕ್, ಹಾಲಿನ ದರ ಹೆಚ್ಚಳ ಬಗ್ಗೆ ನಿರ್ಧಾರ ಮಾಡಿಲ್ಲ. ನಂದಿನಿ ಹಾಲಿನ ದರ ಹೆಚ್ಚಳ ಮಾಡುವಂತೆ ಒತ್ತಡ ಇದೆ. ಸಂಬಂಧಿಸಿದ ನಿಗಮಗಳ ಸಭೆ ಕರೆದ ಚರ್ಚೆ ಮಾಡಲಾಗಿದೆ. 5 ರೂ. ಹೆಚ್ಚಳ ಮಾಡಬೇಕೆಂಬ ಅಭಿಪ್ರಾಯ ವ್ಯಕ್ತವಾಗಿದೆ. ಹೆಚ್ಚಳ ಮಾಡಿದ ದರವನ್ನ ರೈತರಿಗೆ ನೀಡಬೇಕೆಂದು ಚರ್ಚೆ ನಡೆಸಲಾಗಿದೆ ಎಂದರು.
ಸಭೆಯಲ್ಲಿ ಚರ್ಚಿಸಿದ ವಿಷಯವನ್ನು ಸರ್ಕಾರಕ್ಕೆ ತಿಳಿಸಿದ್ದೇವೆ. ಆದರೆ ಸರ್ಕಾರದಿಂದ ಯಾವುದೇ ನಿರ್ಧಾರ ಬಂದಿಲ್ಲ. ಹಾಲಿನ ದರ ಹೆಚ್ಚಳ ಬಗ್ಗೆ ಸರ್ಕಾರ ತೀರ್ಮಾನ ಮಾಡಿಲ್ಲ ಎಂದು ಭೀಮಾನಾಯ್ಕ್ ಸ್ಪಷ್ಟಪಡಿಸಿದರು.
Key words: Milk, prices, increasing, KMF, Bhima naik
The post ಹೆಚ್ಚಳವಾಗುತ್ತಾ ಹಾಲಿನ ದರ..? appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.