10
July, 2025

A News 365Times Venture

10
Thursday
July, 2025

A News 365Times Venture

ಹೊರಗಿನಿಂದ ಬಂದವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ರೆ ಆತ್ಮಹತ್ಯೆ: ಖಡಕ್ ಎಚ್ಚರಿಕೆ ನೀಡಿದ ಬಿಜೆಪಿ ಮುಖಂಡ

Date:

ಮೈಸೂರು,ಜೂನ್,30,2025 (www.justkannada.in): ಹೊರಗಿನಿಂದ ಬಂದವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಿದರೆ ಕಚೇರಿ ಮುಂದೆಯೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಹೈಕಮಾಂಡ್ ಗೆ ಬಿಜೆಪಿ ಹಿರಿಯ ಮುಖಂಡ ಹಾಗೂ 2018ರ ವಿಧಾನಸಭಾ ಚುನಾವಣೆಯ ವರುಣಾ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ತೋಟದಪ್ಪ ಬಸವರಾಜು ಎಚ್ಚರಿಕೆ ನೀಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರ ಕುರಿತು ಮಾತನಾಡಿದ ತೋಟದಪ್ಪ ಬಸವರಾಜು. ಬಿಜೆಪಿ ವಿಶ್ವದ ನಂಬರ್ 1 ರಾಜಕೀಯ ಪಕ್ಷ. ಬಿಜೆಪಿ ಜೆಡಿಎಸ್ ಮೈತ್ರಿಯಾದಾಗಲೇ  ಕುಟುಂಬ ರಾಜಕಾರಣ ಮತ್ತು ಭ್ರಷ್ಟಾಚಾರ ವಿರೋಧಿ ರಾಜಕಾರಣ ಸತ್ತು ಹೋಯಿತು. ವಿಜಯೇಂದ್ರ ಅಧಿಕಾರವಧಿ ಇನ್ನು ಮುಗಿದಿಲ್ಲ. ಅವಧಿಗೂ ಮುನ್ನ ಬದಲಿಸುವುದಾದರೆ ಪಕ್ಷದ ದೃಷ್ಠಿಯಿಂದ ಶ್ರೀರಾಮುಲು ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿ. ತೇಜಸ್ವಿನಿ ಅನಂತ್ ಕುಮಾರ್ ,ಈಶ್ವರಪ್ಪ , ಯಡಿಯೂರಪ್ಪನವರ ಕ್ಷಮೆ ಕೇಳಿದ್ರೆ ಮತ್ತೆ ಬಿಜೆಪಿಗೆ ಕರೆತಂದು ಯತ್ನಾಳ್ ಅವರನ್ನು ರಾಜ್ಯಾಧ್ಯಕ್ಷ ಮಾಡಿ. ಇಲ್ಲವಾದ್ರೆ ಉತ್ತಮ ಸಂಘಟನೆ ಮಾಡುತ್ತಿರುವ ವಿಜಯೇಂದ್ರರವರನ್ನೇ ಮುಂದುವರೆಸಿ.  ಕೆಲ ವರಿಷ್ಠರು ಹೊರಗಿನಿಂದ ಬಂದವರನ್ನು ರಾಜ್ಯಾಧ್ಯಕ್ಷ ಮಾಡಲು ಹೊರಟಿದ್ದಾರೆ. ಇದು ಬಿಜೆಪಿ ನಿಷ್ಠಾವಂತ ಕಾರ್ಯಕರ್ತರಿಗೆ ಮಾಡುವ ಅಪಮಾನ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸಚಿವ ವಿ. ಸೋಮಣ್ಣ ವಿರುದ್ದ ವಾಗ್ದಾಳಿ ನಡೆಸಿದ ತೋಟದಪ್ಪ ಬಸವಾರಜು, ವಿ.ಸೋಮಣ್ಣ ಸರ್ವ ಪಕ್ಷ ನಾಯಕರು. ಕಳೆದ ಚುನಾವಣೆಯಲ್ಲಿ ವರುಣಾ ಕ್ಷೇತ್ರದಲ್ಲಿ ಸೋತಾಗ ಸಭೆಯಲ್ಲಿ ಅವಾಚ್ಯ ಶಬ್ದದಿಂದ ಕಾರ್ಯಕರ್ತರನ್ನು ಅಪಮಾನಿಸಿದ್ದಾರೆ‌. ಒಂದೊಂದು ಮತಕ್ಕೂ 2 ಸಾವಿರ ‌ನೀಡಿ ಕ್ಷೇತ್ರದ ಮತದಾರರನ್ನು ಭ್ರಷ್ಟರನ್ನಾಗಿಸಿದ್ದಾರೆ.  ಸ್ವಯಂಕೃತ ಅಪರಾಧದಿಂದ ಸೋತಿದ್ದಾರೆ‌ ವಿಜೆಯೇಂದ್ರ, ಯಡಿಯೂರಪ್ಪ ಬಗ್ಗೆ ಹಗುರವಾಗಿ ಮಾತನಾಡಿದ್ದೇ ಸೋಲಿಗೆ ಕಾರಣವಾಯಿತು. ಸೋಮಣ್ಣ ಗೆ ಕೇಂದ್ರ ಗೃಹ‌ಮಂತ್ರಿ ಮಾಡಿ ಬೇಕಿದ್ರೆ  ಪ್ರಧಾನಿ‌ ಮಾಡಿ . ಹೊರಗಿನಿಂದ ಬಂದವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿದರೆ ಬಿಜೆಪಿ ಕಛೇರಿ ಮುಂದೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ‌ ಎಂದು ಬಿಜೆಪಿ ಹೈ ಕಮಾಂಡ್ ಗೆ ಖಡಕ್ ಎಚ್ಚರಿಕೆ ನೀಡಿದರು.vtu

Key words: BJP, state president, Warning, Mysore, suicide,  Worker

The post ಹೊರಗಿನಿಂದ ಬಂದವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ರೆ ಆತ್ಮಹತ್ಯೆ: ಖಡಕ್ ಎಚ್ಚರಿಕೆ ನೀಡಿದ ಬಿಜೆಪಿ ಮುಖಂಡ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಯಕತ್ವ ಬದಲಾವಣೆ ವಿಚಾರ: ಹೈಕಮಾಡ್ ನಿರ್ಧಾರಕ್ಕೆ ನಾನು ಡಿಕೆಶಿ ಬದ್ಧ- ಸಿಎಂ ಸಿದ್ದರಾಮಯ್ಯ

ನವದೆಹಲಿ,ಜುಲೈ,10,2025 (www.justkannada.in): ಅಧಿಕಾರ ಹಂಚಿಕೆ ಬಗ್ಗೆ ಯಾವ ಚರ್ಚೆ ಆಗಿಲ್ಲ.  ಏನೇ...

ಡಬಲ್ ಮರ್ಡರ್: ತಮ್ಮನಿಂದಲೇ ಅಣ್ಣ ಮತ್ತು ತಂದೆಯ ಹತ್ಯೆ

ಹಾಸನ ,ಜುಲೈ,10,2025 (www.justkannada.in):  ವ್ಯಕ್ತಿಯೊಬ್ಬ ಮಚ್ಚಿನಿಂದ ಕೊಚ್ಚಿ ತನ್ನ ತಂದೆ ಮತ್ತು...

ಪುತ್ರ ಆತ್ಮಹತ್ಯೆಗೆ ಶರಣು: ವಿಚಾರ ತಿಳಿದು ತಂದೆ ಹೃದಯಾಘಾತದಿಂದ ಸಾವು

ಯಾದಗಿರಿ,ಜುಲೈ,10,2025 (www.justkannada.in):  ಪುತ್ರ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವಿಚಾರ ತಿಳಿದು ತಂದೆಯೂ...

JDS ತೊರೆದು ಕಾಂಗ್ರೆಸ್ ಸೇರ್ತಾರಾ ಶಾಸಕ ಜಿ.ಟಿ ದೇವೇಗೌಡ..?  ಈ ಬಗ್ಗೆ ಸ್ವತಃ ಅವರ ಪ್ರತಿಕ್ರಿಯೆ ಹೀಗಿತ್ತು..!

ಮೈಸೂರು, ಜುಲೈ,9,2025 (www.justkannada.in):  ನಾನು ಜೆಡಿಎಸ್ ನಲ್ಲಿ ಇರಬೇಕಾ ಬೇಡವಾ?  ಬಿಜೆಪಿಗೆ...