20
April, 2026

A News 365Times Venture

20
Monday
April, 2026

A News 365Times Venture

ಹೊಸ ಜನಗಣತಿ ನಂತರ ಕ್ಷೇತ್ರ ಮರುವಿಂಗಡಣೆ ಮಾಡುವುದು ಸೂಕ್ತ – ಸಿಎಂ ಸಿದ್ದರಾಮಯ್ಯ ಅಭಿಮತ

Date:

ಮೈಸೂರು, ಏಪ್ರಿಲ್, 20,2026 (www.justkannada.in): ಕ್ಷೇತ್ರ ಮರು ವಿಂಗಡಣೆಯನ್ನು ಹೊಸ ಜನಗಣತಿಯಾದ ನಂತರ ಮಾಡುವುದು ಸೂಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು.

ಮೈಸೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾವು ಅದಕ್ಕಾಗಿಯೇ ಕ್ಷೇತ್ರ ಮರು ವಿಂಗಡಣೆಯನ್ನು ವಿರೋಧ ಮಾಡಿದೆವು. ನಾವು ಎಂದಿಗೂ ಮಹಿಳಾ ಮೀಸಲಾತಿಯ ಪರವಾಗಿಯೇ ಇದ್ದೇವೆ ಎಂದರು.

ಇಲ್ಲಿಯವರೆಗೆ ಕಾಯಬೇಕಿರಲಿಲ್ಲ

ಸಂವಿಧಾನಕ್ಕೆ  73, 74ನೇ ತಿದ್ದುಪಡಿಯನ್ನು ತಂದಿದ್ದು ಕಾಂಗ್ರೆಸ್ ಪಕ್ಷ. ಸ್ಥಳೀಯ ಸಂಸ್ಥೆಗಳಲ್ಲಿ 50% ಮಹಿಳಾ ಮೀಸಲಾತಿ ತಂದಿದ್ದು ಕೂಡ ಕಾಂಗ್ರೆಸ್ ಪಕ್ಷವೇ. 2023 ರಲ್ಲಿಯೇ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರವಾಗಿದ್ದು ಆಗಲೇ ಅದನ್ನು ಜಾರಿ ಮಾಡಬೇಕಿತ್ತು, ಇಲ್ಲಿಯವರೆಗೆ ಏಕೆ ಕಾಯಬೇಕಿತ್ತು ಎಂದರು.

ವಿರೋಧಿಸಿದವರೇ ಗ್ಯಾರಂಟಿ  ಕೊಡುತ್ತಿದ್ದಾರೆ

ಗ್ಯಾರಂಟಿಗಳನ್ನು ಎಲ್ಲಾ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ ಸೇರಿಸಿರುವ ಬಗ್ಗೆ ಮಾತನಾಡಿ 2023 ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ವಿರೋಧಿಸಿದ್ದರು. ಈಗ ಅವರೇ ಯೋಜನೆಗಳನ್ನು ಘೋಷಿಸುತ್ತಿದ್ದಾರೆ ಎಂದರು.

ಮಹಿಳಾ ಮೀಸಲಾತಿ ಪರವಾಗಿದ್ದೇವೆ ಎಂದು ಪ್ರಧಾನಿಗಳಿಗೆ ತಿಳಿಸಿದೆ

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಹಾಗೂ ಪ್ರಧಾನಿಗಳ ನಡುವೆ ಆದ ಮಾತುಕತೆಯ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಮಹಿಳಾ ಮೀಸಲಾತಿ ಬಗ್ಗೆ ನಿಮ್ಮ ನಿಲುವೇನು ಎಂದು ಪ್ರಧಾನಿಗಳು ಕೇಳಿದ್ದರು. ನಾವು ಮಹಿಳಾ ಮೀಸಲಾತಿಯ ಪರವಾಗಿದ್ದೇವೆ ಎಂದು ತಿಳಿಸಿದ್ದಾಗಿ ಮುಖ್ಯಮಂತ್ರಿಗಳು ಹೇಳಿದರು.

ಮಹಿಳಾ ಮೀಸಲಾತಿ ಮಸೂದೆಯನ್ನು ತಿರಸ್ಕರಿಸುವ ಮೂಲಕ ಕಾಂಗ್ರೆಸ್ ಭ್ರೂಣ ಹತ್ಯೆ ಮಾಡಿದೆ ಎಂದು ಪ್ರಧಾನಿಗಳು ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಪ್ರಧಾನಿಗಳದ್ದು ತಾರತಮ್ಯದ ಧೋರಣೆಯಾಗಿದ್ದು, ಅವರು ಸಾಮಾಜಿಕ ನ್ಯಾಯದ ಪರವಾಗಿಲ್ಲ ಎಂದರು.

ಅವರು ಅಧಿಕಾರಕ್ಕೆ ಬಂದು 12 ವರ್ಷಗಳಲ್ಲಿ ಮಹಿಳಾ ಮೀಸಲಾತಿ ಏಕೆ ಜಾರಿಮಾಡಲಿಲ್ಲ ಎಂದು ಪ್ರಶ್ನಿಸಿದರು. ಈಗಲೂ 2023ರ ಪ್ರಕಾರ ಜಾರಿ ಮಾಡಲಿ. ಕ್ಷೇತ್ರ ಮರು ವಿಂಗಡನೆಯನ್ನು ಜನಗಣತಿಯಾದ ನಂತರ ಮಾಡಿದರೆ ಸೂಕ್ತ ಎಂದರು. ಲೋಕಸಭಾ ಸ್ಥಾನಗಳನ್ನು ಶೇಕಡ 50% ರಷ್ಟು ಹೆಚ್ಚು ಮಾಡುವುದಾಗಿ ಹೇಳಿದ್ದು,  ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗುತ್ತದೆ. ಜನಗಣತಿ ಮಾಡಿ ಎಲ್ಲರಿಗೂ ಸಮಾನವಾಗಿ ಸ್ಥಾನಗಳನ್ನು ಕೊಡಬೇಕು ಎಂದರು.

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ

ಜನಸಂಖ್ಯೆ ನಿಯಂತ್ರಣವನ್ನು ದಕ್ಷಿಣ ಭಾರತದ ರಾಜ್ಯಗಳು ಉತ್ತಮವಾಗಿ ಮಾಡಿದ್ದು, ಉತ್ತರ ಭಾರತದ ರಾಜ್ಯಗಳು ಮಾಡಿಲ್ಲ. ಸಹಜವಾಗಿಯೇ ಅವರಿಗೆ ಅನುಕೂಲ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ಅನಾನುಕೂಲವಾಗಲಿದೆ ಎಂದರು.

ಬಹುಮತವಿಲ್ಲ ಎಂದು ಗೊತ್ತಿದ್ದು ಮಸೂದೆಯನ್ನು ಮಂಡಿಸಬಾರದಿತ್ತು

ಮುಂದಿನ ದಿನಗಳಲ್ಲಿ  ಕಾಂಗ್ರೆಸ್ಸಿಗೆ ಜನ ಪಾಠ ಕಲಿಸಲಿದ್ದಾರೆ ಎಂಬ ಪ್ರಧಾನಿಗಳ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ,  ಪ್ರಧಾನಿಗಳು  ರಾಜಕೀಯ ಮಾಡುತ್ತಿದ್ದಾರೆ. ಮೂರನೇ ಎರಡರಷ್ಟು ಬಹುಮತವಿಲ್ಲ ಎಂದು ಗೊತ್ತಿದ್ದೂ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡಣೆಯನ್ನು ಒಟ್ಟಿಗೆ ತರಬೇಕಾದ ಅಗತ್ಯವಿರಲಿಲ್ಲ  ಎಂದು ಹೇಳಿದರು.

Key words: Delimitation, after, new census, CM Siddaramaiah

The post ಹೊಸ ಜನಗಣತಿ ನಂತರ ಕ್ಷೇತ್ರ ಮರುವಿಂಗಡಣೆ ಮಾಡುವುದು ಸೂಕ್ತ – ಸಿಎಂ ಸಿದ್ದರಾಮಯ್ಯ ಅಭಿಮತ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು ಮಾಡುವ ಬಗ್ಗೆ ಯಾವುದೇ ಆಧಿಕೃತ ಮಾಹಿತಿ ಬಂದಿಲ್ಲ- ಸ್ಪೀಕರ್ ಯುಟಿ ಖಾದರ್

ಮಂಗಳೂರು,ಏಪ್ರಿಲ್,20,2026 (www.justkannada.in):  ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ...

ಟ್ರಂಪ್ ಹೇಳಿದ್ದನ್ನು ಪಾಲಿಸುವ ಸಲುವಾಗಿ ಮೋದಿ ಇಸ್ರೇ‍ಲ್ ಗೆ ಭೇಟಿ ನೀಡಿದ್ದರು- ರಾಹುಲ್ ಗಾಂಧಿ

ಚೆನ್ನೈ,ಏಪ್ರಿಲ್,20,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಶುರುವಾಗುವ ಮೊದಲು ಅಮೇರಿಕಾ ಅಧ್ಯಕ್ಷ ಡೊನಾಲ್ಡ್...

ಜಾತಿ ವ್ಯವಸ್ಥೆಯಿರುವವೆಗೂ ಬಸವ ತತ್ವಗಳು ಪ್ರಸ್ತುತ- ಸಿಎಂ ಸಿದ್ದರಾಮಯ್ಯ

ಮೈಸೂರು, ಏಪ್ರಿಲ್, 20,2026 (www.justkannada.in): ಚಲನೆಯಿಲ್ಲದ ಜಾತಿವ್ಯವಸ್ಥೆ ಇರುವವೆರೆಗೂ ಬಸವಣ್ಣನವರ ತತ್ವಗಳು...

ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು, ಏಪ್ರಿಲ್, 20,2026 (www.justkannada.in): ರಾಜ್ಯದಲ್ಲಿ  ಬಿಸಿಲನ ಆರ್ಭಟ ಜೋರಾಗಿದ್ದು, ಬಿಸಿಲನ...