31
August, 2025

A News 365Times Venture

31
Sunday
August, 2025

A News 365Times Venture

ಹೋಂ ಸ್ಟೆ ನಿರ್ಮಿಸಲು ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಿ

Date:

ಬೆಂಗಳೂರು ಗ್ರಾಮಾಂತರ, ಜುಲೈ,30,2025 (www.justkannada.in): ಕೇಂದ್ರ ಸರ್ಕಾರದ ಬುಡಕಟ್ಟು ವ್ಯವಹಾರದ ಸಚಿವಾಲಯದ ಧರ್ತಿ ಅಬಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನ ಯೋಜನೆಯಡಿಯಲ್ಲಿ ಆಯ್ಕೆಯಾಗಿರುವ 14 ಗ್ರಾಮಗಳಲ್ಲಿನ ಬುಡಕಟ್ಟು/ ಆದಿವಾಸಿ ಸಮುದಾಯದವರು ಹೋಂಸ್ಟೇ ನಿರ್ಮಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯ ಸಾಸಲು ಗ್ರಾಮ ಪಂಚಾಯಿತಿಯ ಗುಮ್ಮನಹಳ್ಳಿ ಗ್ರಾಮ, ಹಣಬೆ ಗ್ರಾಮ ಪಂಚಾಯಿತಿಯ ಬೊಮ್ಮನಹಳ್ಳಿ ಗ್ರಾಮ, ಬಿಜ್ಜವಾರ ಗ್ರಾಮ ಪಂಚಾಯಿತಿಯ ಹೊಲೆರಹಳ್ಳಿ ಗ್ರಾಮ, ಗೊಡ್ಡುಮುದ್ದೇನಹಳ್ಳಿ ಗ್ರಾಮ ಪಂಚಾಯಿತಿಯ ವೆಂಕಟೇನಹಳ್ಳಿ ಗ್ರಾಮ, ಮಂಡಿಬೆಲೆ ಗ್ರಾಮ ಪಂಚಾಯಿತಿಯ ಚಿಕ್ಕ ತತ್ತಮಂಗಲ ಗ್ರಾಮ, ಕಾರಹಳ್ಳಿ ಗ್ರಾಮ ಪಂಚಾಯಿತಿಯ ಕೆಂಪತಿಮ್ಮನಹಳ್ಳಿ ಗ್ರಾಮ, ಅಥೇಶ್ವರ ಗ್ರಾಮ ಪಂಚಾಯಿತಿಯ ಯರ್ತಿಗಾನಹಳ್ಳಿ ಮತ್ತು ಭುವನಹಳ್ಳಿ ಗ್ರಾಮ, ಬೆಟ್ಟಕೋಟೆ ಗ್ರಾಮ ಪಂಚಾಯಿತಿಯ ರಾಯಸಂದ್ರ ಗ್ರಾಮ, ಯಲಿಯೂರು ಗ್ರಾಮ ಪಂಚಾಯಿತಿಯ ಮಟ್ಟಬರಳು ಮತ್ತು ಬೊಮ್ಮನಹಳ್ಳಿ ಗ್ರಾಮ, ನಲ್ಲೂರು ಗ್ರಾಮ ಪಂಚಾಯಿತಿಯ ಜೊನ್ನಹಳ್ಳಿ ಗ್ರಾಮ, ಕೋರಮಂಗಲ ಗ್ರಾಮ ಪಂಚಾಯಿತಿಯ ಕೊಂಡೇನಹಳ್ಳಿ ಗ್ರಾಮ ಮತ್ತು ದೊಡ್ಡನಳ್ಳಾಲ ಗ್ರಾಮ ಪಂಚಾಯಿತಿಯ ವಲಗೆರೆಪುರ ಈ ಗ್ರಾಮಗಳನ್ನು ಅಭಿವೃದ್ಧಿಪಡಿಸಿ ಬುಡಕಟ್ಟು ಸಮುದಾಯದ ಸಂಸ್ಕೃತಿ, ಪರಂಪರೆ ಮತ್ತು ನೈಸರ್ಗಿಕ ಸಂಪತ್ತನ್ನು ಪ್ರವಾಸಿಗರಿಗೆ ಪರಿಚಯಿಸಲು ಉದ್ದೇಶಿಸಲಾಗಿದೆ.

ಹೋಂ ಸ್ಟೇ ನಿರ್ಮಿಸಲು ರೂ.5.00 ಲಕ್ಷ, ನವೀಕರಿಸಲು ರೂ.3.00 ಲಕ್ಷ ಸಹಾಯಧನ ಯೋಜನೆಯನ್ನು ಪ್ರವಾಸೋದ್ಯಮ ಇಲಾಖೆಯಿಂದ ನೀಡಲಾಗುತ್ತದೆ.

ಅರ್ಹ ಆಸಕ್ತ ವ್ಯಕ್ತಿಗಳು ಆಗಸ್ಟ್ 11 ರೊಳಗೆ ಅರ್ಜಿ ನಮೂನೆಯನ್ನು ಜಿಲ್ಲಾ ಪ್ರವಾಸೋದ್ಯಮ ಕಛೇರಿಯಲ್ಲಿ ಪಡೆದು ಅವಶ್ಯಕ ದಾಖಲೆಗಳಾದ ಜಾತಿ ಪ್ರಮಾಣ ಪತ್ರ (ಪರಿಶಿಷ್ಟ ವರ್ಗ), ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಮನೆಯ ದಾಖಲೆ, ಮನೆಯ ಪೋಟೋ, ಡಿಕ್ಲೇರೇಷನ್ ಫಾರ್ಮ್ , ಗ್ರಾಮ ಪಂಚಾಯಿತಿಯ ಎನ್.ಓ.ಸಿ, ಪೋಲೀಸ್ ಇಲಾಖೆಯ ಎನ್.ಓ.ಸಿ ದಾಖಲೆಗಳ ಜೆರಾಕ್ಸ್ ಪ್ರತಿಗಳೊಂದಿಗೆ ಸಹಾಯಕ ನಿರ್ದೇಶಕರ ಕಛೇರಿ, ಪ್ರವಾಸೋದ್ಯಮ ಇಲಾಖೆ,ನೆಲಮಹಡಿ 09, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:080-22040633 ಅನ್ನು ಕಛೇರಿಯ ಸಮಯದಲ್ಲಿ  ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.vtu

Key words: Applications, invited, grant, build, homestay

The post ಹೋಂ ಸ್ಟೆ ನಿರ್ಮಿಸಲು ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಧರ್ಮಸ್ಥಳ ಕೇಸ್ :ಗೃಹ ಸಚಿವರ ಭೇಟಿಯಾಗಿ ಚರ್ಚಿಸಿದ SIT ಮುಖ್ಯಸ್ಥರು: ತನಿಖಾ ಪ್ರಗತಿ ವರದಿ ಸಲ್ಲಿಕೆ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಹೂತಿಟ್ಟ ಆರೋಪ ಪ್ರಕರಣ ಕುರಿತು...

ಧರ್ಮಸ್ಥಳ ಕೇಸ್: ದೂರುದಾರನನ್ನು ಮಂಪರು ಪರೀಕ್ಷೆಗೆ ಒಳಪಡಿಸಿ- MLC ಸಿ.ಟಿ ರವಿ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆಯಾಗುತ್ತಿದ್ದು...

ಧರ್ಮಸ್ಥಳದ ವಿಚಾರದಲ್ಲಿ ಬಿಜೆಪಿ ರಾಜಕೀಯ: ಸದನದಲ್ಲಿ ಇಂದು ಪರಮೇಶ್ವರ್ ಮಾತು-ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಆಗಸ್ಟ್,18,2025 (www.justkannada.in):  ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸಾರಿಗೆ...

ಮೈಸೂರು: ಅತಿಹೆಚ್ಚು ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಸ್ಟೇಷನ್‌ ಉದ್ಘಾಟಿಸಿದ ಸೆಸ್ಕ್ ಎಂಡಿ

ಮೈಸೂರು, ಆಗಸ್ಟ್‌, 18, 2025 (www.justkannada.in): ಮೈಸೂರಿನಲ್ಲಿ ನೂತನವಾಗಿ ಆರಂಭಿಸಿರುವ ಅತ್ಯಧಿಕ...