ಬೆಂಗಳೂರು,ಆಗಸ್ಟ್,16,2025 (www.justkannada.in): ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ನಗರ್ತಪೇಟೆಯಲ್ಲಿನ ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಸಂಭವಿಸಿದ್ದ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.
ಮದನ್ ಸಿಂಗ್(34) ಪತ್ನಿ ಸಂಗೀತಾ(33), ಪುತ್ರರಾದ ಮಿತೇಶ್(8), ವಿಹಾನ್(7) ಹಾಗೂ ಕಾರ್ಮಿಕ ಸುರೇಶ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮುಂಜಾನೆ 3.30ರ ಸುಮಾರಿಗೆ ಶಾರ್ಟ್ ಸರ್ಕ್ಯೂಟ್ನಿಂದ ಅಂಗಡಿಯಲ್ಲಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗುತ್ತಿದ್ದು, ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಿ ಐದು ಮೃತದೇಹಗಳನ್ನ ಹೊರತೆಗೆದಿದ್ದಾರೆ.
ಇನ್ನು ಘಟನಾ ಸ್ಥಳಕ್ಕೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಭೇಟಿ ನೀಡಿ ಪರಿಶೀಲಿಸಿದ್ದು ಮೃತರ ಕುಟುಂಬಕ್ಕೆ ವೈಯಕ್ತಿಕವಾಗಿ ತಲಾ 5 ಲಕ್ಷ ಪರಿಹಾರ ಘೋಷಿಸಿದ್ದಾರೆ. ಹಾಗೆಯೇ ಸರ್ಕಾರದಿಂದಲೂ ಪರಿಹಾರ ಕೊಡಿಸಿರುವ ಭರವಸೆ ನೀಡಿದ್ದಾರೆ.
Key words: Five people, death, fire, Bangalore
The post ಅಗ್ನಿ ದುರಂತದಲ್ಲಿ ಐವರು ಸಜೀವ ದಹನ: ವೈಯಕ್ತಿಕ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಚಿವ ಜಮೀರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.