16
March, 2026

A News 365Times Venture

16
Monday
March, 2026

A News 365Times Venture

ಅಧಿವೇಶನದಲ್ಲಿ ಕರ್ತವ್ಯ ನಿರ್ಲಕ್ಷ್ಯ ಆರೋಪ: ಮೂವರ ಅಧಿಕಾರಿಗಳ ಅಮಾನತಿಗೆ ಸಿಎಂ ಸೂಚನೆ

Date:

ಬೆಂಗಳೂರು,ಮಾರ್ಚ್,16,2026 (www.justkannada.in):  ಬಜೆಟ್ ಅಧಿವೇಶನದ ವೇಳೆ ಕರ್ತವ್ಯ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಮೂವರು ಸರ್ಕಾರಿ ಅಧಿಕಾರಿಗಳನ್ನು ಅಮಾನತುಗೊಳಿಸಲು ಸಿಎಂ ಸಿದ್ದರಾಮಯ್ಯ  ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ವಿಧಾನ ಸಭೆಯ ಕಲಾಪದಲ್ಲಿ  ಕೇಳಲಾದ ಪ್ರಶ್ನೆಗಳಿಗೆ ಸಮರ್ಪಕ ಮಾಹಿತಿ ನೀಡದೆ ನಿರ್ಲಕ್ಷ್ಯ ತೋರಿದ  ಅಧಿಕಾರಿಗಳ ವಿರುದ್ಧ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಈ ಮಧ್ಯೆ ಕರ್ತವ್ಯ ಲೋಪ ಎಸಗಿದ ಕಂದಾಯ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಹಾಗೂ ಲೋಕೋಪಯೋಗಿ (PWD) ಇಲಾಖೆಯ ತಲಾ ಒಬ್ಬ ಅಧಿಕಾರಿಯನ್ನ ಅಮಾನತುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಅವರು ಖಡಕ್ ಸೂಚನೆ ನೀಡಿದ್ದಾರೆ.

ಅಧಿವೇಶನದ ವೇಳೆ ಶಾಸಕರು ಕೇಳಿದ ಪ್ರಶ್ನೆಗಳಿಗೆ ಇಲಾಖೆಗಳಿಂದ ಸೂಕ್ತ ಮತ್ತು ನಿಖರವಾದ ಮಾಹಿತಿ ಒದಗಿಸದ ಕಾರಣ ಸ್ಪೀಕರ್ ಯು.ಟಿ. ಖಾದರ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿ ಸದನವನ್ನು ಮುಂದೂಡಿದ್ದರು. ಸ್ಪೀಕರ್ ಅವರ ಆಕ್ರೋಶದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಈ ಕ್ರಮ ಕೈಗೊಂಡಿದ್ದಾರೆ.ಅಮಾನತುಗೊಂಡ ಅಧಿಕಾರಿಗಳಲ್ಲದೆ, ಆಯಾ ಇಲಾಖೆಗಳ ಹಿರಿಯ ಅಧಿಕಾರಿಗಳಿಗೂ ಈ ಕುರಿತು ವಿವರಣೆ ಕೋರಿ ನೋಟಿಸ್ ಜಾರಿ ಮಾಡಲಾಗಿದೆ ಎನ್ನಲಾಗಿದೆ.

Key words: CM orders, suspension, three officer, Session

The post ಅಧಿವೇಶನದಲ್ಲಿ ಕರ್ತವ್ಯ ನಿರ್ಲಕ್ಷ್ಯ ಆರೋಪ: ಮೂವರ ಅಧಿಕಾರಿಗಳ ಅಮಾನತಿಗೆ ಸಿಎಂ ಸೂಚನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಇರಾನ್-ಇಸ್ರೇಲ್ ಯುದ್ದ: 4335 ವಿಮಾನಗಳ ಹಾರಾಟ ರದ್ದು

ನವದೆಹಲಿ,ಮಾರ್ಚ್,16,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದ  ಪ್ರಾರಂಭವಾದಾಗಿನಿಂದ ಈವರೆಗೆ 4335 ವಿಮಾನಗಳ ಹಾರಾಟ...

ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡೆಗೂ ಪ್ರಾಶಸ್ತ್ಯ ನೀಡಿ – ಡಾ.ಈ.ಸಿ.ನಿಂಗರಾಜ್ ಗೌಡ.

ಮೈಸೂರು, ಮಾರ್ಚ್ 16,2026 (www.justkannada.in): ಈಗಿನ ವಿದ್ಯಾರ್ಥಿಗಳು ಓದುವುದರ ಜೊತೆಗೆ ಕ್ರೀಡಾ...

ಮೈಸೂರು ಅರಮನೆ ಮುಂಭಾಗ ಟಾಂಗಾ ಸ್ಟ್ಯಾಂಡ್‌ ಗೆ ತೀವ್ರ ವಿರೋಧ.

ಮೈಸೂರು,ಮಾರ್ಚ್,16,2026 (www.justkannada.in): ಕೇಂದ್ರ ಸರ್ಕಾರದ ಪ್ರವಾಸೋದ್ಯಮ ಸಚಿವಾಲಯ ಜಾರಿಗೆ ತಂದಿರುವ ‘ಸ್ವದೇಶ...

4,824 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆಗೆ ಸಮ್ಮತಿ: ಸಚಿವ ಎಂ. ಬಿ. ಪಾಟೀಲ್

ಬೆಂಗಳೂರು,ಮಾರ್ಚ್,14,2026 (www.justkannada.in): ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ, ಕೋಲಾರ, ರಾಮನಗರ ಸೇರಿದಂತೆ  13...