26
August, 2026

A News 365Times Venture

26
Wednesday
August, 2026

A News 365Times Venture

ಅನಧಿಕೃತ ನಿಲುಗಡೆ: 382 ವಾಹನಗಳಿಗೆ ನೋಟಿಸ್ ಜಾರಿ

Date:

ಮೈಸೂರು,ಆಗಸ್ಟ್,25,2026 (www.justkannada.in): ಮೈಸೂರು ನಗರದ ಸಾರ್ವಜನಿಕ ರಸ್ತೆಗಳು, ಪಾದಚಾರಿ ಮಾರ್ಗಗಳು ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ದೀರ್ಘಕಾಲದಿಂದ ಅನಧಿಕೃತವಾಗಿ ನಿಲುಗಡೆ ಮಾಡಿರುವ ಹಾಗೂ ಬಳಕೆಯಲ್ಲಿಲ್ಲದ ವಾಹನಗಳನ್ನು ತೆರವುಗೊಳಿಸಲು ಮೈಸೂರು ಮಹಾನಗರ ಪಾಲಿಕೆಯ ವತಿಯಿಂದ ಕ್ರಮ ಕೈಗೊಳ್ಳಲಾಗಿದೆ.

ಪಾಲಿಕೆಯ ವ್ಯಾಪ್ತಿಯಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಒಟ್ಟು 382 ಪರಿತ್ಯಕ್ತ/ಅನುಪಯುಕ್ತ ವಾಹನಗಳನ್ನು ಗುರುತಿಸಲಾಗಿದ್ದು, ಸದರಿ ವಾಹನಗಳ ಮೇಲೆ ನೋಟಿಸ್ ಅಂಟಿಸುವ ಕಾರ್ಯಕ್ಕೆ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತೆ ಸವಿತಾ ಎಂ.ಕೆ. ಅವರು ಚಾಲನೆ ನೀಡಿದರು.

ಸಾರ್ವಜನಿಕ ರಸ್ತೆಗಳು ಹಾಗೂ ಪಾದಚಾರಿ ಮಾರ್ಗಗಳಲ್ಲಿ ಇಂತಹ ವಾಹನಗಳನ್ನು ನಿಲುಗಡೆ ಮಾಡುವುದರಿಂದ ಸಾರ್ವಜನಿಕ ಸಂಚಾರಕ್ಕೆ ಅಡಚಣೆ ಉಂಟಾಗುವುದರೊಂದಿಗೆ, ನಗರದ ಸ್ವಚ್ಛತೆ ಮತ್ತು ಸೌಂದರ್ಯಕ್ಕೂ ಧಕ್ಕೆಯಾಗುತ್ತಿದೆ. ಅಲ್ಲದೆ, ಕೆಲವು ವಾಹನಗಳು ತ್ಯಾಜ್ಯ ಸಂಗ್ರಹಣೆ, ಅಕ್ರಮ ಚಟುವಟಿಕೆ ಹಾಗೂ ಸೊಳ್ಳೆ ಸೇರಿದಂತೆ ರೋಗವಾಹಕಗಳ ಉತ್ಪತ್ತಿಗೆ ಕಾರಣವಾಗುವ ಸಾಧ್ಯತೆಯಿದೆ.

ಆದ್ದರಿಂದ, ನೋಟಿಸ್ ಅಂಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಸಂಬಂಧಪಟ್ಟ ವಾಹನದ ಮಾಲೀಕರು ತಮ್ಮ ವಾಹನವನ್ನು ಸದರಿ ಸ್ಥಳದಿಂದ ತೆರವುಗೊಳಿಸಬೇಕು. ನಿಗದಿತ ಅವಧಿಯೊಳಗೆ ವಾಹನವನ್ನು ತೆರವುಗೊಳಿಸದಿದ್ದಲ್ಲಿ, ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ, 1976ರ ಕಲಂ 127 ಹಾಗೂ ಮೈಸೂರು ಮಹಾನಗರ ಪಾಲಿಕೆಯ ಉಪವಿಧಿಗಳು ಮತ್ತು ಪಾಲಿಕೆ ಪರಿಷತ್ತಿನ ನಿರ್ಣಯದನ್ವಯ, ವಾಹನವನ್ನು ಪರಿತ್ಯಕ್ತ/ಅನುಪಯುಕ್ತ ವಾಹನವೆಂದು ಪರಿಗಣಿಸಿ ಟೋಯಿಂಗ್ ಮೂಲಕ ತೆರವುಗೊಳಿಸಲಾಗುವುದು. ವಾಹನ ತೆರವು ಹಾಗೂ ಸಾಗಾಣಿಕೆ ವೆಚ್ಚವನ್ನು ಸಂಬಂಧಪಟ್ಟ ವಾಹನದ ಮಾಲೀಕರಿಂದ ವಸೂಲಿ ಮಾಡಲಾಗುವುದು. ಅಗತ್ಯವಿದ್ದಲ್ಲಿ ವಾಹನವನ್ನು ಹರಾಜು ಅಥವಾ ಸ್ಕ್ರ್ಯಾಪ್ ಮಾಡುವ ಕ್ರಮವನ್ನೂ ಕೈಗೊಳ್ಳಲಾಗುವುದು.

ವಾಹನ ಮಾಲೀಕರು ಪಾಲಿಕೆಯ ಕ್ರಮಕ್ಕೆ ಅವಕಾಶ ನೀಡದೆ, ನಿಗದಿತ ಅವಧಿಯೊಳಗೆ ತಮ್ಮ ವಾಹನಗಳನ್ನು ಸ್ವಯಂಪ್ರೇರಿತವಾಗಿ ತೆರವುಗೊಳಿಸಿ ಸಾರ್ವಜನಿಕ ರಸ್ತೆ ಮತ್ತು ಸ್ಥಳಗಳನ್ನು ಅಡೆತಡೆಮುಕ್ತವಾಗಿಡಲು ಸಹಕರಿಸುವಂತೆ ಆಯುಕ್ತೆ ಸವಿತಾ ಎಂ.ಕೆ.  ಅವರು ಮನವಿ ಮಾಡಿದ್ದಾರೆ.

ಕಾರ್ಯಕ್ರಮದಲ್ಲಿ ಮೈಸೂರು ಮಹಾನಗರ ಪಾಲಿಕೆಯ ಕಾರ್ಯಪಾಲಕ ಅಭಿಯಂತರರು (ಪರಿಸರ), ಪರಿಸರ ಅಭಿಯಂತರರು, ಆರೋಗ್ಯ ನಿರೀಕ್ಷಕರು ಹಾಗೂ ಮೇಲ್ವಿಚಾರಕರು ಉಪಸ್ಥಿತರಿದ್ದರು.

Key words: Unauthorized, parking, Mysore, Notices, 382 vehicles

The post ಅನಧಿಕೃತ ನಿಲುಗಡೆ: 382 ವಾಹನಗಳಿಗೆ ನೋಟಿಸ್ ಜಾರಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾನೀಗ ಸರ್ಕಾರದ ಮುಖ್ಯಸ್ಥನಲ್ಲ: ಆದರೂ ನಾನು ಒಳ ಮೀಸಲಾತಿ, ಸಾಮಾಜಿಕ ನ್ಯಾಯದ ಪರ- ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಆಗಸ್ಟ್‌, 25,2026 (www.justkannada.in): ನಾನೀಗ ಸರ್ಕಾರದ ಮುಖ್ಯಸ್ಥನಲ್ಲ. ಅಧಿಕಾರ ಇರಲಿ, ಇಲ್ಲದಿರಲಿ...

ಸದನದಲ್ಲಿ ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಕಾಂಗ್ರೆಸ್ ಪಲಾಯಾನ-ಆರ್.ಅಶೋಕ್

ಬೆಂಗಳೂರು,ಆಗಸ್ಟ್,25,2026 (www.justkannada.in):  ಅಧಿವೇಶನದಲ್ಲಿ ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಸದನವನ್ನ ಬಂದ್ ಮಾಡಿ...

ರಾಯಚೂರು ಐ.ಐ.ಐ.ಟಿಯಲ್ಲಿ 12 ಕೋಟಿ ರೂ. ವೆಚ್ಚದಲ್ಲಿ AI ಉತ್ಕೃಷ್ಟತಾ ಕೇಂದ್ರ ಸ್ಥಾಪನೆ-ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಆಗಸ್ಟ್,26,2026 (www.justkannada.in):  ರಾಜ್ಯದಲ್ಲಿ ಪರಿಪೂರ್ಣ ಕೈಗಾರಿಕಾ ಬೆಳವಣಿಗೆ ಸಾಧಿಸಲು ಸರಕಾರ ತೀರ್ಮಾನಿಸಿದ್ದು,...

ಆ.29ಕ್ಕೆ ಮೈಸೂರು ನೂತನ ಪತ್ರಕರ್ತರ ಭವನದ ಕಾಮಗಾರಿಗೆ ಚಾಲನೆ: ವಾರ್ಷಿಕ ಪ್ರಶಸ್ತಿಗಳು ಪ್ರಕಟ

ಮೈಸೂರು,ಆಗಸ್ಟ್,26,2026 (www.justkannada.in):  ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಪತ್ರಕರ್ತರ ನೂತನ ಭವನ...