30
August, 2025

A News 365Times Venture

30
Saturday
August, 2025

A News 365Times Venture

ಅನುದಾನ ಸಮರ್ಪಕ ಬಳಸಿ:  SC, ST ಸಮುದಾಯಕ್ಕೆ ಸರ್ಕಾರದ ಯೋಜನೆ ಶೇ 100ರಷ್ಟು ತಲುಪಿಸಿ- ಸಿಎಂ ಸಿದ್ದರಾಮಯ್ಯ ಸೂಚನೆ

Date:

ಬೆಂಗಳೂರು,ಅಗಸ್ಟ್,16,2025 (www.justkannada.in): ಸರ್ಕಾರದ ಯೋಜನೆಗಳು ಶೇ.100ರಷ್ಟು ಎಸ್‌ಸಿ/ಎಸ್‌ಟಿ ಜನಸಂಖ್ಯೆಗೆ ತಲುಪುವಂತೆ ಕ್ರಮ ಕೈಗೊಳ್ಳಬೇಕು. ಅನುದಾನವನ್ನ ಸಮರ್ಪಕವಾಗಿ ಬಳಸಿಕೊಂಡು ಶೇ.100ರಷ್ಟು ಪ್ರಗತಿ ಸಾಧಿಸಲೇ ಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧ ಸಭಾಂಗಣದಲ್ಲಿ ರಾಜ್ಯ ಅನುಸೂಚಿತ ಜಾತಿಗಳು, ಅನುಸೂಚಿತ ಪಂಗಡಗಳ ಅಭಿವೃದ್ಧಿ ಪರಿಷತ್ತಿನ ಸಭೆ ನಡೆಯಿತು.

ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಳೆದ ವರ್ಷ ಎಸ್‌ಸಿ ಎಸ್‌ಸಿ/ಟಿಎಸ್‌ಪಿ ಕಲ್ಯಾಣ ಕಾರ್ಯಕ್ರಮಗಳಿಗಾಗಿ ರೂ. 38793 ಕೋಟಿ ಬಿಡುಗಡೆಯಾಗಿದ್ದು, ರೂ. 38,717ಕೋಟಿ ವೆಚ್ಚ ಮಾಡಿ ಶೇ.97ರಷ್ಟು ಪ್ರಗತಿ ಸಾಧಿಸಿದ್ದೇವೆ. ಕೇಂದ್ರ ಸರ್ಕಾರದಿಂದ ಬರಬೇಕಾಗಿದ್ದ ರೂ. 880 ಕೋಟಿ ಅನುದಾನ ಬಿಡುಗಡೆಯಾಗಿಲ್ಲ. ಇದನ್ನು ಬಿಡುಗಡೆ ಮಾಡಿಸಲು ಕ್ರಮ ಕೈಗೊಳ್ಳುವಂತೆ  ಸೂಚನೆ ನೀಡಿದರು.

ಎಸ್‌ಸಿಎಸ್ಪಿ/ ಟಿಎಸ್‌ಪಿ ಕಾಯ್ದೆ ಜಾರಿಗೊಂಡು 10 ವರ್ಷವಾದ ಹಿನ್ನೆಲೆಯಲ್ಲಿ ಇದರ ಅನುಷ್ಠಾನದ ಪ್ರಗತಿ ಬಗ್ಗೆ ಐಸೆಕ್ ವತಿಯಿಂದ ಮೌಲ್ಯಮಾಪನ ನಡೆಸಿದ್ದೇವೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಜನಸಂಖ್ಯೆ ಹೆಚ್ಚಿರುವ 39 ತಾಲೂಕುಗಳನ್ನು ಗುರುತಿಸಿ ಅಧ್ಯಯನ ಕೈಗೊಳ್ಳಲಾಗಿದೆ. ಶಿಕ್ಷಣ, ಆರೋಗ್ಯ, ಜೀವನಮಟ್ಟ ಸುಧಾರಣೆ ಮತ್ತು ಬಡತನ ನಿರ್ಮೂಲನೆ ಮಾನದಂಡಗಳನ್ನು ಪರಿಗಣಿಸಿ ಸಮೀಕ್ಷೆ ನಡೆಸಲಾಗಿದೆ. ಅಭಿವೃದ್ಧಿ ಅನುದಾನ ಬಿಡುಗಡೆಯಲ್ಲಿ ಈ ಅವಧಿಯಲ್ಲಿ ಶೇ.9.6 ರಷ್ಟು ವಾರ್ಷಿಕ ಪ್ರಗತಿ ಸಾಧಿಸಲಾಗಿದೆ. ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ರಾಜ್ಯ ಕಳೆದ 10 ವರ್ಷಗಳಲ್ಲಿ ವಿವಿಧ ಮಾನದಂಡಗಳಲ್ಲಿ ಮುಂಚೂಣಿಯಲ್ಲಿರುವುದು ಸ್ಪಷ್ಟವಾಗಿದೆ.

ಕಾಯ್ದೆ ಪ್ರಕಾರ ಪ್ರತಿವರ್ಷ ಕನಿಷ್ಠ ಶೇ.24.1 ರಷ್ಟು ಅನುದಾನ ನೀಡಬೇಕಾಗಿದೆ.  ಆದರೆ 2019-20ರ ಅವಧಿಯಲ್ಲಿ ನಿಗದಿತ ಶೇಕಡಾಕ್ಕಿಂತ ಕಡಿಮೆ ಅನುದಾನ ಬಿಡುಗಡೆ ಮಾಡಲಾಗಿದೆ. ಕಾಯ್ದೆ ಜಾರಿ ಬಳಿಕ ಒಟ್ಟು ರೂ.2.97 ಲಕ್ಷ ಕೋಟಿ ವೆಚ್ಚ ಮಾಡಲಾಗಿದೆ. ಯೋಜನೆ ಸಮರ್ಪಕವಾಗಿ ಅನುಷ್ಠಾನವಾಗುತ್ತಿದೆಯೇ ಎಂಬುವುದರ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಸೂಚನೆ ನೀಡಿದರು.

ಜನಸಂಖ್ಯೆಗೆ ಅನುಗುಣವಾಗಿ ಬಜೆಟ್‌ ವಿನಿಯೋಗ, ಸಾಮಾಜಿಕ, ಆರ್ಥಿಕ ಪರಿಸ್ಥಿತಿ ಸುಧಾರಣೆ, ಜೀವನ ಮಟ್ಟ ಮತ್ತು ವಾಸಸ್ಥಳಗಳ ಅಭಿವೃದ್ಧಿಪಡಿಸುವುದು ಕಾಯ್ದೆಯ ಉದ್ದೇಶ. ಯಾವುದೇ ಕಾರಣಕ್ಕೂ ಕಾಯ್ದೆಯ ಆಶಯಕ್ಕೆ ಭಂಗ ಬರಬಾರದು. ಆಯಾ ಇಲಾಖೆಯವರು ಸಮರ್ಪಕ ಕ್ರಿಯಾ ಯೋಜನೆ ರೂಪಿಸಿ ಪರಿಶಿಷ್ಟ ಜಾತಿ/ಪಂಗಡದ ಜನರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಪರಿಸ್ಥಿತಿ ಸುಧಾರಣೆಗೆ ಯೋಜನಾಬದ್ಧವಾಗಿ ಕಾರ್ಯನಿರ್ವಹಿಸಬೇಕು. ಅನುಷ್ಠಾನ ಇಲಾಖೆಗೆ ಬದ್ಧತೆ ಬೇಕು. ಕಳೆದ 10 ವರ್ಷಗಳಲ್ಲಿ ನಿರೀಕ್ಷಿತ ಬದಲಾವಣೆ ಸಾಧ್ಯವಾಗಿಲ್ಲ ಎಂದರು.

ವಿವಿಧ ಕಲ್ಯಾಣ ಯೋಜನೆಗಳಡಿ ಬ್ಯಾಂಕ್‌ಗಳು ಸಕಾಲದಲ್ಲಿ ಹಣಕಾಸು ನೆರವು ಒದಗಿಸುವುದನ್ನು ಖಾತ್ರಿಪಡಿಸಬೇಕು. ಸಾಲ ಸೌಲಭ್ಯ ಒದಗಿಸಲು ವಿಳಂಬ ಧೋರಣೆ ತೋರಿಸುವ ಬ್ಯಾಂಕ್‌ಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಸರ್ಕಾರದ ಯೋಜನೆಗಳು ಶೇ.100ರಷ್ಟು ಎಸ್‌ಸಿ/ಎಸ್‌ಟಿ ಜನಸಂಖ್ಯೆ ತಲುಪುವಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಈ ವರ್ಷ ರೂ. 42017.51 ಕೋಟಿ ಹಂಚಿಕೆ ಮಾಡಿದ್ದೇವೆ. ಈ ಅನುದಾನವನ್ನು ಸಮರ್ಪಕವಾಗಿ ವೆಚ್ಚ ಮಾಡಲು ಅದಷ್ಟು ಬೇಗನೆ ಕ್ರಿಯಾ ಯೋಜನೆ ರೂಪಿಸಿ ಪರಿಣಾಮಕಾರಿಯಾಗಿ ಅನುಷ್ಠಾನ ಕಾರ್ಯ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಅನುದಾನ ಬಾಕಿಯುಳಿಯಬಾರದು. ಶೇ.100ರಷ್ಟು ಪ್ರಗತಿ ಸಾಧಿಸಲೇ ಬೇಕು. ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕಾಯ್ದೆ ಪ್ರಕಾರ ಶಿಕ್ಷೆ ವಿಧಿಸುವ ಕಾರ್ಯ ಆಗಬೇಕು ಎಂದರು.

ದೇವದಾಸಿ ಪುನರ್‌ವಸತಿ ಕಾರ್ಯವನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವ ಉದ್ದೇಶದಿಂದ ಸೆಪ್ಟಂಬರ್‌ ಮೊದಲ ವಾರದಿಂದ ಪುನರ್‌ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ. ದೇವದಾಸಿ ಪದ್ಧತಿಯನ್ನು ಈಗಾಗಲೇ ನಿರ್ಬಂಧಿಸಲಾಗಿದ್ದು, ಯಾವುದೇ ಕಾರಣಕ್ಕೂ ದೇವದಾಸಿ ಪದ್ಧತಿ ಮುಂದುವರೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.

ದೇವದಾಸಿ ಪದ್ಧತಿಯನ್ನು ತೊಡೆದು ಹಾಕಲು ಕಾನೂನಿಗೆ ಸೂಕ್ತ ತಿದ್ದುಪಡಿ ತರಲಾಗುವುದು. ಹೆಣ್ಣು ಮಕ್ಕಳನ್ನು ದೇವದಾಸಿ ಪದ್ಧತಿಗೆ ದೂಡುವ ಪಾಲಕರು ಸೇರಿದಂತೆ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಲಾಗುವುದು. ಸಮಾಜ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ದೇವದಾಸಿ ಪದ್ಧತಿ ಇನ್ನೂ ಜೀವಂತವಾಗಿದೆ ಎಂದರೆ ನಾವೆಲ್ಲರೂ ತಲೆತಗ್ಗಿಸಬೇಕಾಗಿದೆ ಎಂದರು.

ದೇವದಾಸಿಯರೂ ಸೇರಿದಂತೆ, ಸಫಾಯಿ  ಕರ್ಮಚಾರಿಗಳು ಮುಂತಾದ ಸಮಾಜದಿಂದ ನಿರ್ಲಕ್ಷಿತ ವರ್ಗಗಳ ಜೀವನಮಟ್ಟ ಸುಧಾರಣೆಗೆ ಸರಿಯಾದ ಕಾರ್ಯಕ್ರಮಗಳನ್ನು ರೂಪಿಸಬೇಕು. ಕಾರ್ಯಕ್ರಮಗಳು ಯಶಸ್ವಿಯಾಗಿ ಕಾರ್ಯರೂಪಕ್ಕೆ ಬರದೇ ಹೋದರೆ ಸಂವಿಧಾನದ ಉದ್ದೇಶಗಳನ್ನು ಈಡೇರಿಸಲು ಸಾಧ್ಯವಿಲ್ಲ. ಕರ್ನಾಟಕ ಇತಿಹಾಸದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಯೋಜನೆಗಳಿಗೆ ರೂಪಾಯಿ  2.97 ಕೋಟಿಯಷ್ಟು ಹಣ  ಈವರೆಗೆ ಖರ್ಚು ಮಾಡಲಾಗಿದೆ. ಇಷ್ಟೆಲ್ಲಾ ಖರ್ಚು ಮಾಡಿಯೂ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಜೀವನಮಟ್ಟ ಸುಧಾರಣೆ ಆಗದಿದ್ದರೆ ನಾಚಿಕೆಗೇಡು ಎಂದರು.

ಕಳೆದ ಸಾಲಿನಲ್ಲಿ ಎಸ್‌ಸಿಸಿಪಿ/ಟಿಎಸ್‌ಪಿ ವಸತಿ ಯೋಜನೆಗಳಿಗೆ ರೂ.1086 ಕೋಟಿ ಬಿಡುಗಡೆ ಮಾಡಲಾಗಿದೆ. ಪ್ರತಿಯೊಬ್ಬ ಅರ್ಹ ಪರಿಶಿಷ್ಟ ಜಾತಿ/ಪಂಗಡದ ಅಭ್ಯರ್ಥಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಡಾ.ಹೆಚ್.ಸಿ ಮಹಾದೇವಪ್ಪ, ಪ್ರಿಯಾಂಕ ಖರ್ಗೆ, ಡಾ.ಎಂ.ಸಿ.ಸುಧಾಕರ್,‌ ಸತೀಶ್‌ ಜಾರಕಿಹೊಳಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Key words: SC, ST , Meeting, government, CM, Siddaramaiah

 

The post ಅನುದಾನ ಸಮರ್ಪಕ ಬಳಸಿ:  SC, ST ಸಮುದಾಯಕ್ಕೆ ಸರ್ಕಾರದ ಯೋಜನೆ ಶೇ 100ರಷ್ಟು ತಲುಪಿಸಿ- ಸಿಎಂ ಸಿದ್ದರಾಮಯ್ಯ ಸೂಚನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಧರ್ಮಸ್ಥಳ ಕೇಸ್ :ಗೃಹ ಸಚಿವರ ಭೇಟಿಯಾಗಿ ಚರ್ಚಿಸಿದ SIT ಮುಖ್ಯಸ್ಥರು: ತನಿಖಾ ಪ್ರಗತಿ ವರದಿ ಸಲ್ಲಿಕೆ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಹೂತಿಟ್ಟ ಆರೋಪ ಪ್ರಕರಣ ಕುರಿತು...

ಧರ್ಮಸ್ಥಳ ಕೇಸ್: ದೂರುದಾರನನ್ನು ಮಂಪರು ಪರೀಕ್ಷೆಗೆ ಒಳಪಡಿಸಿ- MLC ಸಿ.ಟಿ ರವಿ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆಯಾಗುತ್ತಿದ್ದು...

ಧರ್ಮಸ್ಥಳದ ವಿಚಾರದಲ್ಲಿ ಬಿಜೆಪಿ ರಾಜಕೀಯ: ಸದನದಲ್ಲಿ ಇಂದು ಪರಮೇಶ್ವರ್ ಮಾತು-ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಆಗಸ್ಟ್,18,2025 (www.justkannada.in):  ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸಾರಿಗೆ...

ಮೈಸೂರು: ಅತಿಹೆಚ್ಚು ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಸ್ಟೇಷನ್‌ ಉದ್ಘಾಟಿಸಿದ ಸೆಸ್ಕ್ ಎಂಡಿ

ಮೈಸೂರು, ಆಗಸ್ಟ್‌, 18, 2025 (www.justkannada.in): ಮೈಸೂರಿನಲ್ಲಿ ನೂತನವಾಗಿ ಆರಂಭಿಸಿರುವ ಅತ್ಯಧಿಕ...