17
April, 2026

A News 365Times Venture

17
Friday
April, 2026

A News 365Times Venture

ಅಪಘಾತದಲ್ಲಿ ನವವಿವಾಹಿತೆ ಬಲಿ: ಮೊಮ್ಮಗಳ ಸಾವಿನ ಸುದ್ದಿ ಕೇಳಿ ಅಜ್ಜಿಯೂ ಮೃತ

Date:

ಬೆಂಗಳೂರು,ಆಗಸ್ಟ್,9,2025 (www.justkannada.in):  ವರಮಹಾಲಕ್ಷ್ಮಿ ಹಬ್ಬದಂದು ನಾದಿನಿ ಮನೆಗೆ ಕುಂಕುಮಕ್ಕೆಂದು  ಬೈಕ್​ನಲ್ಲಿ ಹೋಗುತ್ತಿದ್ದ ವೇಳೆ ಬೈಕ್ ಗೆ ಲಾರಿ ಡಿಕ್ಕಿಯಾಗಿ ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಲಗ್ಗೆರೆಯಲ್ಲಿ ನಡೆದಿದೆ.

ಲಗ್ಗೆರೆ ನಿವಾಸಿ ಗೀತಾ (23) ಮೃತ ಮಹಿಳೆ. ಮೊಮ್ಮಗಳ ಸಾವಿನ ಸುದ್ದಿ ಕೇಳಿ  ಆಘಾತದಿಂದ ಗೀತಾ ಅವರ ಅಜ್ಜಿಯೂ ಸಹ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನೆಯಲ್ಲಿ ಗೀತಾ ಪತಿ ಸುನೀಲ್ ​ಗೆ ಗಾಯಗಳಾಗಿವೆ.

ದಂಪತಿ ಕಳೆದ 3 ತಿಂಗಳ ಹಿಂದೆ ಮದುವೆಯಾಗಿದ್ದು,  ಲಗ್ಗೆರೆ ಬಳಿ 1 ವಾರದ‌ ಹಿಂದಷ್ಟೇ ಮನೆ ಮಾಡಿಕೊಂಡಿದ್ದರು. ಕಳೆದ ಭಾನುವಾರ ಹಾಲು ಉಕ್ಕಿಸಿದ್ದ ಪತಿ-ಪತ್ನಿ ಸಂಭ್ರಮಿಸಿದ್ದರು. ವರಮಹಾಲಕ್ಷ್ಮೀ ಹಬ್ಬಕ್ಕೆ ತವರು ಮನೆಗೆಂದು ಪತ್ನಿಯನ್ನ ಚಂದ್ರ ಲೇಔಟ್​ನಲ್ಲಿರುವ ಅವರ ಅಮ್ಮನ ಮನೆಗೆ ಪತಿ ಕರೆತಂದಿದ್ದರು.

ಈ ನಡುವೆ  ಹಬ್ಬದ ಹಿನ್ನೆಲೆಯಲ್ಲಿ ಮಲ್ಲೇಶ್ವರಂನಲ್ಲಿರುವ ನಾದಿನಿ ಮನೆಗೆ ಕುಂಕುಮಕ್ಕಾಗಿ ಹೋಗುತ್ತಿದ್ದರು. ಈ ವೇಳೆ ಲಗ್ಗೆರೆ ಬಳಿ ಲಾರಿ ಡಿಕ್ಕಿಯಾಗಿ  ತಲೆಗೆ ಗಂಭೀರ ಗಾಯವಾದ ಕಾರಣ ಪತ್ನಿ ಗೀತಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾಜಾಜಿನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು.

Key words: Woman, dies, accident, Bangalore

The post ಅಪಘಾತದಲ್ಲಿ ನವವಿವಾಹಿತೆ ಬಲಿ: ಮೊಮ್ಮಗಳ ಸಾವಿನ ಸುದ್ದಿ ಕೇಳಿ ಅಜ್ಜಿಯೂ ಮೃತ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ಲೋಕಾಯುಕ್ತದ ನಾಲ್ಕು ದಶಕಗಳ ಸಾರ್ಥಕ ಪಯಣ: ಏ.18 ರಂದು ವಿಶೇಷ ಕಾರ್ಯಕ್ರಮ

ಬೆಂಗಳೂರು, ಏಪ್ರಿಲ್ ,16 ,2026 (www.justkannada.in): ಭ್ರಷ್ಟಾಚಾರ ನಿರ್ಮೂಲನೆ ಮತ್ತು ಆಡಳಿತ...

ಮೈಸೂರು: ಮನೆಯೊಳಗೆ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ ಚಿರತೆ ಸೆರೆ

ಮೈಸೂರು, ಏಪ್ರಿಲ್, 17,2026 (www.justkannada.in):  ಮೈಸೂರಿನ ಸಿದ್ದಾರ್ಥನಗರದ ಮನೆಯೊಂದರಲ್ಲಿ ಗಂಡು ಚಿರತೆಯೊಂದು...

ಅವರೇನು ಸಿಎಂ ಗುಂಪು ಅಂತಾ ಬೋರ್ಡ್ ಹಾಕಿಕೊಂಡಿದ್ದಾರಾ? ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಏಪ್ರಿಲ್,17,2026 (www.justkannada.in):  ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಗುಂಪು ಅಂತೀರಾ?  ಅವರೇನು...

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

ಬೆಂಗಳೂರು,ಏಪ್ರಿಲ್,17,2026 (www.justkannada.in):  ಬಿಜೆಪಿ ಮುಖಂಡ ಹಾಗೂ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ...