10
March, 2026

A News 365Times Venture

10
Tuesday
March, 2026

A News 365Times Venture

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಸ್ವಾಮೀಜಿ ಅರೆಸ್ಟ್.!

Date:

ಬಾಗಲಕೋಟೆ,ಮೇ,24,2025 (www.justkannada.in):  ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ  ರಾಮಮಂದಿರ ಮಠದ ಲೋಕೇಶ್ವರ ಮಹಾರಾಜ ಸ್ವಾಮೀಜಿಯನ್ನ ಬಂಧಿಸಲಾಗಿದೆ.

ರಾಯಭಾಗ ತಾಲೂಕಿನ ಮೇಖಳಿಯ ರಾಮಮಂದಿರ ಮಠದ ಲೋಕೇಶ್ವರ ಮಹಾರಾಜನ ಸ್ವಾಮೀಜಿ ವಿರುದ್ಧ ಪೊಲೀಸರು ಪೋಕ್ಸೋ ಕೇಸ್ ದಾಖಲಿಸಿಕೊಂಡು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಕುರಿತು ಬಾಗಲಕೋಟೆಯ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಹಿಳಾ ಠಾಣೆ ಪೊಲೀಸರು ಮೂಡಲಗಿ ಠಾಣೆಗೆ ಪ್ರಕರಣವನ್ನು ವರ್ಗಾಯಿಸಿದ್ದರು. ಸದ್ಯ ಸ್ವಾಮೀಜಿ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿ ​ಜೈಲಿಗಟ್ಟಿದ್ದಾರೆ.

ಮೇ.13 ರಂದು ಬಾಲಕಿಯನ್ನು ಲಾಡ್ಜ್ ಗೆ ಕರೆದೊಯ್ದು ಅತ್ಯಾಚಾರ ಎಸಗಿ ನಂತರ ಬಾಗಲಕೋಟೆಯ ಮಹಾಲಿಂಗಪುರ ಬಸ್ ನಿಲ್ದಾಣದಲ್ಲಿ ಬಿಟ್ಟು ಹೋಗಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಸ್ವಾಮೀಜಿಯನ್ನು ಬಂಧಿಸಿದ್ದಾರೆ. ಲೋಕೇಶ್ವರ ಸ್ವಾಮೀಜಿ ತನ್ನ ಜೊತೆ ಅಪ್ರಾಪ್ತೆಯನ್ನು ರಾಯಚೂರು, ಬಾಗಲಕೋಟೆಯ ಲಾಡ್ಜ್ ಗಳಿಗೆ ಕರೆದುಕೊಂಡು ಹೋಗಿ 2 ದಿನಗಳ ಕಾಲ ಆಕೆ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಅಲ್ಲದೆ ಯಾರ ಬಳಿಯಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಕೂಡ ಹಾಕಿದ್ದಾರೆ ಎನ್ನಲಾಗಿದೆ.

Key words: Swamiji, arrested, allegedly, rape, minor girl

The post ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಸ್ವಾಮೀಜಿ ಅರೆಸ್ಟ್.! appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೃಷಿ ಕ್ಷೇತ್ರದಲ್ಲಿ AI ಬಳಕೆ ಅಗತ್ಯ : ವಿಟಿಯು ಕುಲಪತಿ ಎಸ್. ವಿದ್ಯಾಶಂಕರ್

  ಮೈಸೂರು, ಮಾ.೧೦,೨೦೨೬ : ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕೃತಕ ಬುದ್ಧಿಮತ್ತೆ...

KPCC ಅಧ್ಯಕ್ಷರಾಗಿ 6 ವರ್ಷ ಯಶಸ್ವಿ: ಡಿಕೆ ಶಿವಕುಮಾರ್ ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು,ಮಾರ್ಚ್,10,2026 (www.justkannada.in): ಕೆಪಿಸಿಸಿ ಅಧ್ಯಕ್ಷರಾಗಿ ಯಶಸ್ವಿಯಾಗಿ 6 ವರ್ಷಗಳನ್ನು ಪೂರೈಸಿದ ಡಿಸಿಎಂ...

ಡಿಕೆಶಿ ಅತ್ಯಂತ ಯಶಸ್ವಿ ಅಧ್ಯಕ್ಷರು: ಪಕ್ಷ ಅಧಿಕಾರಕ್ಕೆ ತರುವುದೇ ಅವರ ಕನಸಾಗಿತ್ತು- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು,ಮಾರ್ಚ್,10,2026 (www.justkannada.in): ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ 6 ವರ್ಷ ಪೂರೈಸಿದ್ದು...

ಕಲ್ಯಾಣ ಕರ್ನಾಟಕ ಭಾಗದಲ್ಲಿ ವಿಮಾನ ನಿಲ್ದಾಣ: ಸಭೆ ಮಾಡಿ ಅಂತಿಮ ನಿರ್ಧಾರ- ಎಂ.ಬಿ ಪಾಟೀಲ್

ಬೆಂಗಳೂರು,ಮಾರ್ಚ್,10,2026 (www.justkannada.in): ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಳ್ಳಾರಿ, ವಿಜಯನಗರ ಮತ್ತು ಕೊಪ್ಪಳ...