ನವದೆಹಲಿ,ಜುಲೈ,13,2026 (www.justkannada.in): ಅಯೋಧ್ಯೆಯ ಶ್ರೀರಾಮಮಂದಿರದ ಹುಂಡಿ ಹಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಮಂದಿರ ಟ್ರಸ್ಟ್, ಕೇಂದ್ರ ಸರ್ಕಾರ ಮತ್ತು ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಪ್ರಕರಣ ಸಂಬಂಧ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಎಸ್ ಐಟಿ ತನಿಖೆಯ ಪ್ರಗತಿ ವರದಿ ಸಲ್ಲಿಸಲು ಸೂಚನೆ ನೀಡಿದೆ. 1 ವಾರದೊಳಗೆ ಮುಚ್ಚಿದ ಲಕೋಟೆಯಲ್ಲಿ ತನಿಖೆಯ ಪ್ರಗತಿ ಕುರಿತ ವರದಿ ನೀಡುವಂತೆ ಸೂಚನೆ ಕೊಟ್ಟಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಅನುಕಲ್ಪ್ ಮಿಶ್ರಾ, ಲವಕುಶ ಮಿಶ್ರಾ ಮತ್ತು ಕರುಣೇಶ್ ಪಾಂಡೆ ಸೇರಿ ಹಲವು ಮಂದಿಯ ಬಂಧನವಾಗಿದ್ದು ಎಸ್ ಐಟಿ ತನಿಖೆ ನಡೆಸುತ್ತಿದೆ.
Key words: Ayodhya, Hundi money, theft, case, Supreme Court, notice
The post ಅಯೋಧ್ಯೆ ಹುಂಡಿ ಹಣ ಕಳವು ಪ್ರಕರಣ: ಸುಪ್ರೀಂ ಕೋರ್ಟ್ ನೋಟಿಸ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




