24
June, 2026

A News 365Times Venture

24
Wednesday
June, 2026

A News 365Times Venture

ಅವರು ನಮ್ಮ ರಾಷ್ಟ್ರೀಯ ನಾಯಕರು ಅವರಿಗೆ ಒಂದ್‌ ದೊಡ್ಡ ನಮಸ್ಕಾರ-ಡಿಸಿಎಂ ಡಿಕೆ ಶಿವಕುಮಾರ್

Date:

ಬೆಂಗಳೂರು, ಫೆಬ್ರವರಿ,23,2026 (www.justkannada.in):  ರಾಜ್ಯದಲ್ಲಿ ದಲಿತರಿಗೆ ಮುಖ್ಯಮಂತ್ರಿ ಸ್ಥಾನ ಸಿಗಬೇಕು ಎಂಬ ಸಮಾಜ ಕಲ್ಯಾಣ ಸಚಿವ ಎಚ್‌.ಸಿ.ಮಹದೇವಪ್ಪ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌, ಅವರು ನಮ್ಮ ರಾಷ್ಟ್ರೀಯ ನಾಯಕರು. ಇಲ್ಲಿಂದಲೇ ಅವರಿಗೆ ನಮಸ್ಕಾರ ಎಂದು ಲೇವಡಿ ಮಾಡಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಕೇಂದ್ರ ಸರ್ಕಾರ ಮನರೇಗಾ ಯೋಜನೆಯನ್ನು ವಾಪಸ್‌‍ ಮರುಸ್ಥಾಪಿಸಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ. ಕೇಂದ್ರ ಸರ್ಕಾರ ಬಡವರು ಮತ್ತು ಕೂಲಿ ಕಾರ್ಮಿಕರ ವಿರುದ್ಧ ದೊಡ್ಡ ದೌರ್ಜನ್ಯ ನಡೆಸುತ್ತಿದೆ ಎಂದು ಕಿಡಿಕಾರಿದರು.

ಹೊಸದಾಗಿ ರೂಪಿಸಿರುವ ವಿಬಿ ಜಿ ರಾಮ್‌ ಜಿ ಯೋಜನೆಯ ನಿಯಮಗಳ ಬಗ್ಗೆಯೂ ಈವರೆಗೂ ಅಧಿಕೃತವಾಗಿ ಯಾವುದೇ ಆದೇಶ ಹೊರಬಿದ್ದಿಲ್ಲ. ಹಿಂದೆ ಕೆಲಸ ಮಾಡಿದ್ದ ಕೂಲಿಯನ್ನು ಬಿಡುಗಡೆ ಮಾಡಿಲ್ಲ. ನಮಗೆ ಕೂಲಿ ಕಾರ್ಮಿಕರು ಹಾಗೂ ಪಂಚಾಯಿತಿಗಳನ್ನು ಉಳಿಸಿಕೊಳ್ಳಬೇಕಿದೆ. ಅದಕ್ಕಾಗಿ ಮುಂದೆ ಏನು ಮಾಡಬೇಕು ಎಂಬುದನ್ನು ನಾವು ಚರ್ಚೆ ಮಾಡುತ್ತೇವೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

Key words: HC Mahadevappa, our national leaders, DK Shivakumar

The post ಅವರು ನಮ್ಮ ರಾಷ್ಟ್ರೀಯ ನಾಯಕರು ಅವರಿಗೆ ಒಂದ್‌ ದೊಡ್ಡ ನಮಸ್ಕಾರ-ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಶಾಸಕ ಪ್ರದೀಪ್ ಈಶ್ವರ್ ಟ್ರಸ್ಟ್‌ಗೆ ನಿವೇಶನ ಹಂಚಿಕೆ: ಹೈಕೋರ್ಟ್ ಯಥಾಸ್ಥಿತಿ ಆದೇಶ

  ಬೆಂಗಳೂರು, ಜೂ.24: ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಸೇರಿದ ಪರಿಶ್ರಮ...

ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ಎಂ.ಎನ್. ಅನುಚೇತ್ ನೇಮಕ

  ಬೆಂಗಳೂರು, ಜೂನ್ 24: ರಾಜ್ಯ ಸರ್ಕಾರ ಹಿರಿಯ ಐಪಿಎಸ್ ಅಧಿಕಾರಿ ಎಂ.ಎನ್....

OC ವಿನಾಯಿತಿ: ಶಾಶ್ವತ ವಿದ್ಯುತ್‌ ಸಂಪರ್ಕಕ್ಕೆ  ಅರ್ಜಿ ಸಲ್ಲಿಸಲು  ಜುಲೈ 6 ಗಡುವು

ಬೆಂಗಳೂರು,ಜೂನ್,24,2026 (www.justkannada.in):   ಬೆಸ್ಕಾಂ ವ್ಯಾಪ್ತಿಯಲ್ಲಿ 2400 ಚದರ ಅಡಿವರೆಗಿನ ( +ಶೇ....

KPMA ಅಡಿ ನೋಂದಣಿಯಾಗದ ಡಿ-ಅಡಿಕ್ಷನ್ ಕೇಂದ್ರಗಳ ವಿರುದ್ಧ ಕ್ರಮ: ಮೈಸೂರು ಡಿ.ಸಿ ಲಕ್ಷ್ಮಿಕಾಂತ್ ರೆಡ್ಡಿ

ಮೈಸೂರು,ಜೂನ್,24,2026 (www.justkannada.in): ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ವ್ಯಸನ ವಿಮುಕ್ತ ಕೇಂದ್ರಗಳು (De-addiction...