2
May, 2026

A News 365Times Venture

2
Saturday
May, 2026

A News 365Times Venture

ಆಗಸ್ಟ್ 15ರ ಬಳಿಕ ರಾಜ್ಯದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಸುವಂತಿಲ್ಲ: ಸಚಿವ ರಾಮಲಿಂಗಾರೆಡ್ಡಿ

Date:

ಬೆಂಗಳೂರು,ಜೂನ್,9,2025 (www.justkannada.in): ಆಗಸ್ಟ್ 15ರಿಂದ ರಾಜ್ಯದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಸುವಂತಿಲ್ಲ ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ರಾಮಲಿಂಗರೆಡ್ಡಿ, ರಾಜ್ಯದಲ್ಲಿ ಪ್ಲಾಸ್ಟಿಕ್ ಬಳಕೆಗೆ ನಿಯಂತ್ರಣ ಏರುವ ಕ್ರಮ ಕೈಗೊಳ್ಳಲಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ದೇವಾಲಯಗಳಲ್ಲಿ ಆಗಸ್ಟ್ 15ರ ಬಳಿಕ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗುತ್ತಿದೆ ಎಂದು ತಿಳಿಸಿದರು.

ಹಾಗೆಯೇ ಕಳೆದ ಮೂರು ತಿಂಗಳಲ್ಲಿ 1,253 ದೇವಾಲಯಗಳನ್ನು ಗುರುತಿಸಲಾಗಿದೆ. 11,322 ಆಸ್ತಿ ಗುರುತಿಸಿ ನಮೂದಿಸಲಾಗಿದೆ. ಹೊರರಾಜ್ಯಗಳಲ್ಲಿ ವಸತಿ ಗೃಹಗಳನ್ನು ನಿರ್ಮಿಸಲು ಯೋಜಿಸಲಾಗಿದ್ದು. ತಿರುಪತಿಯ ಗಾಂಧಿ ರಸ್ತೆಯಲ್ಲಿರುವ ಜಾಗದಲ್ಲಿ ವಸತಿಗೃಹ ನಿರ್ಮಿಸಲಾಗುತ್ತಿದೆ. ವಸತಿಗೃಹ ಸಂಕೀರ್ಣ ನಿರ್ಮಾಣ ಮಾಡಲು ಸೂಚಿಸಲಾಗಿದೆ ಎಂದರು.

ದೇವಾಲಯದ ಅರ್ಚಕರ ಮಕ್ಕಳಿಗೆ ವಿದ್ಯಾರ್ಥಿ ವೇತನ ಸೌಲಭ್ಯ ಕಲ್ಪಿಸಲಾಗಿದೆ. ಅರ್ಚಕರ 249 ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲಾಗಿದೆ.  ಮರಣ ಹೊಂದಿದ 7 ಅರ್ಚಕರ ಕುಟುಂಬಕ್ಕೆ ಪರಿಹಾರ ನೀಡಿದ್ದೇವೆ. ಮರಣೋತ್ತರ ಪರಿಹಾರವಾಗಿ 14 ಲಕ್ಷ ರೂಪಾಯಿ ನೀಡಲಾಗಿದೆ ಎಂದು ಸಚಿವ ರಾಮಲಿಂಗರೆಡ್ಡಿ ತಿಳಿಸಿದರು.vtu

Key words: Plastic, ban, temples, August 15, Minister, Ramalinga Reddy

The post ಆಗಸ್ಟ್ 15ರ ಬಳಿಕ ರಾಜ್ಯದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಸುವಂತಿಲ್ಲ: ಸಚಿವ ರಾಮಲಿಂಗಾರೆಡ್ಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಬಗೆಹರಿದ ಬಳಿಕ ಗ್ಯಾಸ್ ಸಿಲಿಂಡರ್ ದರ ಇಳಿಕೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ದಾವಣಗೆರೆ,ಮೇ,2,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದ, ಹೋರ್ಮಜ್ ಜಲಸಂಧಿ ಬಿಕ್ಕಟ್ಟಿನಿಂದ ಗ್ಯಾಸ್ ಸಿಲಿಂಡರ್...

ಕಾನೂನಿನ ಚೌಕಟ್ಟಿನಲ್ಲಿ ಕಾರ್ಯ ನಿರ್ವಹಿಸಿ: ಕುಡಿಯುವ ನೀರಿನ ಬಗ್ಗೆ ನಿರಂತರ ನಿಗಾ ವಹಿಸಿ- ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು,ಮೇ,2,2026 (www.justkannada.in): ತಮ್ಮ ವ್ಯಾಪ್ತಿಯ ಜಿಲ್ಲೆಯಲ್ಲಿನ ಕುಡಿಯುವ ನೀರಿನ ಪರಿಸ್ಥಿತಿ ಬಗ್ಗೆ...

ಕಲಬುರಗಿ ಡಿಸಿ ಸೇರಿ ನಾಲ್ವರು IAS ಅಧಿಕಾರಿಗಳ ವರ್ಗಾವಣೆ

ಬೆಂಗಳೂರು,ಮೇ,2,2026 (www.justkannada.in): ಕಲಬುರಗಿ ಜಿಲ್ಲೆ ಜಿಲ್ಲಾಧಿಕಾರಿಯಾಗಿದ್ದ ಫೌಜಿಯಾ ತರಣಮ್ ಬಿ ಅವರನ್ನು...

ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಹಿನ್ನೆಲೆ: ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು

ಬೆಂಗಳೂರು,ಮೇ,2,2026 (www.justkannada.in):  ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ...