ಬೆಂಗಳೂರು ಗ್ರಾಮಾಂತರ ಆಗಸ್ಟ್,14,2025 (www.justkannada.in): ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಆರ್ಥಿಕವಾಗಿ ದುರ್ಬಲವಾಗಿರುವ, ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಇಲ್ಲದೆ ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯಲು ಅನುಕೂಲವಾಗುವಂತೆ ವಿದೇಶಿ ಅಧ್ಯಯನ ಮೇಳವನ್ನು ಮೊದಲ ಬಾರಿಗೆ ಬೆಂಗಳೂರಿನಲ್ಲಿ ಹಮ್ಮಿಕೊಂಡಿದೆ.
ಆಗಸ್ಟ್ 17 ರಂದು ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ಬೆಂಗಳೂರು ನಗರದ ಲಲಿತ್ ಅಶೋಕ ಹೋಟೆಲ್ ನಲ್ಲಿ ಕಾರ್ಯಕ್ರಮವನ್ನು ಆಯೋಜಿಸಿದೆ. ಮೇಳದಲ್ಲಿ ಭಾಗವಹಿಸಲು ಉಚಿತ ಪ್ರವೇಶಕ್ಕಾಗಿ http://studyabroad.ksdckarnataka.com ನೋಂದಾಯಿಸಿಕೊಳ್ಳಬಹುದು.
ಉನ್ನತ ಶಿಕ್ಷಣ ಪಡೆಯಲು ವಿದೇಶದಲ್ಲಿ ವ್ಯಾಸಂಗ ಮಾಡಲು ಬಯಸುವವರಿಗೆ ಪ್ರೋತ್ಸಾಹ ಧನವನ್ನು ನೀಡಿ ಜೊತೆಗೆ ಉಚಿತ ವಿಮಾನ ಟಿಕೆಟ್ ಸೌಲಭ್ಯ ನೀಡಲಾಗುತ್ತದೆ.
ಎಕ್ಸ್ಪೋ ವಿಶ್ವವಿದ್ಯಾಲಯದ ಪ್ರತಿನಿಧಿಗಳೊಂದಿಗೆ ನೇರ ಸಂವಾದ, ವಿದ್ಯಾರ್ಥಿ ವೇತನ ಮತ್ತು ಅರ್ಹತಾ ಮೌಲ್ಯಮಾಪನ, ವೀಸಾ ಪ್ರಕ್ರಿಯೆ, ಹಣಕಾಸು ಯೋಜನೆ, ಆರೋಗ್ಯ ವಿಮೆ, ಭಾಷಾ ಪ್ರಾವೀಣ್ಯ ಮತ್ತು ಇತರೆ ವಿಷಯಗಳ ಬಗ್ಗೆ ಕಾರ್ಯಕ್ರಮದಲ್ಲಿ ಚರ್ಚೆ ನಡೆಯಲಿದೆ. ಇದರಲ್ಲಿ 10ಕ್ಕೂ ಹೆಚ್ಚು ದೇಶಗಳು, 50ಕ್ಕೂ ಅಧಿಕ ಜಾಗತಿಕ ವಿಶ್ವವಿದ್ಯಾಲಯಗಳು ಭಾಗವಹಿಸುತ್ತವೆ.
ಹೆಚ್ಚಿನ ಮಾಹಿತಿಗಾಗಿ 7338674791, 7338674792, 7338674794,73386 74798 ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Key words: Special ,Study, Abroad Fair, Bangalore
The post ಆಗಸ್ಟ್ 17 ರಂದು ವಿದೇಶ ವ್ಯಾಸಂಗದ ವಿಶೇಷ ಮೇಳ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




