3
March, 2026

A News 365Times Venture

3
Tuesday
March, 2026

A News 365Times Venture

ಆಪರೇಷನ್ ಸಿಂಧೂರ: ‘ತಿರಂಗಾ ಯಾತ್ರೆ ನಡೆಸಿ ಶುಭ ಹಾರೈಸಿದ ಕಾಂಗ್ರೆಸ್

Date:

ಬೆಂಗಳೂರು,ಮೇ,9,2025 (www.justkannada.in): ಪಹಲ್ಗಾಮದಲ್ಲಿ ಉಗ್ರರ ದಾಳಿಗೆ ಪ್ರತೀಕಾರವಾಗಿ ಅಪರೇಷನ್ ಸಿಂಧೂರ ಹೆಸರಿನಲ್ಲಿ 9 ಉಗ್ರರ ನೆಲೆಗಳನ್ನ ಧ್ವಂಸ ಮಾಡಿದ ಭಾರತೀಯ ಸೇನೆ ಇದೀಗ ಕಾಲ್ಕೆರುದು ಬಂದ ಪಾಕಿಸ್ತಾನದ ವಿರುದ್ದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಮುಂದುವರೆಸಿದೆ. ಈ ಮಧ್ಯೆ  ಭಾರತೀಯ ಸೇನೆ ನಡೆಸುತ್ತಿರುವ ‘ಆಪರೇಷನ್ ಸಿಂಧೂರ್ ‘ ಯಶಸ್ವಿಯಾಗಲಿ ಎಂದು ಬೆಂಗಳೂರಿನಲ್ಲಿ ರಾಜ್ಯ ಕಾಂಗ್ರೆಸ್ ತಿರಂಗಾ ಯಾತ್ರೆ ನಡೆಸಿದೆ.

ನಗರದ ಕೆ.ಆ‌ರ್.ಸರ್ಕಲ್‌ನಿಂದ ವಿಧಾನಸೌಧ ಹಾಗೂ ಹೈಕೋರ್ಟ್‌ನ ನಡುವಿನ ಮುಖ್ಯರಸ್ತೆಯ ಮಾರ್ಗವಾಗಿ ಚಿನ್ನಸ್ವಾಮಿ ಸ್ಟೇಡಿಯಂ ಕ್ರೀಡಾಂಗಣದ ವೃತ್ತದವರೆಗೂ  ಕಾಂಗ್ರೆಸ್ ನಾಯಕರು ತಿರಂಗ ಯಾತ್ರೆ ನಡೆಸಿ ಭಾರತೀಯ ಸೇನೆಗೆ ಶುಭಹಾರೈಸಿದರು.

ತಿರಂಗಾ ಯಾತ್ರೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಈ ಯಾತ್ರೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಎಚ್.ಕೆ.ಪಾಟೀಲ್, ಡಾ.ಜಿ.ಪರಮೇಶ್ವರ್, ಎನ್.ಎಸ್.ಬೋಸರಾಜು, ಡಾ.ಎಂ.ಸಿ.ಸುಧಾಕರ್, ಪ್ರಿಯಾಂಕ್ ಖರ್ಗೆ, ದಿನೇಶ್‌ ಗುಂಡೂರಾವ್, ಎಚ್.ಸಿ.ಮಹದೇವಪ್ಪ, ಹಲವು ಮಂದಿ ಶಾಸಕರು ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಪಾಲ್ಗೊಂಡಿದ್ದರು.

Key words: Operation Sindoora, Congress, Tiranga Yatra

The post ಆಪರೇಷನ್ ಸಿಂಧೂರ: ‘ತಿರಂಗಾ ಯಾತ್ರೆ ನಡೆಸಿ ಶುಭ ಹಾರೈಸಿದ ಕಾಂಗ್ರೆಸ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮನುಷ್ಯನ ಶ್ರೇಷ್ಠತೆಯ ವ್ಯಸನಕ್ಕೆ ತಮ್ಮ ಅನುಭಾವದ ಮೂಲಕ ಮದ್ದು ಅರೆದವರು ಕೈವಾರ ತಾತಯ್ಯ- ಕೆ.ವಿ.ಪ್ರಭಾಕರ್

ಕೋಲಾರ ಮಾರ್ಚ್, 3,2026 (www.justkannada.in):   ಮನುಷ್ಯನ ಶ್ರೇಷ್ಠತೆಯ ವ್ಯಸನಕ್ಕೆ ತಮ್ಮ ಅನುಭವದ...

ಮನೆಗಳ ಮುಂದೆ ಅಳವಡಿಸಿದ್ದ ನೀರಿನ ಮೀಟರ್ ಕಳ್ಳತನ

ಮೈಸೂರು,ಮಾರ್ಚ್,3,2026 (www.justkannada.in): ಮೈಸೂರು ನಗರದ 50ನೇ ವಾರ್ಡ್‌ನ ಬೆಸ್ತಕೇರಿ ಪ್ರದೇಶದಲ್ಲಿ ನೀರಿನ...

‘Whistle Blower Policy’ ಜಾರಿ:  ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

ಬೆಂಗಳೂರು, ಮಾರ್ಚ್,3,2026 (www.justkannada.in): ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಮುಖ್ಯಮಂತ್ರಿಗಳ ಆರೋಗ್ಯ...

ಖಮನೈ ಹತ್ಯೆ ಬಗ್ಗೆ ಪ್ರಧಾನಿ ಮೋದಿ ಮೌನ: ಸೋನಿಯಾ ಗಾಂಧಿ ಕಿಡಿ

ನವದೆಹಲಿ, ಮಾರ್ಚ್, 3,2026 (www.justkannada.in): ಇರಾನ್ ಮೇಲೆ ಇಸ್ರೇಲ್, ಅಮೇರಿಕಾ ಜಂಟಿ...