ವಿಜಯಪುರ,ಮೇ, 29,2026 (www.justkannada.in): ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಭೀಮಾತೀರದಲ್ಲಿ ಮತ್ತೆ ನೆತ್ತರು ಹರಿದಿದೆ. ಗಲಾಟೆಯಾಗಿ 6 ಮಂದಿಯನ್ನ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.
ವಿಜಯಪುರ ಜಿಲ್ಲೆ ಚಡಚಣ ತಾಲ್ಲೂಕಿನ ಗೋವಿಂದಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರೇವಣ್ಣ ಸಿದ್ದಪ್ಪ ನಿರಾಳೆ, ದುಂಡಪ್ಪ ರೇವಣ್ಣ ಸಿದ್ದಪ್ಪ ನಿರಾಳೆ, ಶಿವಪುತ್ರ ನಿರಾಳೆ, ಚಂದ್ರ ಶೇಖರ್ ನಿರಾಳೆ ಶಬ್ಬೀರ್ ನದಾಫ್ ಸೇರಿದಂತೆ 6 ಜನರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.
ನಿರಾಳೆ ಮತ್ತು ಗೊಳಗಿ ಕುಟುಂಬದ ನಡುವೆ ಆಸ್ತಿ ವಿವಾದ ಉಂಟಾಗಿದ್ದು ಈ ವೇಳೆ ನಿರಾಳೆ ಕುಟುಂಬದ ಮೇಲೆ ಗೊಳಗಿ ಕುಟುಂಬ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.
Key words: Vijayapur, Six people , Murder, property dispute
The post ಆಸ್ತಿ ವಿವಾದಕ್ಕೆ ಹರಿದ ನೆತ್ತರು: ಗುಂಡಿಕ್ಕಿ ಆರು ಮಂದಿಯ ಹತ್ಯೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




