ಬೆಂಗಳೂರು,ಜುಲೈ,29,2025 (www.justkannada.in): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಆಗಸ್ಟ್ 1 ರಂದು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ಆಗಸ್ಟ್ 1ರಂದು ಸಂಜೆ ಆರು ಗಂಟೆಗೆ ದೆಹಲಿಯ ಐಟಿಸಿ ಮೌರ್ಯ ಹೋಟೆಲ್ ನಲ್ಲಿ ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ “ಬ್ರಿಡ್ಜ್ ಟು ಬೆಂಗಳೂರು” ಕಾರ್ಯಕ್ರಮ ಆಯೋಜಿಸಲಿದ್ದಾರೆ. ವಿವಿಧ ದೇಶಗಳ ರಾಯಭಾರಿಗಳು ಭಾಗವಹಿಸುವ ಈ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಪಾಲ್ಗೊಳ್ಳುವರು.
ಆಗಸ್ಟ್ 2ರಂದು ಬೆಳಗ್ಗೆ 09.30ಕ್ಕೆ ಎಐಸಿಸಿ ಕಾನೂನು, ಮಾಹಿತಿ ಹಕ್ಕು ವಿಭಾಗ ವಿಜ್ಞಾನ ಭವನದಲ್ಲಿ ಆಯೋಜಿಸಿರುವ ಸಾಮಾಜಿಕ ನ್ಯಾಯ, ಡಾ. ಬಿ.ಆರ್. ಅಂಬೇಡ್ಕರ್ ಅವರ ದೃಷ್ಟಿಕೋನ ಕುರಿತಾದ ವಿಚಾರ ಸಂಕಿರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಭಾಗವಹಿಸುವರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತಿತರರ ವರಿಷ್ಠರು ಈ ವಿಚಾರ ಸಂಕಿರಣದಲ್ಲಿ ಭಾಗವಹಿಸುವರು, ವಿಚಾರ ಸಂಕಿರಣದ ಉದ್ಘಾಟನೆಯ ಬಳಿಕ 11.30ಕ್ಕೆ ಸಿಎಂ ಸಿದ್ದರಾಮಯ್ಯ ಸಾಮಾಜಿಕ ನ್ಯಾಯ ಕುರಿತಾಗಿ ಭಾಷಣ ಮಾಡಲಿದ್ದಾರೆ.
Key words: CM, Siddaramaiah, Delhi, August 1st
The post ಆ.1 ರಂದು ದೆಹಲಿಗೆ ಸಿಎಂ ಸಿದ್ದರಾಮಯ್ಯ ಪ್ರಯಾಣ: ಕಾರಣ..? appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.