ಬೆಂಗಳೂರು, ಆಗಸ್ಟ್, 11,2025 (www.justkannada.in): ಇಂದಿನಿಂದ ರಾಜ್ಯದ ಮಳೆಗಾಲದ ವಿಧಾಮಂಡಲ ಅಧಿವೇಶನ ಆರಂಭವಾಗಲಿದೆ.
ಎರಡು ವಾರಗಳ ಕಾಲ ಆಗಸ್ಟ್ 22ವರೆಗೆ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಈ ಬಾರಿ ಹತ್ತು ಹಲವು ವಿಚಾರ ಮುಂದಿಟ್ಟು ಸರ್ಕಾರದ ವಿರುದ್ಧ ಮುಗಿಬೀಳಲು ಬಿಜೆಪಿ, ಜೆಡಿಎಸ್ ಸಜ್ಜಾಗಿವೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿರುವ ‘ಮತಗಳ್ಳತನ’ ಆರೋಪ ಸಂಬಂಧ ಜಟಾಪಟಿ ನಡೆಯುವ ಸಾಧ್ಯತೆಯಿದ್ದು, ಜೊತೆಗೆ ಆರ್‌ಸಿಬಿ ಸಂಭ್ರಮಾಚರಣೆ ವೇಳೇ 11 ಮಂದಿ ಸಾವಿನ ವಿಚಾರ, ಪೊಲೀಸ್ ಅಧಿಕಾರಿಗಳ ಅಮಾನತು ಹಾಗೂ ಸರ್ಕಾರದ ದ್ವಂದ್ವ ನಿರ್ಧಾರಗಳ ಬಗ್ಗೆ ಬಿಜೆಪಿ ಸಮರಕ್ಕೆ ಪ್ಲ್ಯಾನ್ ಮಾಡಿದೆ.
ಇನ್ನು ಮೊದಲ ದಿನವೇ ಚರ್ಚೆಗೆ ಅವಕಾಶ ಕೋರಿ ಜೆಡಿಎಸ್ ಬಿಜೆಪಿ ನಿಲುವಳಿ ನೋಟಿಸ್ ನೀಡಿವೆ. ಈ ಬಾರಿ ಅಧೀವೇಶನದಲ್ಲಿ ಒಟ್ಟು 27 ವಿಧೇಯಕ ಮಂಡನೆಗೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.
Key words: session, today, BJP, JDS , against, government
The post ಇಂದಿನಿಂದ ವಿಧಾನಮಂಡಲ ಅಧಿವೇಶನ: ಸರ್ಕಾರದ ವಿರುದ್ಧ ಮುಗಿಬೀಳಲು ಬಿಜೆಪಿ, ಜೆಡಿಎಸ್ ಸಜ್ಜು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.