ಬೆಂಗಳೂರು,ಜುಲೈ,10,2026 (www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಆಚರಣೆಗೆ ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರ ಸಿದ್ದತೆ ಆರಂಭಿಸಿದ್ದು ಈ ನಡುವೆ ಅಕ್ಟೋಬರ್ 11 ರಂದು ಮೈಸೂರು ದಸರಾ ಉದ್ಘಾಟನೆಯಾಗಲಿದೆ.
ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು. ಸಭೆಯಲ್ಲಿ ದಸರಾ ಉದ್ಘಾಟನೆ, ಜಂಬೂಸವಾರಿ ಮೆರವಣಿಗೆ ದಿನಾಂಕ ಸಮಯ ಸೇರಿ ಹಲವು ವಿಚಾರಗಳ ಬಗ್ಗೆ ಚರ್ಚೆಯಾಗಿದೆ.
ಅದರಂತೆ ಅಕ್ಟೋಬರ್ 11ರಂದು ಚಾಮುಂಡಿಬೆಟ್ಟದಲ್ಲಿ ಮೈಸೂರು ದಸರಾ ಉದ್ಘಾಟನೆಗೆ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅಂದು ಬೆಳಿಗ್ಗೆ 11.50ಕ್ಕೆ ಶುಭ ಧನುರ್ ಲಗ್ನದಲ್ಲಿ ದಸರಾಗೆ ಚಾಲನೆ ದೊರೆಯಲಿದೆ.
ಇನ್ನು ಅಕ್ಟೋಬರ್ 21 ರಂದು ಮೈಸೂರು ದಸರಾ ಪ್ರಮುಖ ಆಕರ್ಷಣೆ ಐತಿಹಾಸಿಕ ಜಂಬೂಸವಾರಿ ಮೆರವಣಿಗೆ ನಡೆಯಲಿದ್ದು ಅಂದು ಸಂಜೆ 4.10ರಿಂದ 4.35ರ ನಡುವೆ ತಾಯಿ ಚಾಮುಂಡೇಶ್ವರಿಗೆ ಸಿಎಂ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ಸಿಗಲಿದೆ.
Key words: High-level, meeting, Mysore Dasara, inauguration, Jambu Savari
The post ಉನ್ನತ ಮಟ್ಟದ ಸಭೆ: ಅ.11ಕ್ಕೆ ಮೈಸೂರು ದಸರಾ ಉದ್ಘಾಟನೆ, ಅ.21ಕ್ಕೆ ಜಂಬೂಸವಾರಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




