ನವದೆಹಲಿ,ಸೆಪ್ಟಂಬರ್,30,2026 (www.justkannada.in) ECINET ಆಯಪ್, ಪೋರ್ಟಲ್ ಹಾಗೂ ಸಂಬಂಧಪಟ್ಟ ಮುಖ್ಯ ಚುನಾವಣಾಧಿಕಾರಿಗಳ (CEO) ಪೋರ್ಟಲ್ ಗಳಿಂದ ಹೆಚ್ಚುವರಿಯಾಗಿ ಸೇರಿಸಲಾಗಿದ್ದ ಎಸ್ ಐಆರ್ ಸಂಬಂಧಿತ ಫಾರ್ಮ್-6 ಅನ್ನು ಕೇಂದ್ರ ಚುನಾವಣಾ ಆಯೋಗ ಹಿಂಪಡೆದಿದೆ.
ಎಸ್ ಐಆರ್ ಪ್ರಕ್ರಿಯೆ ಪೂರ್ಣಗೊಂಡಿರುವ ರಾಜ್ಯಗಳಲ್ಲಿ ಆನ್ ಲೈನ್ ಮತದಾರರ ನೋಂದಣಿ ಅರ್ಜಿ ಫಾರ್ಮ್-6 ನಲ್ಲಿ ಹೆಚ್ಚುವರಿಯಾಗಿ ಸೇರಿಸಲಾಗಿದ್ದ ಎಸ್ ಐಆರ್ ಸಂಬಂಧಿತ ಘೋಷಣೆಯನ್ನು ಚುನಾವಣಾ ಆಯೋಗ ಹಿಂಪಡೆದಿದೆ.
SIR ಪ್ರಕ್ರಿಯೆ ನಡೆಯುತ್ತಿರುವ ಅವಧಿಯಲ್ಲಿ ಮಾತ್ರ ಈ ಹೆಚ್ಚುವರಿ ಘೋಷಣೆ ಅನ್ವಯವಾಗಲಿದೆ ಎಂದು ಚುನಾವಣಾ ಆಯೋಗ ನಿರ್ಧರಿಸಿದ ಕೆಲ ದಿನಗಳ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ.
ಹೆಚ್ಚುವರಿ ಘೋಷಣೆಯಲ್ಲಿ ಹೊಸದಾಗಿ ಮತದಾರರಾಗಿ ನೋಂದಣಿಗೆ ಅರ್ಜಿ ಸಲ್ಲಿಸುವವರು, ತಾವು ಅಥವಾ ತಮ್ಮ ತಂದೆ-ತಾಯಿ ಅಥವಾ ಅಜ್ಜ-ಅಜ್ಜಿ ಹಿಂದಿನ ವಿಶೇಷ ತೀವ್ರ ಪರಿಷ್ಕರಣೆ ಸಂದರ್ಭದಲ್ಲಿ ಸಿದ್ಧಪಡಿಸಲಾದ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿದ್ದ ಬಗ್ಗೆ ವಿವರಗಳನ್ನು ನೀಡಬೇಕಾಗಿತ್ತು.
SIR ಪ್ರಕ್ರಿಯೆ ಇನ್ನೂ ನಡೆಯುತ್ತಿರುವ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಈ ಘೋಷಣೆ ECINET ಪೋರ್ಟಲ್ ನಲ್ಲಿ ಮುಂದುವರಿಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.




