13
February, 2026

A News 365Times Venture

13
Friday
February, 2026

A News 365Times Venture

ಒಂದೆರಡು ತಿಂಗಳ ಬಳಿಕ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ-ಗೃಹ ಸಚಿವ ಪರಮೇಶ್ವರ್

Date:

ಚಿಕ್ಕಮಗಳೂರು,ಫೆಬ್ರವರಿ,6,2026 (www.justkannada.in):  ರಾಜ್ಯದಲ್ಲಿ ಶಿಕ್ಷಣ ಇಲಾಖೆ, ಗೃಹ ಇಲಾಖೆ ಸೇರಿ ವಿವಿಧ ಇಲಾಖೆಗಳಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇದ್ದರೂ ಸರಿಯಾಗಿ ನೇಮಕಾತಿಗಳನ್ನ ಮಾಡದ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ದ  ಉದ್ಯೋಗಾಕಾಂಕ್ಷಿಗಳ ಆಕ್ರೋಶ ಹೆಚ್ಚಾಗಿದೆ. ಇದೀಗ ಗೃಹ ಸಚಿವ ಡಾ.ಜಿ.ಪರಮೇಶ್ವರ್,  ಒಂದೆರಡು ತಿಂಗಳ ಬಳಿಕ  ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್,  ಶೀಘ್ರದಲ್ಲೇ ಕಾನ್ಸ್ ಟೇಬೆಲ್ ಹುದ್ದೆಗಳ ನೇಮಕಾತಿ ಮಾಡುತ್ತೇವೆ.  ಕಾನ್ಸ್ ಟೇಬಲ್ ಹುದ್ದೆಗಳ  ನೇಮಕಾತಿಗಳ ಬಗ್ಗೆ ನಿನ್ನೆ ಸಭೆಯಲ್ಲಿ ಚರ್ಚೆ ಮಾಡಲಾಗಿದೆ ಎಂದಿದ್ದಾರೆ.

ಪೊಲೀಸ್ ಇಲಾಖೆಯಲ್ಲಿ 17 ಸಾವಿರ ಹುದ್ದೆಗಳು ಖಾಲಿ ಇವೆ.  2 ವರ್ಷದಿಂದ ನೆನೆಗುದಿಗೆ ಬಿದ್ದಿದ್ದ ಪಿಎಸ್ ಐ ನೇಮಕಾತಿ ನಡೆದಿದೆ. 900ಕ್ಕೂ ಹೆಚ್ಚು ಸಬ್ ಇನ್ಸ್ ಪೆಕ್ಟರ್ ಗಳನ್ನ ನೇಮಕ ಮಾಡಲಾಗಿದೆ. ಅವರೆಲ್ಲಾ ತರಬೇತಿಯಲ್ಲಿದ್ದು ಒಂದೆರಡು ತಿಂಗಳಲ್ಲಿ ಬರುತ್ತಾರೆ. ಅವರು ಬಂದ ಬಳಿಕ ಕಾನ್ಸ್ ಟೇಬಲ್  ಹುದ್ದೆ ನೇಮಕಾತಿಗೆ ಅಧಿಸೂಚನೆ ಹೊರಡಿಸುತ್ತೇವೆ ಎಂದು ಪರಮೇಶ್ವರ್ ತಿಳಿಸಿದ್ದಾರೆ.

Key words: Notification, recruitment, constable, Home Minister, Parameshwar

The post ಒಂದೆರಡು ತಿಂಗಳ ಬಳಿಕ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ-ಗೃಹ ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಯತೀಂದ್ರ ಬಗ್ಗೆ ಕೆಟ್ಟದಾಗಿ ಪೋಸ್ಟ್ ಆರೋಪ: ಬಿಜೆಪಿ ಐಟಿ ಸೆಲ್ ವಿರುದ್ದ ಕಾಂಗ್ರೆಸ್ ದೂರು

ಮೈಸೂರು,ಫೆಬ್ರವರಿ,12,2026 (www.justkannada.in): ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಬಗ್ಗೆ ಕೆಟ್ಟದಾಗಿ ಪೋಸ್ಟ್...

ಕೃತಕ ಬುದ್ಧಿಮತ್ತೆ ಶ್ರೇಷ್ಠತಾ ಕೇಂದ್ರ ಉದ್ಘಾಟಿಸಿದ ಸಚಿವ ಡಾ.ಎಂ.ಸಿ ಸುಧಾಕರ್

ಬೆಂಗಳೂರು,ಫೆಬ್ರವರಿ,12,2026 (www.justkannada.in): ತಾಂತ್ರಿಕ ಶಿಕ್ಷಣದ ವಿದ್ಯಾರ್ಥಿಗಳ ತಂತ್ರಜ್ಞಾನ ಆಲೋಚನೆಗೆ, ಕಲ್ಪನೆಗೆ ಹಾಗೂ...

ಪ್ರಸಕ್ತ ವರ್ಷದಲ್ಲಿ 6 ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿಸುವ ಗುರಿ: ಸಚಿವ ಕೆ.ಹೆಚ್. ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಫೆಬ್ರವರಿ, 12,2026 (www.justkannada.in):  ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ...

ಎಫ್ ಎಆರ್ ನಿರ್ಬಂಧ ಸಡಿಲ, ಕೈಗಾರಿಕಾ ಚಟುವಟಿಕೆಗೆ ಆನೆಬಲ-ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಫೆಬ್ರವರಿ,12,2026 (www.justkannada.in): ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಇಲಾಖೆಯು ಮಹತ್ತ್ವದ ಸುಧಾರಣಾ...