17
March, 2026

A News 365Times Venture

17
Tuesday
March, 2026

A News 365Times Venture

ಕನ್ನಡ ಕಡೆಗಣನೆ, ರೈಲ್ವೆ ಇಲಾಖೆ ಪರೀಕ್ಷೆ ದಿಢೀರ್ ರದ್ದು: ಅನ್ಯಾಯ ಸರಿಪಡಿಸಲು ಸಿಎಂ ಸಿದ್ದರಾಮಯ್ಯ ಆಗ್ರಹ

Date:

ಬೆಂಗಳೂರು,ಮಾರ್ಚ್,17,2026 (www.justkannada.in):  ರೈಲ್ವೆ ಇಲಾಖೆಯ ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡ ಭಾಷೆಗೆ ಅವಕಾಶ ನೀಡದ್ದಕ್ಕೆ ಕನ್ನಡ ಪರ ಸಂಘಟನೆಗಳು ತೀವ್ರ ಹೋರಾಟ ನಡೆಸಿದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಪರೀಕ್ಷೆಯನ್ನ ದಿಢೀರ್ ರದ್ದುಗೊಳಿಸಿದ್ದು ಈ ಸಂಬಂಧ ಕೇಂದ್ರ ಸರ್ಕಾರದ ವಿರುದ್ದ ಸಿಎಂ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ,   ನೈರುತ್ಯ ರೈಲ್ವೇ ಇಲಾಖೆಯ 194 ಗೂಡ್ಸ್‌ ರೈಲು ಮ್ಯಾನೇಜರ್‌ ಹುದ್ದೆಗಳು ಹಾಗೂ ಹುಬ್ಬಳ್ಳಿ ವಿಭಾಗದಲ್ಲಿ ಎಲ್‌ಡಿಸಿಇ 101 ಹುದ್ದೆಗಳಿಗೆ ಮುಂಬಡ್ತಿ ನೀಡುವ ಸಂಬಂಧ ಇಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಕನ್ನಡಿಗರು ಹಾಗೂ ಕನ್ನಡ ಸಂಘಟನೆಗಳ ಭಾರೀ ವಿರೋಧದ ತರುವಾಯ ರೈಲ್ವೇ ಇಲಾಖೆಯು ದಿಢೀರನೇ ರದ್ದುಪಡಿಸಿ ಕನ್ನಡಿಗ ಉದ್ಯೋಗಿಗಳನ್ನು ಅತಂತ್ರ ಪರಿಸ್ಥಿತಿಗೆ ತಳ್ಳಿದೆ.

ಕನ್ನಡ ಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡದಿರುವ ಬಗ್ಗೆ ಈ ಮೊದಲೇ ಸಾವಿರಾರು ಕನ್ನಡಿಗ ಉದ್ಯೋಗಿಗಳು ಧ್ವನಿಯೆತ್ತಿದ್ದರು.  ಶಾಂತ ರೀತಿಯ ಪ್ರತಿಭಟನೆಯನ್ನು, ಪ್ರತಿರೋಧವನ್ನು ನಿರ್ಲಕ್ಷಿಸುತ್ತಾ ಬಂದ ರೈಲ್ವೆ ಇಲಾಖೆ ಪರೀಕ್ಷೆ ಆರಂಭವಾಗುವ ಕೊನೆ ಕ್ಷಣದಲ್ಲಿ ರದ್ದುಮಾಡಿರುವುದು ಈಗಿನ ಗೊಂದಲಕ್ಕೆ ಕಾರಣ ಎಂದು ಕಿಡಿಕಾರಿದ್ದಾರೆ.

ಪ್ರಾರಂಭದಲ್ಲಿಯೇ ರೈಲ್ವೆ ಇಲಾಖೆ ಎಚ್ಚೆತ್ತುಕೊಂಡು ತನ್ನ ತಪ್ಪನ್ನು ತಿದ್ದಿಕೊಂಡು ಕನ್ನಡದಲ್ಲಿ ಪರೀಕ್ಷೆಗೆ ಅವಕಾಶ ಮಾಡಿಕೊಟ್ಟಿದ್ದರೆ ಈಗಿನ ಅತಂತ್ರ ಸ್ಥಿತಿ ನಿರ್ಮಾಣವಾಗುತ್ತಿರಲಿಲ್ಲ. ಆ ಪ್ರಯತ್ನವನ್ನೇ ಮಾಡದೆ, ಕನ್ನಡಿರನ್ನು ತಾತ್ಸಾರ ಭಾವನೆಯಿಂದ ಕಂಡು, ಪ್ರತಿಭಟನೆಯ ಕಾವು ಹೆಚ್ಚಾದ ಕೂಡಲೇ ತರಾತುರಿಯಲ್ಲಿ ಪರೀಕ್ಷೆ ರದ್ದುಪಡಿಸುವ ನಿರ್ಧಾರಕ್ಕೆ ಬಂದಿರುವುದು ಖಂಡನೀಯ.

ಕನ್ನಡಿಗರಿಗೆ ಕೇಂದ್ರ ಸರ್ಕಾರದ ಪರೀಕ್ಷೆಗಳಲ್ಲಿ ಅನ್ಯಾಯವಾಗುತ್ತಿರುವುದು ಇದು ಮೊದಲ ಬಾರಿ ಅಲ್ಲ ಬಹುಶಃ ಕೊನೆಯದ್ದೂ ಅಲ್ಲ. ಕೇಂದ್ರದ ವಿವಿಧ ಇಲಾಖೆಗಳ ಉದ್ಯೋಗ ಭರ್ತಿಯಲ್ಲಿ ಕೇಂದ್ರ ಸರ್ಕಾರದ ಹಿಂದಿ ಹೇರಿಕೆಯ ಕುಟಿಲತನದಿಂದಾಗಿ ಕನ್ನಡಿಗ ಉದ್ಯೋಗಾಕಾಂಕ್ಷಿಗಳು ಮೊದಲಿಂದಲೂ ಅನ್ಯಾಯಕ್ಕೆ ತುತ್ತಾಗುತ್ತಾ ಬಂದಿದ್ದಾರೆ.

ಇದರ ವಿರುದ್ಧ ಕನ್ನಡಿಗರು ನ್ಯಾಯಕ್ಕಾಗಿ ಧ್ವನಿಯೆತ್ತುತ್ತಾ ಬಂದಿದ್ದಾರೆ. ಆದರೆ ಈ ಬಾರಿ ಕನ್ನಡಿಗರಾದ ವಿ.ಸೋಮಣ್ಣನವರು ರೈಲ್ವೆ ಇಲಾಖೆಯ ರಾಜ್ಯ ಸಚಿವರಾಗಿರುವಾಗಲೇ ರೈಲ್ವೆ ಇಲಾಖೆ ಕನ್ನಡ ವಿರೋಧಿ ನಿಲುವು ತಳೆದು ಕನ್ನಡ,‌ ಕರ್ನಾಟಕ ಮತ್ತು ಕನ್ನಡಿಗರಿಗೆ ಅನ್ಯಾಯ ಮಾಡಿರುವುದು ಅತ್ಯಂತ ದುರದೃಷ್ಟಕರ. ಸೋಮಣ್ಣನವರು ಕನ್ನಡಿಗರ ಪರವಾಗಿ ನಿಂತು ಅನ್ಯಾಯವನ್ನು ಸರಿಪಡಿಸುತ್ತಾರೆ ಎಂಬ ಭರವಸೆಯನ್ನು ನಾನೂ ಇಟ್ಟುಕೊಂಡಿದ್ದೆ, ಆ ನಂಬಿಕೆ ಹುಸಿಯಾಗಿದೆ. ಸೋಮಣ್ಣನವರು ಮಾತನಾಡಲು ಶುರು ಮಾಡಿದರೆ ರೈಲ್ವೆ ಇಲಾಖೆ ಇರುವುದೇ ಕರ್ನಾಟಕಕ್ಕಾಗಿ ಎನ್ನುವಂತೆ ಮಾತಿನ ಅರಮನೆ ಕಟ್ಟುತ್ತಾರೆ. ಅವರು ಮಾತು ಸ್ವಲ್ಪ ಕಡಿಮೆಮಾಡಿ ಕರ್ನಾಟಕಕ್ಕಾಗಿ‌ ಮಾಡಬೇಕಾದ ಕೆಲಸವನ್ನು ನಿಷ್ಠೆಯಿಂದ ಮಾಡಲು ಮುಂದಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ

ಕೇಂದ್ರ ಸರ್ಕಾರಕ್ಕೆ ಹಿಂದಿ ಭಾಷೆ ಮೇಲೆ ಇರುವ ಪ್ರೀತಿ ಮತ್ತು ಕನ್ನಡವೂ ಸೇರಿದಂತೆ ರಾಜ್ಯಭಾಷೆಗಳ ಮೇಲೆ ಇರುವ ತಾತ್ಸಾರ ಮನೋಭಾವದ ದುಷ್ಪರಿಣಾಮವನ್ನು ಕನ್ನಡಿಗರು ಈಗಾಗಲೇ ಅನುಭವಿಸಿದ್ದಾರೆ. ಉತ್ತರ ಭಾರತದ ಹಿಂದಿ ಭಾಷಿಗರಿಗೆ ನೆರವಾಗಬೇಕೆಂಬ ಏಕೈಕ ಉದ್ದೇಶದಿಂದ ಕೇಂದ್ರದ ಪರೀಕ್ಷೆಗಳಲ್ಲಿ ಹಿಂದಿ ಮತ್ತು ಇಂಗ್ಲೀಷ್‌ ಗೆ ಮಾತ್ರ ಅವಕಾಶ ನೀಡುವ ಕೇಂದ್ರದ ಭಾಷಾ ದಬ್ಬಾಳಿಕೆಯನ್ನು ಸಹಿಸಲು ಸಾಧ್ಯವೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಭಾರತ ರಾಜ್ಯಗಳ ಒಕ್ಕೂಟ, ಈ ರಾಜ್ಯಗಳು ಭಾಷೆಗಳ ಆಧಾರದಲ್ಲಿಯೇ ರಚನೆಯಾಗಿರುವುದನ್ನು ಮರೆಯಬಾರದು. ನಾವು ಹಿಂದಿಯನ್ನು ಭಾಷೆಯಾಗಿ ವಿರೋಧಿಸುವುದಿಲ್ಲ, ಹಿಂದಿಯನ್ನು ಕನ್ನಡದ ಮೇಲೆ ಹೇರುವುದನ್ನು ಮಾತ್ರ ಖಂಡಿತ ಸಹಿಸುವುದಿಲ್ಲ. ಆಳುವ ಪಕ್ಷದ ಸಂಸದರು ಪಕ್ಷದ ಮುಲಾಜಿಗೆ ಬಿದ್ದು ಕನ್ನಡಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತದೆ ಬಾಯಿ ಮುಚ್ಚಿಕೊಂಡಿರಬಹುದು, ಆದರೆ ಕನ್ನಡಿಗರು ಜಾಗೃತರಾಗಿದ್ದಾರೆ.

ಕನ್ನಡಿಗರು ಉದ್ಯೋಗಕ್ಕಾಗಿ, ಬಡ್ತಿಗಾಗಿ ಕೇಂದ್ರದ ಮುಂದೆ ಭಿಕ್ಷೆಗೆ ನಿಂತಿಲ್ಲ, ತಾವು ಶಿಕ್ಷಣ ಪಡೆದ ಭಾಷೆಯಲ್ಲೇ ತಮ್ಮ ಹಕ್ಕಿನ ಉದ್ಯೋಗ ಬಡ್ತಿಯನ್ನು ಕೇಳುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಕನ್ನಡ ಭಾಷಿಗರಿಗೆ ಭಾಷೆಯ ಹೆಸರಲ್ಲಿ ಅನ್ಯಾಯವಾಗದಂತೆ ಕೇಂದ್ರ ಸರ್ಕಾರ ನೋಡಿಕೊಳ್ಳಬೇಕು. ಪ್ರಧಾನಿ ನರೇಂದ್ರ ಮೋದಿ ಅವರೇ ಮಧ್ಯೆಪ್ರವೇಶಿಸಿ ಸಂಬಂಧಿತ ಇಲಾಖೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು.

ರದ್ದುಪಡಿಸಲಾದ ರೈಲ್ವೆ ಇಲಾಖೆಯ ಪರೀಕ್ಷೆಯನ್ನು ಕನ್ನಡದಲ್ಲಿಯೇ ಬರೆಯಲು ಅವಕಾಶ ಕಲ್ಪಿಸಿ ಶೀಘ್ರದಲ್ಲಿಯೇ ನಡೆಸಲು ಕ್ರಮಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Key words: Kannada, railway exam, cancelled, CM Siddaramaiah

The post ಕನ್ನಡ ಕಡೆಗಣನೆ, ರೈಲ್ವೆ ಇಲಾಖೆ ಪರೀಕ್ಷೆ ದಿಢೀರ್ ರದ್ದು: ಅನ್ಯಾಯ ಸರಿಪಡಿಸಲು ಸಿಎಂ ಸಿದ್ದರಾಮಯ್ಯ ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಂಪುಟ ಪುನಾರಚನೆ ವೇಳೆ ನಮಗೂ ಅವಕಾಶ ನೀಡಿ: ಸಿಎಂ ಸಿದ್ದರಾಮಯ್ಯಗೆ 16 ಶಾಸಕರಿಂದ ಮನವಿ

ಬೆಂಗಳೂರು,ಮಾರ್ಚ್,17,2026 (www.justkannada.in):  ಸಚಿವ ಸಂಪುಟ ಪುನಾರಚನೆ ವೇಳೆ ನಮಗೂ ಅವಕಾಶ ನೀಡಿ...

ಅಪರ ಸರ್ಕಾರಿ ವಕೀಲರ ಹುದ್ದೆ ಭರ್ತಿಗೆ ಅರ್ಜಿ ಅಹ್ವಾನ..

ಮಂಡ್ಯ,ಮಾರ್ಚ್,17,2026 (www.justkannada.in):  ಮಂಡ್ಯ ಜಿಲೆಯ ಮದ್ದೂರು ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ...

ಕೈಗಾರಿಕೆಗಳು ಹೊರ ಹೋಗುತ್ತಿರುವುದು ಮೂಲಭೂತ ಸೌಕರ್ಯಗಳ ಕೊರತೆಯಿಂದಲ್ಲ-ಸಚಿವ ಭೈರತಿ ಸುರೇಶ್

ಬೆಂಗಳೂರು,ಮಾರ್ಚ್,17,2026 (www.justkannada.in): ರಾಜ್ಯದ ಕೈಗಾರಿಕೆಗಳು ಮೂಲಭೂತ ಸೌರ್ಕಯಗಳ ಕೊರತೆಯಿಂದ ಹೊರಹೋಗುತ್ತಿಲ್ಲ. ವೈಯಕ್ತಿಕ...

ಸಿಎಂ ಸಿದ್ದರಾಮಯ್ಯರನ್ನ ಹೊಗಳಿದ ಜೆಡಿಎಸ್ MLC

ಬೆಂಗಳೂರು,ಮಾರ್ಚ್,17,2026 (www.justkannada.in):  ಸದನದಲ್ಲಿ ಸಿಎಂ ಸಿದ್ದರಾಮಯ್ಯರನ್ನು ವಿಧಾನಪರಿಷತ್ ಜೆಡಿಎಸ್ ಸದಸ್ಯ  ಎಸ್.ಎಲ್...