30
July, 2025

A News 365Times Venture

30
Wednesday
July, 2025

A News 365Times Venture

ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ 1.06 ಕೋಟಿ ರೂ. ಪರಿಹಾರ ವಿತರಣೆ

Date:

ಮೈಸೂರು, ಜುಲೈ 19, 2025 (www.justkannada.in): ನಿಗಮದ ಸಿಬ್ಬಂದಿ ಹಾಗೂ ಅಧಿಕಾರಿಗಳ ಆರೋಗ್ಯ ಮತ್ತು ಸುರಕ್ಷತೆಗೆ ಸದಾ ಬದ್ಧವಾಗಿರುವ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ಕರ್ತವ್ಯನಿರತ ವೇಳೆ ಪ್ರಾಣ ಕಳೆದುಕೊಂಡ ಕಿರಿಯ ಪವರ್ ಮ್ಯಾನ್ ಕುಟುಂಬಕ್ಕೆ 1.06 ಕೋಟಿ ರೂ. ಪರಿಹಾರದ ಚೆಕ್ ವಿತರಿಸಿದೆ.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಶನಿವಾರ ಸರ್ಕಾರದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶುಂಕುಸ್ಥಾಪನೆ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇಂಧನ ಸಚಿವ ಕೆ.ಜಾರ್ಜ್ ಅವರು ಇತ್ತೀಚೆಗೆ ಕರ್ತವ್ಯನಿರತದ ವೇಳೆ ಪ್ರಾಣಕಳೆದುಕೊಂಡ ಸೆಸ್ಕ್ ವ್ಯಾಪ್ತಿಯ ಪಾಂಡವಪುರ ಉಪ ವಿಭಾಗದ ಕಿರಿಯ ಪವರ್ ಮ್ಯಾನ್ ಮಹೇಶ್ (27 ವರ್ಷ) ಅವರ ಕುಟುಂಬಕ್ಕೆ 1.06 ಕೋಟಿ ರೂ.ಗಳ ಪರಿಹಾರದ ಚೆಕ್ ವಿತರಿಸಿದರು. ಮೃತ ಪವರ್ ಮ್ಯಾನ್ ಮಹೇಶ್ ಅವರ ತಂದೆ ಬೋರೇಗೌಡ ಅವರು ಪರಿಹಾರದ ಚೆಕ್ ಸ್ವೀಕರಿಸಿದರು.

ಇಂಧನ ಇಲಾಖೆಯ 447.73 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ವ್ಯಾಪ್ತಿಯಲ್ಲಿ ಸೆಸ್ಕ್ ಮತ್ತು ಕೆಪಿಟಿಸಿಎಲ್ ವತಿಯಿಂದ 408.95 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲಾಗಿರುವ ಪ್ರಮುಖ ಕಾಮಗಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ರಾಜ್ಯ ‌ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಇಂಧನ ಸಚಿವ ಕೆ.ಜೆ. ಜಾರ್ಜ್ ಅವರುಗಳ ಸಮ್ಮುಖದಲ್ಲಿ ಸೆಸ್ಕ್ ನ ನಾಲ್ಕು ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು.

ಪ್ರಮುಖವಾಗಿ ಸೆಸ್ಕ್ ವತಿಯಿಂದ ಮೈಸೂರು ನಗರ ವ್ಯಾಪ್ತಿಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 11 ಕೆವಿ ಓವರ್ ಹೆಡ್ ವಿದ್ಯುತ್ ಮಾರ್ಗವನ್ನು ಭೂಗತ ಕೇಬಲ್ ನಿಂದ ಬದಲಾಯಿಸುವುದು ಹಾಗೂ ಎಲ್.ಟಿ ಓವರ್ ಹೆಡ್ ವಿದ್ಯುತ್ ಮಾರ್ಗವನ್ನು ಏರಿಯಲ್ ಬಂಚ್ ಕೇಬಲ್ ನಿಂದ ಬದಲಿಸಲಾಗುತ್ತದೆ.

ಕೃಷ್ಣರಾಜ ವಿಧಾನಸಭಾ ಕ್ಷೇತ್ರ(118.97 ಕೋಟಿ ರೂ.ಗಳು), ಚಾಮರಾಜ ವಿಧಾನಸಭಾ ಕ್ಷೇತ್ರ(125.51 ಕೋಟಿ ರೂ.ಗಳು),  ನರಸಿಂಹರಾಜ ವಿಧಾನಸಭಾ ಕ್ಷೇತ್ರ(103.74 ಕೋಟಿ ರೂ.ಗಳು) ಹಾಗೂ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ 60.73 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಸದರಿ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ.

ಕೆಪಿಟಿಸಿಎಲ್ ನ 38.78 ಕೋಟಿ ರೂ.ಗಳ ಕಾಮಗಾರಿ

ಇದೇ ಸಂದರ್ಭದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ(ಕೆಪಿಟಿಸಿಎಲ್) ವತಿಯಿಂದ ಹುಣಸೂರು ತಾಲೂಕಿನಲ್ಲಿ ಕೈಗೊಳ್ಳಲಾಗುತ್ತಿರುವ 38.73 ಕೋಟಿ ರೂ.ಗಳ ಎರಡು ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಂಕುಸ್ಥಾಪನೆ ನೆರವೇರಿಸಿದರು. ಹುಣಸೂರು ತಾಲೂಕಿನ ಮನುಗನಹಳ್ಳಿಯಲ್ಲಿ 66/11ಕೆವಿ, 2X20 ಎಂವಿ ಉಪ ಕೇಂದ್ರ(20.41 ಕೋಟಿ ರೂ.ಗಳು) ಹಾಗೂ ಕಟ್ಟೆಮಳಲವಾಡಿಯಲ್ಲಿ 66/11ಕೆವಿ, 2X20 ಎಂವಿ ಉಪ ಕೇಂದ್ರ(18.32 ಕೋಟಿ ರೂ.ಗಳು) ನಿರ್ಮಾಣ ಕಾಮಗಾರಿಗಳು ಒಳಗೊಂಡಿದೆ.

ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷರೂ ಆಗಿರುವ ರಾಜ್ಯಸಭೆಯ ಪ್ರತಿಪಕ್ಷ‌ ನಾಯಕ ಮಲ್ಲಿಕಾರ್ಜುನ ಖರ್ಗೆ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಇಂಧನ ಸಚಿವರಾದ ಕೆ.ಜೆ.ಜಾರ್ಜ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಂ. ಮುನಿಗೋಪಾಲ್ ರಾಜು, ಮೈಸೂರು ವಿಭಾಗದ ಅಧೀಕ್ಷಕ ಇಂಜಿನಿಯರ್ ಸುನೀಲ್ ಮತ್ತಿತರರ ಇದ್ದರು.vtu

Key words: 1.06 crore, compensation, Power Man, CM, Siddaramaiah

The post ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ 1.06 ಕೋಟಿ ರೂ. ಪರಿಹಾರ ವಿತರಣೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಆರೋಪ: ಯಾವುದೇ ಸಾಕ್ಷಿ ನೀಡಿಲ್ಲ- ಸಚಿವ ಚಲುವರಾಯಸ್ವಾಮಿ

ಬೆಂಗಳೂರು,ಜುಲೈ,30,2025 (www.justkannada.in):  ರಸಗೊಬ್ಬರವನ್ನ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ವಿಪಕ್ಷದವರು ಆರೋಪ...

ಡ್ರಗ್ಸ್ ಮಾಫಿಯಾ ವಿರುದ್ದ ಕಾರ್ಯಾಚರಣೆ: ಖುದ್ದು ಫೀ‍ಲ್ಡ್ ಗಿಳಿದು ತಪಾಸಣೆ ನಡೆಸಿದ ಪೊಲೀಸ್ ಕಮಿಷನರ್

ಮೈಸೂರು,ಜುಲೈ,30,2025 (www.justkannada.in):  ಮೈಸೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ದ ಪೊಲೀಸರ ಕಾರ್ಯಾಚರಣೆ ಮುಂದುವರೆದಿದ್ದು...

ರಾಜ್ಯದಲ್ಲಿ ರಸಗೊಬ್ಬರ ಕೊರತೆ: ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಸಂಸದ ಡಾ.ಕೆ. ಸುಧಾಕರ್

ನವದೆಹಲಿ,ಜುಲೈ,30,2025 (www.justkannada.in): ರಾಜ್ಯದಲ್ಲಿ ರಸಗೊಬ್ಬರದ ಕೊರತೆಯುಂಟಾಗಿದ್ದು ರೈತರು ಪರದಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ...

ಮೋದಿ, ಬಿಎಸ್ ವೈ ಸೇರಿ ಬಿಜೆಪಿಯಿಂದ ಅಲ್ಪಸಂಖ್ಯಾತರಿಗೆ ಅನ್ಯಾಯವಾಗಿಲ್ಲ- ಬಿವೈ ವಿಜಯೇಂದ್ರ

ಬೆಂಗಳೂರು,ಜುಲೈ,30,2025 (www.justkannada.in): ಪ್ರಧಾನಿ ಮೋದಿ , ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ...